AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಕುರಿತು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಇಂಧನ ದರಗಳನ್ನು ಹೆಚ್ಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪದೇ ಪದೇ ಹೆಚ್ಚಿಸುವ ಮೂಲಕ ಸರ್ಕಾರವು ಗ್ರಾಹಕರ ಮೇಲೆ ಹೊರೆಯನ್ನು ಹೇರುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಸರ್ಕಾರವು ಹಣದುಬ್ಬರದ ಹೊರೆಯನ್ನು ಸಾರ್ವಜನಿಕರ ಮೇಲೆ ಹೇರಲು ಪ್ರಾರಂಭಿಸಿದೆ ಮತ್ತು ಸಾರ್ವಜನಿಕ ವಿರೋಧವನ್ನು ತಗ್ಗಿಸಲು ಹಂತ ಹಂತವಾಗಿ ಇಂಧನ ಬೆಲೆಗಳನ್ನು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
Rahul GandhiImage Credit source: PTI
ಸುಷ್ಮಾ ಚಕ್ರೆ
|

Updated on: May 25, 2026 | 3:36 PM

Share

ನವದೆಹಲಿ, ಮೇ 25: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಮುಖ್ಯಾಂಶಗಳು:

  • ಪೆಟ್ರೋಲ್-ಡೀಸೆಲ್ ಬೆಲೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
  • ಮೋದಿ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದ ಕಾಂಗ್ರೆಸ್
  • 15 ದಿನಗಳಿಂದ ಇಂಧನದ ಬೆಲೆಯಲ್ಲಿ ಭಾರೀ ಏರಿಕೆ

“ಹಣದುಬ್ಬರದ ಮನುಷ್ಯ ಪ್ರಧಾನಿ ಮೋದಿ ಜನರಿಗೆ ತಕ್ಷಣಕ್ಕೆ ತಿಳಿಯದಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಂತುಗಳಲ್ಲಿ ಹೆಚ್ಚಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಜೇಬಿನಿಂದ ಲೂಟಿ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೋದಿ, ಬಿಜೆಪಿ, ಆರ್​ಎಸ್​ಎಸ್ ದೇಶದ್ರೋಹಿಗಳು ಎಂದ ರಾಹುಲ್​​ಗೆ ಜೋಶಿ ತಿರುಗೇಟು

“ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಹಾಗೂ ಬೆಲೆ ಏರಿಕೆಯ ಬಿರುಗಾಳಿ ಬರಲಿದೆ ಎಂದು ನಾನು ಕೆಲವು ತಿಂಗಳುಗಳಿಂದ ಎಚ್ಚರಿಸುತ್ತಿದ್ದೆ. ಆದರೆ, ಮೋದಿ ಅವರು ಎಂದಿನಂತೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈಗ ಚುನಾವಣೆಗಳು ಮುಗಿಯುತ್ತಿದ್ದಂತೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬರೋಬ್ಬರಿ 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಚುನಾವಣೆಯ ಸಮಯದಲ್ಲಿ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವುದು, ಆ ನಂತರದ ಸಮಯದಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದೇ ಈ ಸರ್ಕಾರದ ಕೆಲಸ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ, ಭಾರತೀಯ ತೈಲ ಕಂಪನಿಗಳು ಮೇ 15ರಿಂದ ಸತತವಾಗಿ ಇಂಧನ ದರವನ್ನು ಪರಿಷ್ಕರಿಸುತ್ತಿವೆ. ಕೇವಲ 10 ದಿನಗಳಲ್ಲಿ ಒಟ್ಟಾರೆ ತೈಲ ಬೆಲೆ ಸುಮಾರು 7.50 ರೂ.ಗಳಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಜಗತ್ತಿಗೆ ಎದುರಾಗಿದೆ ಭೀಕರ ಬಡತನದ ಭೀತಿ, ಕೋವಿಡ್, ಯುದ್ಧ ಮತ್ತು ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಗಂಭೀರ ಎಚ್ಚರಿಕೆ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಸಹ ಕೇಂದ್ರದ ವಿರುದ್ಧ ಹರಿಹಾಯ್ದಿದ್ದು, ಇದನ್ನು “ಇಂಧನ ಲೂಟಿ” ಎಂದು ಕರೆದಿದ್ದಾರೆ. ಮೋದಿ ಸರ್ಕಾರವು ಸಾಮಾನ್ಯ ಜನರ ಉಳಿತಾಯದ ಹಣವನ್ನು ಸುಟ್ಟು ಹಾಕಲು ಪೆಟ್ರೋಲ್ ಚಿಮುಕಿಸುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಸಾರಿಗೆ ವೆಚ್ಚಗಳು ಹೆಚ್ಚಾಗಲಿದ್ದು, ಇದರ ನೇರ ಹೊರೆ ರೈತರು, ಸಣ್ಣ ಉದ್ಯಮಗಳು (MSME) ಮತ್ತು ಮಧ್ಯಮ ವರ್ಗದ ಕುಟುಂಬಗಳ ಬಜೆಟ್ ಮೇಲೆ ಬೀಳಲಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು