ಅರಾರಿಯಾ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ. ಬಿಜೆಪಿ ಪಕ್ಷದ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ರಾಹುಲ್ ಗಾಂಧಿಯನ್ನು ಹತ್ಯೆಯಾದ ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ, ಕೇವಲ ಗಡ್ಡವನ್ನು ಬೆಳೆಸುವುದರಿಂದ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ , ರಾಹುಲ್ ಗಾಂಧಿ ಅವರು ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡವನ್ನು ಬೆಳೆಸುತ್ತಾರೆ ಮತ್ತು ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಆಗುತ್ತಾರೆ ಎಂದು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಗಡ್ಡವನ್ನು ಬಿಟ್ಟು, ಎಲ್ಲರ ಮುಂದೆ ಪ್ರದರ್ಶನ ಮಾಡಿದ್ದಾರೆ. ರ್ಯಾಲಿ ಮುಗಿದ ನಂತರ ಗಡ್ಡ ಕತ್ತರಿಸಿದ್ದಾರೆ ಎಂದು ಸಾಮ್ರಾಟ್ ಚೌಧರಿಯವರ ಟೀಕಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ಸಾಮ್ರಾಟ್ ಚೌಧರಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:Rahul Gandhi: ಯುಎಸ್ಗೆ ರಾಹುಲ್ ಗಾಂಧಿ ಭೇಟಿ, ಸೋನಿಯಾ ಗಾಂಧಿಯವರ ಭಾವಚಿತ್ರ ನೀಡಿದ ಕಲಾವಿದೆ
ನಿತೀಶ್ ಕುಮಾರ್ ಅವರು ದೇಶದ ಪ್ರಧಾನಿ ಎಂದು ಎಲ್ಲರಿಗೂ ಹೇಳುತ್ತಾ ದೇಶ ಸುತ್ತುತ್ತಿದ್ದಾರೆ. ನಿತೀಶ್ ಕುಮಾರ್ ಪ್ರಧಾನಿಯಾ? ಎಂದಾಗ ಸೇರಿದ ಸಭೆಯಲ್ಲಿ ಜೋರಾಗಿ ಹರ್ಷೋದ್ಗಾರ ಕೇಳಿ ಬಂದಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಈ ತಿಂಗಳ ಕೊನೆಯಲ್ಲಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆಯನ್ನು ಆಯೋಜಿಸಿದ್ದಾರೆ.
ನಿತೀಶ್ ಕುಮಾರ್ ಕಳೆದ ವರ್ಷ ಕಾಂಗ್ರೆಸ್, ಆರ್‌ಜೆಡಿ ಮತ್ತು ಎಡಪಕ್ಷಗಳನ್ನು ಒಳಗೊಂಡ ‘ಮಹಾಘಟಬಂಧನ್’ಗೆ ಸೇರಲು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದರು. ಈ ಹಿಂದೆ ನವೆಂಬರ್ 2022ರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ