AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಚುನಾವಣೆಗೂ ಮುನ್ನ ದಿಢೀರನೆ 70 ಲಕ್ಷ ಹೊಸ ಮತದಾರರ ಸೇರ್ಪಡೆ; ರಾಹುಲ್ ಗಾಂಧಿ ಆರೋಪ

ಸಂಸತ್ ಅಧಿವೇಶನದಲ್ಲಿ ಇಂದು ಭಾಷಣ ಮಾಡಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೇಕ್ ಇನ್ ಇಂಡಿಯಾ ವಿಫಲವಾಗಿದ್ದರಿಂದಲೇ ಭಾರತದಲ್ಲಿ ಚೀನಾ ಪ್ರಾಬಲ್ಯ ಹೆಚ್ಚಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ. ಹಾಗೇ, ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸುಷ್ಮಾ ಚಕ್ರೆ
|

Updated on:Feb 03, 2025 | 5:26 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಮತದಾರರ ನೋಂದಣಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ ಎಂದು ರಾಹುಲ್ ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿನ ದಿಢೀರ್ ಮತದಾರರ ಹೆಚ್ಚಳವು ಹಿಮಾಚಲ ಪ್ರದೇಶದ ಸಂಪೂರ್ಣ ಮತದಾರರ ಜನಸಂಖ್ಯೆಗೆ ಸಮಾನವಾಗಿದೆ ಎಂದು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಕಳೆದ 5 ವರ್ಷಗಳಲ್ಲಿ ಸೇರ್ಪಡೆಯಾದ ಮತದಾರರಿಗಿಂತ ಚುನಾವಣೆಗೂ ಹಿಂದಿನ 5 ತಿಂಗಳಲ್ಲಿ ಹೆಚ್ಚಿನ ಮತದಾರರನ್ನು ಸೇರಿಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಹೊಸ ಮತದಾರರ ನೋಂದಣಿಗಳಲ್ಲಿ ಹೆಚ್ಚಿನವು ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಿ ಹೇಳಿದರು. ಈ ಬಗ್ಗೆ ವಿವರವಾದ ವಿಶ್ಲೇಷಣೆಗಾಗಿ ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿಗೆ ಲೋಕಸಭಾ ಚುನಾವಣೆಯ ಎಲೆಕ್ಟ್ರಾನಿಕ್ ಮತದಾರರ ಪಟ್ಟಿಗಳನ್ನು ಒದಗಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ನಿರುದ್ಯೋಗ ಹೋಗಲಾಡಿಸಲು ನಮ್ಮ ಸರ್ಕಾರಕ್ಕೂ ಆಗಲಿಲ್ಲ, ಮೋದಿಗೂ ಸಾಧ್ಯವಾಗಲಿಲ್ಲ; ರಾಹುಲ್ ಗಾಂಧಿ

“ಚುನಾವಣಾ ಆಯೋಗ ದಯವಿಟ್ಟು ಲೋಕಸಭೆಯಲ್ಲಿರುವ ಎಲ್ಲಾ ಮತದಾರರ ಮತ್ತು ವಿಧಾನಸಭಾ ಸಭೆಯಲ್ಲಿರುವ ಎಲ್ಲಾ ಮತದಾರರ ಹೆಸರುಗಳು ಮತ್ತು ವಿಳಾಸಗಳು ಮತ್ತು ಮತಗಟ್ಟೆಗಳನ್ನು ನಮಗೆ ನೀಡಬೇಕು. ಇದರಿಂದ ಈ ಹೊಸ ಮತದಾರರು ಯಾರು ಎಂದು ನಾವು ಲೆಕ್ಕ ಹಾಕಬಹುದು. ಕುತೂಹಲಕಾರಿಯಾಗಿ ಹೊಸ ಮತದಾರರು ಹೆಚ್ಚಾಗಿ ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿದ್ದಾರೆ. ನಾನು ಇನ್ನೂ ಯಾವುದೇ ಆರೋಪ ಮಾಡುತ್ತಿಲ್ಲ. ಚುನಾವಣಾ ಆಯೋಗವು ಡೇಟಾವನ್ನು ನೀಡಬೇಕು ಎಂದು ನಾನು ಸದನದಲ್ಲಿ ಹೇಳುತ್ತಿದ್ದೇನೆ” ಎಂದು ರಾಹುಲ್ ಹೇಳಿದರು.

ಇದರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಅಧ್ಯಕ್ಷರ ಪ್ರಮಾಣವಚನ ಸಮಾರಂಭದ ಆಹ್ವಾನವನ್ನು ಪಡೆಯಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಅಮೆರಿಕಕ್ಕೆ ಕಳುಹಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಇದು ಬಿಜೆಪಿಯಿಂದ ಭಾರೀ ಟೀಕೆಗೆ ಕಾರಣವಾಯಿತು. ಈ ಬಾರಿ ಡೊನಾಲ್ಡ್​ ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ಸಚಿವ ಜೈಶಂಕರ್ ಭಾಗವಹಿಸಿದ್ದರು. ಫೆಬ್ರವರಿ ತಿಂಗಳಲ್ಲಿ ಮೋದಿ ಅಮೆರಿಕಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Mon, 3 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ