ನವದೆಹಲಿ: ಭಾರತ್ ಜೋಡೋ ಯಾತ್ರೆಯ (Bharat Jodo Yatra) ಪಾದಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಜನಸಾಮಾನ್ಯರ ಜೊತೆ ಬೆರೆತು, ಅವರೊಂದಿಗೆ ಕಾಲ ಕಳೆಯುತ್ತಾ ಮುಂದೆ ಸಾಗುತ್ತಿದ್ದಾರೆ. ಗುರುವಾರ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕೆಲವು ಕ್ಷಣವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ರಾಹುಲ್ ಗಾಂಧಿ ಎದುರು ಚಿಕ್ಕ ಬಾಲಕನೊಬ್ಬ ಕರಾಟೆ ಪ್ರದರ್ಶಿಸುವಾಗ ರಾಹುಲ್ ಗಾಂಧಿ ಆ ಬಾಲಕನ ಕರಾಟೆ ಪಟ್ಟುಗಳನ್ನು ಸರಿಪಡಿಸುತ್ತಿರುವ ವಿಡಿಯೋವನ್ನು ಕಾಂಗ್ರೆಸ್ (Congress) ಟ್ವಿಟ್ಟರ್ನಲ್ಲಿ ಶೇರ್ ಮಾಡಿಕೊಂಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರಾಟೆ ಮಾಡುತ್ತಿದ್ದ ಬಾಲಕನೊಂದಿಗೆ ಮಾತುಕತೆ ನಡೆಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಕರಾಟೆ ಪಂಚ್ಗಳನ್ನು ಪ್ರದರ್ಶಿಸಿದ ಆ ಬಾಲಕನ ಕರಾಟೆ ತಂತ್ರಗಳನ್ನು ರಾಹುಲ್ ಗಾಂಧಿ ಸರಿಪಡಿಸಿದ್ದಾರೆ. ಈ ವಿಡಿಯೋವನ್ನು ಶೇರ್ ಮಾಡಿರುವ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹೀಗೆ ಬರೆದುಕೊಂಡಿದೆ. “ತಂತ್ರವು ತಪ್ಪಾಗಿದ್ದರೆ ದೇಶವು ವಿನಾಶದ ಹಾದಿಗೆ ಹೋಗುತ್ತದೆ. ಇದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದೆ. ರಾಹುಲ್ ಗಾಂಧಿ ಅವರು ಮಗುವಿಗೆ ಸರಿಯಾದ ತಂತ್ರವನ್ನು ತೋರಿಸಿಕೊಟ್ಟಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಬಿಜೆಪಿ ವಿರುದ್ಧ ಲೇವಡಿ ಮಾಡಿದೆ.
टेक्निक गलत हो तो देश तबाही के रास्ते पर चला जाता है, ये तो बच्चों के भविष्य का सवाल ठहरा।
एक बच्चे को सही टेक्निक बताते @RahulGandhi जी…#BharatJodoYatra pic.twitter.com/YTsyXP7T7J
— Congress (@INCIndia) November 3, 2022
ಇದನ್ನೂ ಓದಿ: Rahul Gandhi: ಇಂದಿರಾ ಗಾಂಧಿ ಭಾರತಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಈ ದೇಶವನ್ನು ಒಡೆಯಲು ಬಿಡುವುದಿಲ್ಲ; ರಾಹುಲ್ ಗಾಂಧಿ
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬುಧವಾರ ಹೈದರಾಬಾದ್‌ನಲ್ಲಿದ್ದು, ಅಲ್ಲಿ ಬಾಲಿವುಡ್ ನಟಿ ಪೂಜಾ ಭಟ್ ಅವರು ಕಾಂಗ್ರೆಸ್ ನಾಯಕಿಯೊಂದಿಗೆ ಸೇರಿಕೊಂಡು ಸುಮಾರು 10.5 ಕಿ.ಮೀ. ನಡೆದಿದ್ದಾರೆ. ಮಂಗಳವಾರ ಹೈದರಾಬಾದ್‌ನ ಚಾರ್ಮಿನಾರ್‌ನಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕಿರುಕುಳ ಆರೋಪದ ನಂತರ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ವೇಮುಲಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಬುಧವಾರವೂ ರಾಹುಲ್ ಗಾಂಧಿ ಪಟಂಚೇರುವಿನಲ್ಲಿ 5ನೇ ತರಗತಿ ವಿದ್ಯಾರ್ಥಿಯೊಂದಿಗೆ ಕ್ರಿಕೆಟ್ ಆಡಿದ್ದರು.