AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡ ಮಾತ್ರ ಬೆಳಸಲು ಸಾಧ್ಯ, ಪ್ರಧಾನಿಯಾಗಲು ಸಾಧ್ಯವಿಲ್ಲ: ಸಾಮ್ರಾಟ್ ಚೌಧರಿ

ಬಿಜೆಪಿ ಪಕ್ಷದ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ರಾಹುಲ್ ಗಾಂಧಿಯನ್ನು ಹತ್ಯೆಯಾದ ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ, ಕೇವಲ ಗಡ್ಡವನ್ನು ಬೆಳೆಸುವುದರಿಂದ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡ ಮಾತ್ರ ಬೆಳಸಲು ಸಾಧ್ಯ, ಪ್ರಧಾನಿಯಾಗಲು ಸಾಧ್ಯವಿಲ್ಲ: ಸಾಮ್ರಾಟ್ ಚೌಧರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 10, 2023 | 6:05 PM

Share

ಅರಾರಿಯಾ: ಕಾಂಗ್ರೆಸ್​ ಪಕ್ಷದ ನಾಯಕ ರಾಹುಲ್​​ ಗಾಂಧಿ (Rahul Gandhi) ಅವರನ್ನು ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ. ಬಿಜೆಪಿ ಪಕ್ಷದ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ರಾಹುಲ್ ಗಾಂಧಿಯನ್ನು ಹತ್ಯೆಯಾದ ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ, ಕೇವಲ ಗಡ್ಡವನ್ನು ಬೆಳೆಸುವುದರಿಂದ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ , ರಾಹುಲ್ ಗಾಂಧಿ ಅವರು ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡವನ್ನು ಬೆಳೆಸುತ್ತಾರೆ ಮತ್ತು ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಆಗುತ್ತಾರೆ ಎಂದು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಭಾರತ್​ ಜೋಡೋ ಯಾತ್ರೆಯ ಸಮಯದಲ್ಲಿ ಗಡ್ಡವನ್ನು ಬಿಟ್ಟು, ಎಲ್ಲರ ಮುಂದೆ ಪ್ರದರ್ಶನ ಮಾಡಿದ್ದಾರೆ. ರ್ಯಾಲಿ ಮುಗಿದ ನಂತರ ಗಡ್ಡ ಕತ್ತರಿಸಿದ್ದಾರೆ ಎಂದು ಸಾಮ್ರಾಟ್ ಚೌಧರಿಯವರ ಟೀಕಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ಸಾಮ್ರಾಟ್ ಚೌಧರಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:Rahul Gandhi: ಯುಎಸ್​​​ಗೆ ರಾಹುಲ್​​ ಗಾಂಧಿ ಭೇಟಿ, ಸೋನಿಯಾ ಗಾಂಧಿಯವರ ಭಾವಚಿತ್ರ ನೀಡಿದ ಕಲಾವಿದೆ

ನಿತೀಶ್ ಕುಮಾರ್ ಅವರು ದೇಶದ ಪ್ರಧಾನಿ ಎಂದು ಎಲ್ಲರಿಗೂ ಹೇಳುತ್ತಾ ದೇಶ ಸುತ್ತುತ್ತಿದ್ದಾರೆ. ನಿತೀಶ್ ಕುಮಾರ್ ಪ್ರಧಾನಿಯಾ? ಎಂದಾಗ ಸೇರಿದ ಸಭೆಯಲ್ಲಿ ಜೋರಾಗಿ ಹರ್ಷೋದ್ಗಾರ ಕೇಳಿ ಬಂದಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಈ ತಿಂಗಳ ಕೊನೆಯಲ್ಲಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆಯನ್ನು ಆಯೋಜಿಸಿದ್ದಾರೆ.

ನಿತೀಶ್ ಕುಮಾರ್ ಕಳೆದ ವರ್ಷ ಕಾಂಗ್ರೆಸ್, ಆರ್‌ಜೆಡಿ ಮತ್ತು ಎಡಪಕ್ಷಗಳನ್ನು ಒಳಗೊಂಡ ‘ಮಹಾಘಟಬಂಧನ್’ಗೆ ಸೇರಲು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದರು. ಈ ಹಿಂದೆ ನವೆಂಬರ್ 2022ರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ