AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕರಿಗೆ ಅಧಿಕಾರವೇ ಇಲ್ಲ; ಪಾಟ್ನಾದಲ್ಲಿ ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪಾಟ್ನಾದ ಬಾಪು ಸಭಾಗರ್‌ನಲ್ಲಿ ನಡೆದ 'ಸಂವಿಧಾನ ಸುರಕ್ಷಾ ಸಮ್ಮೇಳನ'ವನ್ನು ಉದ್ದೇಶಿಸಿ ಇಂದು ಮಾತನಾಡಿದರು. ಕಳೆದ ವರ್ಷ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಬಿಹಾರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ. ಈ ವೇಳೆ ಅವರು ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕರಿಗೆ ಅಧಿಕಾರವೇ ಇಲ್ಲ; ಪಾಟ್ನಾದಲ್ಲಿ ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Rahul Gandhi In Patna
ಸುಷ್ಮಾ ಚಕ್ರೆ
|

Updated on: Jan 18, 2025 | 5:30 PM

Share

ಪಾಟ್ನಾ: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಬಿಹಾರದ ಪಾಟ್ನಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಂವಿಧಾನ ಸುರಕ್ಷಾ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರತಿಯೊಂದು ಸಂಘಟನೆಯಲ್ಲೂ ಆರ್​ಎಸ್​ಎಸ್​ನ ಜನರಿದ್ದಾರೆ. ಇಂದಿನ ಭಾರತದಲ್ಲಿ ಶಾಸಕರು ಮತ್ತು ಸಂಸದರಿಗೆ ಯಾವುದೇ ಅಧಿಕಾರವಿಲ್ಲದಂತಾಗಿದೆ ಎಂದು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗಳನ್ನು ಟೀಕಿಸಿದ ರಾಹುಲ್ ಗಾಂಧಿ, ಆರ್​ಎಸ್​ಎಸ್​ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅಳಿಸಿಹಾಕಿದೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಹಿಂದುಳಿದ ಸಮುದಾಯದ ಪ್ರಾತಿನಿಧ್ಯವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರದ 90 ಹಿರಿಯ ಅಧಿಕಾರಿಗಳು ದೇಶದ ಬಜೆಟ್‌ನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅವರಲ್ಲಿ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಭಾಗವಹಿಸುವಿಕೆ ಶೇ.10ರಷ್ಟು ಕೂಡ ಇಲ್ಲ. ಆದರೆ, ಭಾರತದ ಜನಸಂಖ್ಯೆಯಲ್ಲಿ ಈ ವರ್ಗಗಳ ಪಾಲು ಶೇ.90ರಷ್ಟಿದೆ” ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ನ ಕೊಳಕು ಸತ್ಯ ಬಯಲು; ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತಿರುಗೇಟು

ದೇಶಾದ್ಯಂತ ಜಾತಿ ಜನಗಣತಿ ನಡೆಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದರು. ಅದಕ್ಕೆ ಅನುಗುಣವಾಗಿ ದೇಶವನ್ನು ಅಭಿವೃದ್ಧಿ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಜಾತಿಗಣತಿ ಪ್ರತಿಯೊಂದು ಜಾತಿಯಲ್ಲೂ ಎಷ್ಟು ಜನಸಂಖ್ಯೆ ಇದೆ ಮತ್ತು ಅಧಿಕಾರಶಾಹಿ, ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಆ ಜಾತಿಯವರು ಎಷ್ಟು ಭಾಗವಹಿಸುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಗಂಗಾ ನೀರು ಎಲ್ಲೆಡೆ ಹರಿಯುವಂತೆಯೇ, ಸಂವಿಧಾನದ ಸಿದ್ಧಾಂತವು ದೇಶದ ಪ್ರತಿಯೊಬ್ಬ ವ್ಯಕ್ತಿ, ಪ್ರತಿಯೊಂದು ಸಂಸ್ಥೆಯನ್ನು ತಲುಪಬೇಕೆಂದು ನಾವು ಬಯಸಿದ್ದೇವೆ. ಕೆಲವು ದಿನಗಳ ಹಿಂದೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾರತಕ್ಕೆ ಆಗಸ್ಟ್ 15, 1947ರಂದು ಸ್ವಾತಂತ್ರ್ಯ ಸಿಗಲಿಲ್ಲ ಅದರ ಬದಲಾಗಿ ರಾಮಮಂದಿರ ನಿರ್ಮಾಣವಾದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳಿದ್ದರು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾರತಕ್ಕೆ ಆಗಸ್ಟ್ 15, 1947ರಂದು ಸ್ವಾತಂತ್ರ್ಯ ಸಿಗಲಿಲ್ಲ ಎಂದು ಹೇಳಿದ ಮೇಲೆ ಅವರು ಭಾರತದ ಸಂವಿಧಾನವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಅರ್ಥ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾರತದ ಪ್ರತಿಯೊಂದು ಸಂಸ್ಥೆಯಿಂದ ಡಾ. ಬಿ.ಆರ್. ಅಂಬೇಡ್ಕರ್, ಭಗವಾನ್ ಬುದ್ಧ, ಮಹಾತ್ಮ ಗಾಂಧಿಯವರ ಸಿದ್ಧಾಂತವನ್ನು ಅಳಿಸಿಹಾಕುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ