Rahul Gandhi: ತೆಲಂಗಾಣದ ಬುಡಕಟ್ಟು ಕಲಾವಿದರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 9ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಈ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

Rahul Gandhi: ತೆಲಂಗಾಣದ ಬುಡಕಟ್ಟು ಕಲಾವಿದರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಡ್ಯಾನ್ಸ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 03, 2022 | 12:35 PM

ಹೈದರಾಬಾದ್: ಕಳೆದ ವಾರ ಬುಡಕಟ್ಟು ಸಮುದಾಯದೊಂದಿಗೆ ಕೊಮ್ಮು ನೃತ್ಯ ಪ್ರದರ್ಶಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಬುಧವಾರ ಆಂಧ್ರಪ್ರದೇಶ, ತೆಲಂಗಾಣ ಮತ್ತು ದಕ್ಷಿಣ ಒಡಿಶಾದ ಸಮುದಾಯಗಳ ಸಾಂಪ್ರದಾಯಿಕ ಜಾನಪದ ನೃತ್ಯವಾದ ದಿಮ್ಸಾ ಪ್ರದರ್ಶಿಸಿದ್ದಾರೆ. ಆಂಧ್ರದ ಇತರ ಜಾನಪದ ಕಲಾವಿದರೊಂದಿಗೆ ರಾಹುಲ್ ಗಾಂಧಿ ಡೋಲು ಬಾರಿಸಿ, ನೃತ್ಯ ಮಾಡಿದ್ದಾರೆ.

ಅಕ್ಟೋಬರ್ 29ರಂದು ಭದ್ರಾಚಲಂನಲ್ಲಿ ಆದಿವಾಸಿಗಳೊಂದಿಗೆ ಕೊಮ್ಮು ನೃತ್ಯದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ಈ ಬಾರಿ ಬುಡಕಟ್ಟು ಸಮುದಾಯದ ಶಿರಸ್ತ್ರಾಣವನ್ನು ಧರಿಸಿರಲಿಲ್ಲ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 9ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಈ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಬುಧವಾರ ತೆಲಂಗಾಣದ ರಸ್ತೆಯೊಂದು ಯುವ ಬ್ಯಾಟರ್‌ಗೆ ರಾಹುಲ್ ಗಾಂಧಿ ಬೌಲಿಂಗ್ ಮಾಡಿದ್ದರಿಂದ ಆ ರಸ್ತೆ ಸ್ವಲ್ಪ ಸಮಯದವರೆಗೆ ಕ್ರಿಕೆಟ್ ಪಿಚ್ ಆಗಿ ಮಾರ್ಪಟ್ಟಿತು. ರಾಹುಲ್ ಗಾಂಧಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: Rahul Gandhi: ಪುಟ್ಟ ಬಾಲಕನಿಗೆ ಕರಾಟೆ ಕಲಿಸಿದ ರಾಹುಲ್ ಗಾಂಧಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಲೇವಡಿ

ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಸೇರಿಕೊಂಡು ಇಂದು ಬೆಳಗ್ಗೆಯಿಂದ ರಾಹುಲ್ ಗಾಂಧಿ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿದ್ದರು. ಭಾರತ್ ಜೋಡೋ ಯಾತ್ರೆಯು ನವೆಂಬರ್ 7ರಂದು ಮಹಾರಾಷ್ಟ್ರವನ್ನು ಪ್ರವೇಶಿಸುವ ಮೊದಲು ತೆಲಂಗಾಣದಲ್ಲಿ ಒಟ್ಟು 375 ಕಿ.ಮೀ ದೂರವನ್ನು ವ್ಯಾಪಿಸಿರುವ ತೆಲಂಗಾಣದ 19 ಅಸೆಂಬ್ಲಿ ಮತ್ತು 7 ಸಂಸದೀಯ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಈ ಯಾತ್ರೆಯು ನವೆಂಬರ್ 4ರಂದು ಒಂದು ದಿನದ ವಿರಾಮವನ್ನು ತೆಗೆದುಕೊಳ್ಳುತ್ತದೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬುಧವಾರ ಹೈದರಾಬಾದ್‌ನಲ್ಲಿದ್ದು, ಅಲ್ಲಿ ಬಾಲಿವುಡ್ ನಟಿ ಪೂಜಾ ಭಟ್ ಅವರು ಕಾಂಗ್ರೆಸ್ ನಾಯಕಿಯೊಂದಿಗೆ ಸೇರಿಕೊಂಡು ಸುಮಾರು 10.5 ಕಿ.ಮೀ. ನಡೆದಿದ್ದಾರೆ. ಮಂಗಳವಾರ ಹೈದರಾಬಾದ್‌ನ ಚಾರ್ಮಿನಾರ್‌ನಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕಿರುಕುಳ ಆರೋಪದ ನಂತರ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ವೇಮುಲಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಬುಧವಾರವೂ ರಾಹುಲ್ ಗಾಂಧಿ ಪಟಂಚೇರುವಿನಲ್ಲಿ 5ನೇ ತರಗತಿ ವಿದ್ಯಾರ್ಥಿಯೊಂದಿಗೆ ಕ್ರಿಕೆಟ್ ಆಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ