AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿ ಭಾರತದ ಏಕತೆಗೆ ಅತ್ಯಂತ ಅಪಾಯಕಾರಿ, ಪಪ್ಪು ಬಗ್ಗೆ ವಿದೇಶಿಗರಿಗೆ ಗೊತ್ತಿಲ್ಲ: ಕಿರಣ್ ರಿಜಿಜು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಏಕತೆಗೆ ಅಪಾಯಕಾರಿಯಾಗಿದ್ದಾರೆ, ಅವರ ಬಗ್ಗೆ ವಿದೇಶಿಗರಿಗೆ ತಿಳಿದಿಲ್ಲ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.ಲಂಡನ್​ನಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಅವರು, ಸ್ವಘೋಷಿತ ಕಾಂಗ್ರೆಸ್​ ರಾಜಕುಮಾರ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಆದರೆ ವಿದೇಶಿಗರಿಗೆ ಪಪ್ಪು ಎಂದು ತಿಳಿದಿಲ್ಲ ಎಂದಿದ್ದಾರೆ.

Rahul Gandhi: ರಾಹುಲ್ ಗಾಂಧಿ ಭಾರತದ ಏಕತೆಗೆ ಅತ್ಯಂತ ಅಪಾಯಕಾರಿ, ಪಪ್ಪು ಬಗ್ಗೆ ವಿದೇಶಿಗರಿಗೆ ಗೊತ್ತಿಲ್ಲ: ಕಿರಣ್ ರಿಜಿಜು
ಕಿರಣ್ ರಿಜಿಜು
ನಯನಾ ರಾಜೀವ್
|

Updated on: Mar 09, 2023 | 9:40 AM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತದ ಏಕತೆಗೆ ಅಪಾಯಕಾರಿಯಾಗಿದ್ದಾರೆ, ಅವರ ಬಗ್ಗೆ ವಿದೇಶಿಗರಿಗೆ ತಿಳಿದಿಲ್ಲ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.ಲಂಡನ್​ನಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಅವರು, ಸ್ವಘೋಷಿತ ಕಾಂಗ್ರೆಸ್( Congress)​ ರಾಜಕುಮಾರ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಆದರೆ ವಿದೇಶಿಗರಿಗೆ ಪಪ್ಪು ಎಂದು ತಿಳಿದಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿಯ ಮೂರ್ಖ ಹೇಳಿಕೆಗೆಲ್ಲಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ, ಆದರೆ ಬೇಸರದ ಸಂಗತಿ ಎಂದರೆ ಅವರ ಭಾರತ ವಿರೋಧಿ ಹೇಳಿಕೆಗಳನ್ನು ಭಾರತ ವಿರೋಧಿ ಪಡೆಗಳು ದುರುಪಯೋಗಪಡಿಸಿಕೊಂಡಿವೆ. ಭಾರತದ ಪ್ರತಿಷ್ಠೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ರಿಜಿಜು ಹೇಳಿದರು.

ಭಾರತದ ಏಕೈಕ ಮಂತ್ರ ಏಕ ಭಾರತ ಶ್ರೇಷ್ಠ ಭಾರತ ಎಂದು ಆದರೆ ವಿದೇಶಿ ನೆಲದಲ್ಲಿ ದೇಶವನ್ನು ಅವಮಾನಿಸಿದ್ದಾರೆ. ಹರಿವಂಶ್ ಮಾತನಾಡಿ, ರಾಹುಲ್ ಗಾಂಧಿ ಮಾಡಿರುವ ಆರೋಪವೆಲ್ಲವೂ ಆಧಾರರಹಿತ ಹಾಗೂ ಸುಳ್ಳು, ನಾನು ಕಳೆದ 9 ವರ್ಷಗಳಿಂದ ಸಂಸತ್ತಿನಲ್ಲಿದ್ದು, ಇಲ್ಲಿಯವರೆಗೆ ಯಾರ ಬಾಯಿಂದಲೂ ಇಂತಹ ಮಾತು ಕೇಳಿಲ್ಲ. ನನಗೆ ತಿಳಿದಂತೆ ಸಂಸತ್ತಿನ ಒಳಗೆ ಅಥವಾ ಸಂಸತ್ತಿನ ಹೊರಗೆ ಯಾರೂ ಈ ರೀತಿ ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಏನು ಹೇಳಿದ್ದರು ಭಾರತದ ಸಂಸತ್ತಿನಲ್ಲಿ ಪ್ರತಿಪಕ್ಷ ನಾಯಕರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ, ನಾವು ಸರ್ಕಾರದ ವಿರುದ್ಧ ಧ್ವನಿ ಎತ್ತಲು ಹೋದರೆ ನಮ್ಮ ಮೈಕ್​ಗಳನ್ನು ಆಫ್​ ಮಾಡಲಾಗುತ್ತಿತ್ತು ಎಂದು ಹೇಳಿದ್ದರು.

ವಿಪಕ್ಷ ರಾಜಕಾರಣಿಗಳ ಫೋನ್‌ಗಳನ್ನು ಕದ್ದಾಲಿಸಲು ಭಾರತ ಸರ್ಕಾರ ಪೆಗಾಸಸ್‌ ಸ್ಪೈವೇರ್‌ನ್ನು ಬಳಸಿಕೊಂಡಿತ್ತು. ನಾನೂ ಕೂಡ ಈ ಬೇಹುಗಾರಿಕೆಯ ಬಲಿಪಶು. ಪೆಗಾಸಸ್‌ ಮೂಲಕ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಒತ್ತಡ ಹೇರಿ, ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರ ಫೋನ್‌ ಕದ್ದಾಲಿಸಿದೆ. ಅಲ್ಲದೇ ವಿಪಕ್ಷಗಳ ಧ್ವನಿಯನ್ನು ಅಡಗಿಸಲು ಹಲವಾರು ಕ್ರಿಮಿನಲ್‌ ಮೊಕದ್ದಮೆಗಳನ್ನು ಹಾಕಲಾಗಿದೆ. ನನ್ನ ಮೇಲೂ ಹಲವು ಸುಳ್ಳು ಮೊಕದ್ದಮೆಗಳು ದಾಖಲಾಗಿವೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?