AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi Disqualified: ಶಿಕ್ಷೆಯ ಕಾರಣ ಅನರ್ಹಗೊಂಡಿದ್ದ ಸಂಸದ, ಶಾಸಕರಿವರು

ಕೋರ್ಟ್ ಶಿಕ್ಷೆ ವಿಧಿಸಿದ ಕಾರಣಕ್ಕಾಗಿ ಸಂಸದ ಸ್ಥಾನದಿಂದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಂಡ ಪ್ರಮುಖ ರಾಜಕಾರಣಿಗಳು ಯಾರು? ಯಾಕಾಗಿ ಅನರ್ಹಗೊಂಡಿದ್ದರು ಎಂಬ ಮಾಹಿತಿ ಇಲ್ಲಿದೆ.

Rahul Gandhi Disqualified: ಶಿಕ್ಷೆಯ ಕಾರಣ ಅನರ್ಹಗೊಂಡಿದ್ದ ಸಂಸದ, ಶಾಸಕರಿವರು
ಜಯಲಲಿತಾ ಮತ್ತು ಲಾಲು ಪ್ರಸಾದ್ (ಸಂಗ್ರಹ ಚಿತ್ರ)Image Credit source: PTI
ಗಣಪತಿ ಶರ್ಮಾ
|

Updated on:Mar 24, 2023 | 3:58 PM

Share

ಕಾಂಗ್ರೆಸ್ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅರನ್ನು (Rahul Gandhi) ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ಹಿನ್ನೆಲೆಯಲ್ಲಿ ಸಂಸದನ ಸ್ಥಾನದಿಂದ (Disqualification) ಅನರ್ಹಗೊಳಿಸಲಾಗಿದೆ. ಮೋದಿ ಉಪನಾಮ ಬಳಸಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್​​ನ ನ್ಯಾಯಾಲಯ ಅವರಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿತ್ತು. ಜತೆಗೆ, 30 ದಿನಗಳ ಜಾಮೀನು ಕೂಡ ಮಂಜೂರು ಮಾಡಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. ಲೋಕಸಭೆಯ ಕಾರ್ಯದರ್ಶಿ ಶುಕ್ರವಾರ ರಾಹುಲ್ ಗಾಂಧಿ ಅನರ್ಹತೆಯ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ. ಪರಿಣಾಮವಾಗಿ ಅವರು ವಯನಾಡು ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ. ಈ ಹಿಂದೆ ಕೂಡ ಇಂಥ ಪ್ರಕರಣಗಳಲ್ಲಿ ಕೆಲವು ಪ್ರಮುಖ ರಾಜಕಾರಣಿಗಳು ಅನರ್ಹಗೊಂಡಿದ್ದರು.

ಕೋರ್ಟ್ ಶಿಕ್ಷೆ ವಿಧಿಸಿದ ಕಾರಣಕ್ಕಾಗಿ ಸಂಸದ ಸ್ಥಾನದಿಂದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಂಡ ಪ್ರಮುಖ ರಾಜಕಾರಣಿಗಳು ಯಾರು? ಯಾಕಾಗಿ ಅನರ್ಹಗೊಂಡಿದ್ದರು ಎಂಬ ಮಾಹಿತಿ ಇಲ್ಲಿದೆ.

ಮೊಹಮ್ಮದ್ ಫೈಜಲ್

ಲಕ್ಷದ್ವೀಪದ ಸಂಸದರಾಗಿದ್ದ ಮೊಹಮ್ಮದ್ ಫೈಜಲ್ ಅವರನ್ನು ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ 2003ರ ಜನವರಿ 13ರಂದು ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಪರಿಣಾಮವಾಗಿ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು.

ಆಜಂ ಖಾನ್

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ, ಶಾಸಕ ಆಜಂ ಖಾನ್ ಅವರನ್ನು 2019ರಲ್ಲಿ ದ್ವೇಷಭಾಷಣ ಪ್ರಕರಣವೊಂದಕ್ಕೆ ಸಂಬಂಧಿಸಿ ರಾಮಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ನಂತರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಜಯಲಲಿತಾ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿ. ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ 2014ರಲ್ಲಿ ಬೆಂಗಳೂರಿನ ನ್ಯಾಯಾಲಯ ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿತ್ತು. ಪರಿಣಾಮವಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ; ಮೋದಿ ಉಪನಾಮ ಹೇಳಿಕೆ ಸಂಬಂಧಿಸಿ ಶಿಕ್ಷೆ

ರಶೀದ್ ಮಸೂದ್

ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸಂಸದರಾಗಿದ್ದ ರಶೀದ್ ಮಸೂದ್ ಅವರನ್ನು ‘ಎಂಬಿಬಿಎಸ್ ಸೀಟು ಹಂಚಿಕೆ ಹಗರಣ’ದ ಆರೋಪದಲ್ಲಿ ದೋಷಿ ಎಂದು ಸುಪ್ರೀಂ ಕೋರ್ಟ್ 2013ರಲ್ಲಿ ತೀರ್ಪು ನೀಡಿತ್ತು. ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿತ್ತು. ಪರಿಣಾಮವಾಗಿ ಸಂಸದರ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು.

ಲಾಲು ಪ್ರಸಾದ್ ಯಾದವ್

ಮೇವು ಹಗರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನೂ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಜನಪ್ರತಿನಿಧಿಗಳ ಅನರ್ಹತೆ ಬಗ್ಗೆ ಕಾನೂನಿನಲ್ಲೇನಿದೆ?

ಯಾವುದೇ ಅಪರಾಧ ಸಾಬೀತಾಗಿ ಎರಡು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಸಂಸದ ಅಥವಾ ಶಾಸಕರನ್ನು ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹಗೊಳಿಸಬಹುದು ಎಂದು ಪ್ರಜಾಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 8 (3) ರಲ್ಲಿ ಉಲ್ಲೇಖಿಸಲಾಗಿದೆ. ಇದೇ ಕಾರಣಕ್ಕೆ ಈಗ, ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನೂ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Fri, 24 March 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ