Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi Twitter Bio: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಟ್ವಿಟ್ಟರ್ ಬಯೋ ಬದಲಾಯಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ(Rahul Gandhi)ಯು ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ತಮ್ಮ ಟ್ವಿಟ್ಟರ್ ಖಾತೆಯ ಬಯೋವನ್ನು ಕೂಡ ಬದಲಾಯಿಸಿದ್ದಾರೆ. ತಮ್ಮ ಬಯೋದಲ್ಲಿ Dis'Qualified MP ಎಂದು ಬದಲಾಯಿಸಿದ್ದಾರೆ.

Rahul Gandhi Twitter Bio: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಟ್ವಿಟ್ಟರ್ ಬಯೋ ಬದಲಾಯಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Mar 26, 2023 | 11:08 AM

ರಾಹುಲ್ ಗಾಂಧಿ(Rahul Gandhi)ಯು ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ತಮ್ಮ ಟ್ವಿಟ್ಟರ್ ಖಾತೆಯ ಬಯೋವನ್ನು ಕೂಡ ಬದಲಾಯಿಸಿದ್ದಾರೆ. ತಮ್ಮ ಬಯೋದಲ್ಲಿ Dis’Qualified MP ಎಂದು ಬದಲಾಯಿಸಿದ್ದಾರೆ. ಅಂದರೆ  ಅನರ್ಹ ಸಂಸದ ಎಂದು ತಾವೇ ಬರೆದುಕೊಂಡಿದ್ದಾರೆ. ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಅದೇ ಸಮಯದಲ್ಲಿ, ಈಗ ತಮ್ಮ ಬಯೋದಲ್ಲಿ, ರಾಹುಲ್ ತಮ್ಮನ್ನು ಅನರ್ಹ ಸಂಸದ ಎಂದು ಕರೆದುಕೊಂಡಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಇಂದು ಒಂದು ದಿನದ ‘ಸಂಕಲ್ಪ ಸತ್ಯಾಗ್ರಹ’ ಮಾಡುತ್ತಿದೆ. 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಮತ್ತಷ್ಟು ಓದಿ: Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ, ರಾಜ್​ಘಾಟ್​ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ