ಬಿಜೆಪಿಯ ತಪ್ಪು ನೀತಿಗಳ ಫಲ; ದೋಡಾ ಎನ್‌ಕೌಂಟರ್ ಬಳಿಕ ರಾಹುಲ್ ಗಾಂಧಿ ವಾಗ್ದಾಳಿ

|

Updated on: Jul 16, 2024 | 12:57 PM

ಇಂದು (ಮಂಗಳವಾರ) ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪದೇ ಪದೇ ಉಂಟಾಗುತ್ತಿರುವ ಭದ್ರತಾ ಲೋಪಗಳಿಗೆ ಸರ್ಕಾರವೇ ಸಂಪೂರ್ಣ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯ ತಪ್ಪು ನೀತಿಗಳ ಫಲ; ದೋಡಾ ಎನ್‌ಕೌಂಟರ್ ಬಳಿಕ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
Follow us on

ನವದೆಹಲಿ: ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ ಕಾರ್ಯಾಚರಣೆ ವೇಳೆ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಸೇನೆಯ ಸಿಬ್ಬಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತೀಯ ಸೈನಿಕರು ಮತ್ತು ಅವರ ಕುಟುಂಬಗಳು ಬಿಜೆಪಿಯ ತಪ್ಪು ನೀತಿಗಳ ಭಾರವನ್ನು ಹೊರುತ್ತಿದ್ದಾರೆ. ಬಿಜೆಪಿಯ ತಪ್ಪು ನೀತಿಗಳ ಫಲವಾಗಿ ನಮ್ಮ ಸೈನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

“ಇಂದು ನಮ್ಮ ಸೈನಿಕರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮತ್ತೊಂದು ಭಯೋತ್ಪಾದಕ ಎನ್‌ಕೌಂಟರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ನಾನು ಅವರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಇಂತಹ ಭಯಾನಕ ಒಂದರ ಹಿಂದೆ ಒಂದರಂತೆ ನಡೆಯುತ್ತಿರುವ ಘಟನೆಗಳು ಅತ್ಯಂತ ದುಃಖಕರ ಮತ್ತು ಆತಂಕಕಾರಿಯಾಗಿದೆ” ಎಂದು ರಾಹುಲ್ ಗಾಂಧಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: International Yoga Day: ಅಂತಾರಾಷ್ಟ್ರೀಯ ಯೋಗ ದಿನ; ಭಾರತದ ಗಡಿಯಲ್ಲಿ ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಕರ್ತವ್ಯದ ಸಾಲಿನಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈ ನಿರಂತರ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದ ಹದಗೆಟ್ಟ ಸ್ಥಿತಿಯನ್ನು ಪ್ರತಿಬಿಂಬಿಸುತ್ತಿವೆ ಎಂದು ಹಿಂದಿಯಲ್ಲಿ ಎಕ್ಸ್‌ನಲ್ಲಿ ಬರೆದಿದ್ದಾರೆ. “ಪುನರಾವರ್ತಿತ ಭದ್ರತಾ ಲೋಪಗಳ” ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಒತ್ತಾಯಿಸಿದ್ದಾರೆ. ಈ ದುಃಖದ ಸಮಯದಲ್ಲಿ, ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಂತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ, ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮ

ಕೇಂದ್ರಾಡಳಿತ ಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಜಮ್ಮು ಪ್ರದೇಶದಲ್ಲಿ 78 ದಿನಗಳಲ್ಲಿ 11 ಭಯೋತ್ಪಾದಕ ದಾಳಿಗಳು ನಡೆದಿವೆ ಎಂದು ಹೇಳಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ