ನವದೆಹಲಿ: ಲೋಕಸಭೆಯಲ್ಲಿ ಇತ್ತೀಚೆಗೆ ಬಿಜೆಪಿಯ ‘ಚಕ್ರವ್ಯೂಹ’ದ ಕುರಿತು ಭಾಷಣ ಮಾಡಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ 54 ವರ್ಷದ ನಾಯಕ ರಾಹುಲ್ ಗಾಂಧಿ ಅವರು ಇಡಿಯೊಳಗಿನ ಮೂಲಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಕೇಂದ್ರ ತನಿಖಾ ಸಂಸ್ಥೆಯಿಂದ ತನ್ನ ವಿರುದ್ಧ ದಾಳಿಯನ್ನು ಪ್ಲಾನ್ ಮಾಡುತ್ತಿರುವುದನ್ನು ಸೂಚಿಸುತ್ತದೆ. ಅಂತಹ ಕ್ರಮದ ಸಾಧ್ಯತೆಯ ಹೊರತಾಗಿಯೂ ರಾಹುಲ್ ಗಾಂಧಿಯವರು ನಾನು ಇಡಿ ಅಧಿಕಾರಿಗಳನ್ನು ತೆರೆದ ತೋಳುಗಳಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಲೋಕಸಭೆಯ ಅಧಿವೇಶನದಲ್ಲಿ ಮಾತನಾಡುವಾಗ 6 ಜನರ ಚಕ್ರವ್ಯೂಹದಲ್ಲಿ ಆಧುನಿಕ ಭಾರತ ಸಿಲುಕಿದೆ ಎಂದಿದ್ದರು. ನನ್ನ ಭಾಷಣದ ನಂತರ ಇಡಿ ದಾಳಿಗೆ ಪ್ಲಾನ್ ಮಾಡಲಾಗಿದೆ. ಇಡಿ ಅಧಿಕಾರಿಗಳನ್ನು ಚಹಾ ಮತ್ತು ಬಿಸ್ಕತ್ ಜೊತೆಗೆ ನಾನು ತೆರೆದ ತೋಳುಗಳಿಂದ ಸ್ವಾಗತಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಇದನ್ನೂ ಓದಿ: ಮುಂಗಾರು ಅಧಿವೇಶನ ಕಲಾಪ; ಯುಟಿ ಖಾದರ್ ನಡೆಗೆ ಪತ್ರದ ಮೂಲಕ ಅಸಮಾಧಾನ ಹೊರ ಹಾಕಿದ ಶಾಸಕರು
ಜುಲೈ 29 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಚರ್ಚೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣವಾದ ಟೀಕೆಯನ್ನು ಪ್ರಾರಂಭಿಸಲು ಪ್ರಾಚೀನ ಭಾರತೀಯ ಮಹಾಕಾವ್ಯ ಮಹಾಭಾರತದ ‘ಚಕ್ರವ್ಯೂಹ’ ಪರಿಕಲ್ಪನೆಯನ್ನು ಬಳಸಿದರು. ಮಹಾಕಾವ್ಯದ ಕಾರ್ಯತಂತ್ರದ ಯುದ್ಧ ಮತ್ತು ಪ್ರಸ್ತುತ ರಾಜಕೀಯಕ್ಕೂ ಮಹಾಭಾರತಕ್ಕೂ ಸಂಬಂಧ ಕಲ್ಪಿಸಿದ್ದರು.
Apparently, 2 in 1 didn’t like my Chakravyuh speech. ED ‘insiders’ tell me a raid is being planned.
Waiting with open arms @dir_ed…..Chai and biscuits on me.
— Rahul Gandhi (@RahulGandhi) August 1, 2024
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ತಡೆಯಲು ತೆಗೆದುಕೊಂಡ ಕ್ರಮದ ಬಗ್ಗೆ ಲೋಕಸಭೆಯಲ್ಲಿ ಗೃಹ ಸಚಿವಾಲಯ ಸ್ಪಷ್ಟನೆ
ಸಾವಿರಾರು ವರ್ಷಗಳ ಹಿಂದೆ ಕುರುಕ್ಷೇತ್ರದಲ್ಲಿ 6 ಜನ ಅಭಿಮನ್ಯುವನ್ನು ‘ಚಕ್ರವ್ಯೂಹ’ದಲ್ಲಿ ಸಿಲುಕಿಸಿ ಕೊಂದಿದ್ದರು. ಸ್ವಲ್ಪ ಸಂಶೋಧನೆ ಮಾಡಿ ‘ಚಕ್ರವ್ಯೂಹ’ಕ್ಕೆ ‘ಪದ್ಮವ್ಯೂಹ’ ಎಂದೂ ಹೆಸರಿದೆ ಎಂದು ನಾನು ತಿಳಿದುಕೊಂಡಿದ್ದೇನೆ. ಅಂದರೆ ‘ಕಮಲ ರಚನೆ’ ಎಂದರ್ಥ. 21ನೇ ಶತಮಾನದಲ್ಲಿ ಕಮಲದ ಚಿಹ್ನೆಯ ಜೊತೆಗೆ 6 ಜನರು ಚಕ್ರವ್ಯೂಹದ ಮೂಲಕ ಭಾರತದ ಜನರನ್ನು ಕಟ್ಟಿಹಾಕಲಾಗಿದೆ ಎಂದಿದ್ದರು.
ನರೇಂದ್ರ ಮೋದಿ, ಅಮಿತ್ ಶಾ ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಈ 6 ಜನರು ಚಕ್ರವ್ಯೂಹ ರಚಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ