ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟಿಸಿದ 16 ಕಾಂಗ್ರೆಸ್ ಶಾಸಕರು ಗುಜರಾತ್ ವಿಧಾನಸಭೆಯಿಂದ ಅಮಾನತು

ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಮಿತ್ ಚಾವ್ಡಾ, ಜನರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿದ್ದಕ್ಕಾಗಿ ಬಿಜೆಪಿ ಸರ್ಕಾರ ಬಾಯಿಮುಚ್ಚಿಸುತ್ತಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದರ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟಿಸಿದ 16 ಕಾಂಗ್ರೆಸ್ ಶಾಸಕರು ಗುಜರಾತ್ ವಿಧಾನಸಭೆಯಿಂದ ಅಮಾನತು
ಗುಜರಾತ್ ಶಾಸಕರ ಪ್ರತಿಭಟನೆ
Follow us
|

Updated on:Mar 27, 2023 | 9:08 PM

ರಾಹುಲ್ ಗಾಂಧಿಯನ್ನು (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಕುರಿತು ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಗುಜರಾತ್ ವಿಧಾನಸಭೆ (Gujarat Assembly) ಸ್ಪೀಕರ್ ಸೋಮವಾರ 17 ಕಾಂಗ್ರೆಸ್ ಶಾಸಕರ ಪೈಕಿ 16 ಮಂದಿಯನ್ನು ಬಜೆಟ್ ಅಧಿವೇಶನದ (Budget session) ಉಳಿದ ಭಾಗಕ್ಕೆ ಮಾರ್ಚ್ 29ರವರೆಗೆ ಸದನದಿಂದ ಅಮಾನತುಗೊಳಿಸಿದ್ದಾರೆ. ಗದ್ದಲದ ಸಮಯದಲ್ಲಿ ಸ್ಪೀಕರ್ ಶಂಕರ್ ಚೌಧರಿ ಅವರು ಕಾಂಗ್ರೆಸ್ ಶಾಸಕರ ನೇತೃತ್ವದ ಪ್ರತಿಭಟನೆಯನ್ನು ಶಾಂತಗೊಳಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಹಾಗಾಗಿ ಇಮ್ರಾನ್ ಖೇಡಾವಾಲಾ, ಗೆನಿಬೆನ್ ಠಾಕೂರ್ ಮತ್ತು ಅಮೃತ್‌ಜಿ ಠಾಕೋರ್ ಸೇರಿದಂತೆ ಪ್ರತಿಭಟನಾ ನಿರತ ಶಾಸಕರನ್ನು ಹೊರಹಾಕಲು ಮಾರ್ಷಲ್‌ಗಳನ್ನು ಕರೆದರು. ಅನಂತ್ ಪಟೇಲ್ ಹೊರತುಪಡಿಸಿ ಉಳಿದ 16 ಕಾಂಗ್ರೆಸ್ ಶಾಸಕರು ಸೋಮವಾರ ಸದನದಲ್ಲಿ ಹಾಜರಿದ್ದರು.

ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಮಿತ್ ಚಾವ್ಡಾ, ಜನರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿದ್ದಕ್ಕಾಗಿ ಬಿಜೆಪಿ ಸರ್ಕಾರ ಬಾಯಿಮುಚ್ಚಿಸುತ್ತಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದರ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ನ ನ್ಯಾಯಾಲಯವು ಅವರನ್ನು ಮಾರ್ಚ್ 23 ರಂದು ಮೋದಿ ಸರ್​​ನೇಮ್ ಹೇಳಿಕೆಯ ಮೇಲೆ ದೋಷಿ ಎಂದು ಘೋಷಿಸಿದ ನಂತರ ಗಾಂಧಿ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಯಿತು. ಸೋಮವಾರ, ಗಾಂಧಿಯವರ ಅನರ್ಹತೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್‌ನ ಎಲ್ಲಾ ಶಾಸಕರು ಕಪ್ಪು ಬಟ್ಟೆ ಧರಿಸಿ ಗುಜರಾತ್ ವಿಧಾನಸಭೆಗೆ ಪ್ರವೇಶಿಸಿದರು. ಸ್ಪೀಕರ್ ಶಂಕರ್ ಚೌಧರಿ ಅವರು ಚಾವ್ಡಾ ಅವರನ್ನು ಕುಳಿತುಕೊಳ್ಳಲು ಹೇಳಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಯಾವುದೇ ಚರ್ಚೆಗೆ ಅವಕಾಶವಿಲ್ಲ ನಂತರ ವಿಷಯವನ್ನು ಪ್ರಸ್ತಾಪಿಸಬಹುದು ಎಂದಿದ್ದರು.

ಈ ಸಮಯದಲ್ಲಿ ಕಾಂಗ್ರೆಸ್‌ನ ಇತರ ಶಾಸಕರು ಸದನದ ಬಾವಿಗಿಳಿದು ಮೋದಿ-ಅದಾನಿ ಭಾಯಿ ಭಾಯಿ ಎಂದು ಘೋಷಣೆಗಳನ್ನು ಕೂಗಿದ್ದಾರೆಯ ಶಾಸಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿಯನ್ನು ಜತೆಗಿರುವ ಫೋಟೋಗಳನ್ನು ಕೂಡಾ ತೋರಿಸಿದ್ದಾರೆ. ಎಲ್ಲಾ 16 ಶಾಸಕರು ಘೋಷಣೆಗಳನ್ನು ನಿಲ್ಲಿಸಲು ನಿರಾಕರಿಸಿದಾಗ ಚೌಧರಿ “ಜನರ ಸಮಯ” ವ್ಯರ್ಥ ಮಾಡುವುದರ ವಿರುದ್ಧ ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾದಕ ಸಿನಿಮಾ ಮಾಡಿದ ನಿರ್ದೇಶಕ ಅಂತ ಟೀಕಿಸಿದ್ದಕ್ಕೆ ರಾಹುಲ್​ ಗಾಂಧಿ ರೀತಿ ಉತ್ತರಿಸಿದ ವಿವೇಕ್​ ಅಗ್ನಿಹೋತ್ರಿ

ಶಾಸಕರು ಅಲ್ಲಿಯೇ ಉಳಿದಿದ್ದರಿಂದ ಸ್ಪೀಕರ್ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಶಾಸಕರು ಹೊರಗೆ ಹೋಗಲು ನಿರಾಕರಿಸಿದ ನಂತರ ಕುಳಿತಿದ್ದ ಶಾಸಕರನ್ನು ಹೊರಹಾಕಲು ಸ್ಪೀಕರ್ ಮಾರ್ಷಲ್‌ಗಳಿಗೆ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯ ನಂತರ ರಾಜ್ಯ ಶಾಸಕಾಂಗ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಋಷಿಕೇಶ್ ಪಟೇಲ್ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದು ಮಾರ್ಚ್ 29 ರಂದು ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅವರೆಲ್ಲರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Mon, 27 March 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ