ಎಸ್‌ಐಆರ್ ಅಕ್ರಮ; ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಮತದಾರರ ಪಟ್ಟಿ ಅಕ್ರಮದ ವಿರುದ್ಧ ಅರ್ಜಿ ಸಲ್ಲಿಸಲು 10ರಿಂದ 15 ನಾಯಕರನ್ನೊಳಗೊಂಡ ಕಾಂಗ್ರೆಸ್ ನಿಯೋಗಕ್ಕೆ ಸುಪ್ರೀಂ ಕೋರ್ಟ್ ಇಂದು ತನ್ನ ಸಂಕೀರ್ಣ ಪ್ರವೇಶಿಸಲು ಅನುಮತಿ ನೀಡಿದೆ. ಎಸ್​ಐಆರ್​ ಪ್ರಕ್ರಿಯೆಯನ್ನು ವಿರೋಧಿಸಿ ಮತ್ತು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯ ಒಕ್ಕೂಟದ ನಾಯಕರು ಪ್ರತಿಭಟನೆ ಮುಂದುವರಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಹಾಗೇ, ರಾಹುಲ್ ಗಾಂಧಿ ನೇತೃತ್ವದ ಇಂಡಿಯ ಒಕ್ಕೂಟ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದೆ.

ಎಸ್‌ಐಆರ್ ಅಕ್ರಮ; ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Image Credit source: PTI

Updated on: Oct 12, 2026 | 5:48 PM

ನವದೆಹಲಿ, ಅಕ್ಟೋಬರ್ 12: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಭಾರತದ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತವಾಗಿ ರಿಟ್ ಅರ್ಜಿ ದಾಖಲಿಸಿದ್ದಾರೆ. ಅರ್ಜಿದಾರರ ಪರ ವಕೀಲರಾದ ಎಸ್. ಪ್ರಸನ್ನ ಅವರು ನ್ಯಾಯಾಲಯದ ದಾಖಲಾತಿ ವಿಭಾಗ ಮುಚ್ಚುವ ಕೆಲವೇ ಕ್ಷಣಗಳ ಮುನ್ನ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ (ಅ. 13) ನಡೆಯಲಿದೆ.

“ರಾಹುಲ್ ಗಾಂಧಿ ವಿರುದ್ಧ ಭಾರತೀಯ ಚುನಾವಣಾ ಆಯೋಗ” ಎಂಬ ಶೀರ್ಷಿಕೆಯಡಿ ಈ ಪ್ರಕರಣ ದಾಖಲಾಗಿದೆ. ಅರ್ಜಿಯಲ್ಲಿ ಕೋರಲಾಗಿರುವ ನಿರ್ದಿಷ್ಟ ಪರಿಹಾರಗಳು ಹಾಗೂ ವಿಸ್ತೃತ ವಿವರಗಳು ಶೀಘ್ರದಲ್ಲೇ ಹೊರಬೀಳಲಿವೆ. ಅಲ್ಲದೆ, ರಾಹುಲ್ ಗಾಂಧಿ ಅವರ ಕಾನೂನು ತಂಡವು ಅರ್ಜಿ ಸಲ್ಲಿಕೆಯ ಸಮಯವನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಅವರನ್ನು ಸಂಪರ್ಕಿಸಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಕಾಂಗ್ರೆಸ್ ನಿಯೋಗಕ್ಕೆ ಅರ್ಜಿ ಸಲ್ಲಿಸಲು ಅವಕಾಶ:

ಇದಕ್ಕೂ ಮುನ್ನ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ‘ವೋಟ್ ಚೋರಿ’ (ಮತಗಳ ಕಳವು) ವಿರುದ್ಧದ ಅರ್ಜಿಯನ್ನು ಸಲ್ಲಿಸಲು 10ರಿಂದ 15 ಕಾಂಗ್ರೆಸ್ ನಾಯಕರ ನಿಯೋಗಕ್ಕೆ ಸುಪ್ರೀಂ ಕೋರ್ಟ್ ಆವರಣ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ, ಈ ನಿಯೋಗವು ಹೈ-ಸೆಕ್ಯುರಿಟಿ ವಲಯದ ಹೊರಗಡೆ ಇರಲಿದೆ ಎಂದು ವರದಿಗಳು ತಿಳಿಸಿವೆ. ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ವಿರೋಧಿಸಿ ಕಾನಾಟ್ ಪ್ಲೇಸ್‌ನಿಂದ ಸುಪ್ರೀಂ ಕೋರ್ಟ್ ವರೆಗೆ ‘ಇಂಡಿಯಾ’ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಚಲೋ ದಿಲ್ಲಿ” ಬೃಹತ್ ಪಾದಯಾತ್ರೆಗೆ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:41 pm, Mon, 12 October 26

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us