ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ, ರಾಹುಲ್ ಗಾಂಧಿಗೆ ಜಾಮೀನು

ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸುಲ್ತಾನ್ ಪುರ ಕೋರ್ಟ್ ಅವರಿಗೆ ಜಾಮೀನು ನೀಡಿದೆ. 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ, ರಾಹುಲ್ ಗಾಂಧಿಗೆ ಜಾಮೀನು
ರಾಹುಲ್ ಗಾಂಧಿ
Image Credit source: India Today

Updated on: Feb 20, 2024 | 12:02 PM

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ(Rahul Gandhi)ಗೆ ಶುಭ ಸುದ್ದಿ ಸಿಕ್ಕಿದೆ. ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸುಲ್ತಾನ್ ಪುರ ಕೋರ್ಟ್ ಅವರಿಗೆ ಜಾಮೀನು ನೀಡಿದೆ. 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣವನ್ನು ಮಂಗಳವಾರ (ಫೆಬ್ರವರಿ 20) ಸುಲ್ತಾನ್‌ಪುರದ ಸಂಸದ-ಶಾಸಕ ನ್ಯಾಯಾಲಯವು ವಿಚಾರಣೆ ನಡೆಸಿತು.

ಇದು 2018 ರ ಪ್ರಕರಣವಾಗಿದ್ದು, ಇದರಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು. ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸುಲ್ತಾನ್‌ಪುರ ಎಂಪಿ ಎಂಎಲ್‌ಎ ನ್ಯಾಯಾಲಯ ಅವರಿಗೆ ಜಾಮೀನು ನೀಡಿತು ಮತ್ತು ಅವರು ಅಲ್ಲಿಂದ ನಿರ್ಗಮಿಸಿದರು. ರಾಹುಲ್ ಗಾಂಧಿ ಪ್ರಸ್ತುತ ಅಮೇಥಿಯಲ್ಲಿದ್ದಾರೆ.

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದರು, ಗಾಂಧಿಯವರು ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್‌ಕೌಂಟರ್ ಪ್ರಕರಣದಿಂದ 2014 ರಲ್ಲಿ ಷಾ ಅವರನ್ನು ಬಿಡುಗಡೆ ಮಾಡಿತ್ತು.

ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿರುವ ಕಾರಣ ಜನವರಿ 18 ರಂದು ನ್ಯಾಯಾಲಯದ ಹಿಂದಿನ ವಿಚಾರಣೆಗೆ ಗಾಂಧಿ ಗೈರಾಗಿದ್ದರು, ಬಿಜೆಪಿಯಿಂದ ಟೀಕೆಗೆ ಗುರಿಯಾಗಿತ್ತು. ಅವರ ವಕೀಲರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ ನಂತರ ಜಾಮೀನು ಸಿಕ್ಕಿದೆ.

ಮೋದಿ ಉಪನಾಮ ಟೀಕೆ
ಮೋದಿ ಉಪನಾಮ ಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ಕಾಂಗ್ರೆಸ್​ ಮುಖಂಡ ರಾಹುಲ್ ಗಾಂಧಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರೀಂಕೋರ್ಟ್​ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಅದರ ಬೆನ್ನಲ್ಲೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಾಹುಲ್ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿದ್ದರು.

ರಾಹುಲ್ ಗಾಂಧಿ 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯ ಭಾಷಣದಲ್ಲಿ ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:51 am, Tue, 20 February 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us