Rahul Gandhi: ರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ ನೀಡಿದ ದೆಹಲಿ ಕೋರ್ಟ್

ರಾಹುಲ್ ಗಾಂಧಿ ಮಾಡಿದ ಮನವಿಗೆ ಇಂದು (ಮೇ 26) ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಭಾಗಶಃ ಅನುಮತಿ ನೀಡಿದೆ. ನ್ಯಾಯಾಲಯ 3 ವರ್ಷಗಳ ಕಾಲ ಎನ್‌ಒಸಿ ನೀಡಿದೆ.

Rahul Gandhi: ರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ ನೀಡಿದ ದೆಹಲಿ ಕೋರ್ಟ್
ರಾಹುಲ್ ಗಾಂಧಿ
Image Credit source: Hindustan Times

Updated on: May 26, 2023 | 1:40 PM

ದೆಹಲಿ: ಕಾಂಗ್ರೆಸ್​​​ ನಾಯಕ ರಾಹುಲ್​​​ ಗಾಂಧಿ (Rahul Gandhi) ಅವರು ತಮಗೆ ಹೊಸ ಸಾಮಾನ್ಯ ಪಾಸ್‌ಪೋರ್ಟ್ ನೀಡಲು ಎನ್‌ಒಸಿ (No Objection Certificate) ಕೋರಿ ದೆಹಲಿ ಕೋರ್ಟ್​​ಗೆ ಮನವಿ ಸಲ್ಲಿಸಿದ್ದರು, ಇದೀಗ ರಾಹುಲ್ ಗಾಂಧಿ ಮಾಡಿದ ಮನವಿಗೆ ಇಂದು (ಮೇ 26) ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಭಾಗಶಃ ಅನುಮತಿ ನೀಡಿದೆ. ನ್ಯಾಯಾಲಯ 3 ವರ್ಷಗಳ ಕಾಲ ಎನ್‌ಒಸಿ ನೀಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಅನರ್ಹಗೊಂಡ ನಂತರ ಅವರ ಸಂಸದ ಸವಲತ್ತುಗಳನ್ನು ಕಳೆದುಕೊಂಡಿದ್ದರು, ಇದೀಗ ಮೂರು ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ದೆಹಲಿ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ.

ಇದನ್ನೂ ಓದಿ:Rahul Gandhi in Wayanad: ಬಿಜೆಪಿ ನಾಯಕರು ನನ್ನನ್ನು ಅರ್ಥ ಮಾಡಿಕೊಂಡಿಲ್ಲ, ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಾಹುಲ್ ಗಾಂಧಿ

ರಾಹುಲ್​​​​ ಗಾಂಧಿ ಅವರು ತಮ್ಮ ಅನರ್ಹತೆಯ ನಂತರ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್​​ನ್ನು ಸರ್ಕಾರಕ್ಕೆ ಒಪ್ಪಿಸಿದ ನಂತರ ಅವರು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದೀಗ ನ್ಯಾಯಲಯಕ್ಕೆ 10 ವರ್ಷಗಳ ಅನುಮತಿ ನೀಡಬೇಕು ಎಂದು ಮನವಿ ಮಾಡಿದ ರಾಹುಲ್​​ ಗಾಂಧಿ, ಇದಕ್ಕೆ ಒಪ್ಪದ ನ್ಯಾಯಲಯ 3 ವರ್ಷಗಳ ಕಾಲವಧಿಗೆ ಅನುಮತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us