AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಪುಟ್ಟ ಬಾಲಕನಿಗೆ ಕರಾಟೆ ಕಲಿಸಿದ ರಾಹುಲ್ ಗಾಂಧಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಲೇವಡಿ

Bharat Jodo Yatra: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರಾಟೆ ಮಾಡುತ್ತಿದ್ದ ಬಾಲಕನೊಂದಿಗೆ ಮಾತುಕತೆ ನಡೆಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಕರಾಟೆ ಪಂಚ್​​ಗಳನ್ನು ಪ್ರದರ್ಶಿಸಿದ ಆ ಬಾಲಕನ ಕರಾಟೆ ತಂತ್ರಗಳನ್ನು ರಾಹುಲ್ ಗಾಂಧಿ ಸರಿಪಡಿಸಿದ್ದಾರೆ.

Rahul Gandhi: ಪುಟ್ಟ ಬಾಲಕನಿಗೆ ಕರಾಟೆ ಕಲಿಸಿದ ರಾಹುಲ್ ಗಾಂಧಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಲೇವಡಿ
ಬಾಲಕನಿಗೆ ಕರಾಟೆ ಕಲಿಸಿದ ರಾಹುಲ್ ಗಾಂಧಿ
TV9 Web
| Edited By: |

Updated on: Nov 03, 2022 | 11:10 AM

Share

ನವದೆಹಲಿ: ಭಾರತ್ ಜೋಡೋ ಯಾತ್ರೆಯ (Bharat Jodo Yatra) ಪಾದಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಜನಸಾಮಾನ್ಯರ ಜೊತೆ ಬೆರೆತು, ಅವರೊಂದಿಗೆ ಕಾಲ ಕಳೆಯುತ್ತಾ ಮುಂದೆ ಸಾಗುತ್ತಿದ್ದಾರೆ. ಗುರುವಾರ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕೆಲವು ಕ್ಷಣವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ರಾಹುಲ್ ಗಾಂಧಿ ಎದುರು ಚಿಕ್ಕ ಬಾಲಕನೊಬ್ಬ ಕರಾಟೆ ಪ್ರದರ್ಶಿಸುವಾಗ ರಾಹುಲ್ ಗಾಂಧಿ ಆ ಬಾಲಕನ ಕರಾಟೆ ಪಟ್ಟುಗಳನ್ನು ಸರಿಪಡಿಸುತ್ತಿರುವ ವಿಡಿಯೋವನ್ನು ಕಾಂಗ್ರೆಸ್ (Congress) ಟ್ವಿಟ್ಟರ್​​ನಲ್ಲಿ ಶೇರ್ ಮಾಡಿಕೊಂಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರಾಟೆ ಮಾಡುತ್ತಿದ್ದ ಬಾಲಕನೊಂದಿಗೆ ಮಾತುಕತೆ ನಡೆಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಕರಾಟೆ ಪಂಚ್​​ಗಳನ್ನು ಪ್ರದರ್ಶಿಸಿದ ಆ ಬಾಲಕನ ಕರಾಟೆ ತಂತ್ರಗಳನ್ನು ರಾಹುಲ್ ಗಾಂಧಿ ಸರಿಪಡಿಸಿದ್ದಾರೆ. ಈ ವಿಡಿಯೋವನ್ನು ಶೇರ್ ಮಾಡಿರುವ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೀಗೆ ಬರೆದುಕೊಂಡಿದೆ. “ತಂತ್ರವು ತಪ್ಪಾಗಿದ್ದರೆ ದೇಶವು ವಿನಾಶದ ಹಾದಿಗೆ ಹೋಗುತ್ತದೆ. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದೆ. ರಾಹುಲ್ ಗಾಂಧಿ ಅವರು ಮಗುವಿಗೆ ಸರಿಯಾದ ತಂತ್ರವನ್ನು ತೋರಿಸಿಕೊಟ್ಟಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಬಿಜೆಪಿ ವಿರುದ್ಧ ಲೇವಡಿ ಮಾಡಿದೆ.

ಇದನ್ನೂ ಓದಿ: Rahul Gandhi: ಇಂದಿರಾ ಗಾಂಧಿ ಭಾರತಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಈ ದೇಶವನ್ನು ಒಡೆಯಲು ಬಿಡುವುದಿಲ್ಲ; ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬುಧವಾರ ಹೈದರಾಬಾದ್‌ನಲ್ಲಿದ್ದು, ಅಲ್ಲಿ ಬಾಲಿವುಡ್ ನಟಿ ಪೂಜಾ ಭಟ್ ಅವರು ಕಾಂಗ್ರೆಸ್ ನಾಯಕಿಯೊಂದಿಗೆ ಸೇರಿಕೊಂಡು ಸುಮಾರು 10.5 ಕಿ.ಮೀ. ನಡೆದಿದ್ದಾರೆ. ಮಂಗಳವಾರ ಹೈದರಾಬಾದ್‌ನ ಚಾರ್ಮಿನಾರ್‌ನಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕಿರುಕುಳ ಆರೋಪದ ನಂತರ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ವೇಮುಲಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಬುಧವಾರವೂ ರಾಹುಲ್ ಗಾಂಧಿ ಪಟಂಚೇರುವಿನಲ್ಲಿ 5ನೇ ತರಗತಿ ವಿದ್ಯಾರ್ಥಿಯೊಂದಿಗೆ ಕ್ರಿಕೆಟ್ ಆಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್