AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ಹೇಳಿಕೆ ಕುರಿತು ರಾಹುಲ್ ಗಾಂಧಿಗೆ ಕೋರ್ಟ್​ ನೋಟಿಸ್ ಜಾರಿ

ಜಾತಿ ಗಣತಿ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಕೋರ್ಟ್ ನೋಟಿಸ್ ನೀಡಿದೆ. ಸಂಪತ್ತು ಮರುಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್ಥಿಕ ಸಮೀಕ್ಷೆಯ ಪರವಾಗಿ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಹಿಂದೆ ಸಂಸದ ಅಥವಾ ಶಾಸಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಜಾತಿ ಗಣತಿ ಹೇಳಿಕೆ ಕುರಿತು ರಾಹುಲ್ ಗಾಂಧಿಗೆ ಕೋರ್ಟ್​ ನೋಟಿಸ್ ಜಾರಿ
Rahul Gandhi
ಸುಷ್ಮಾ ಚಕ್ರೆ
|

Updated on: Dec 22, 2024 | 3:15 PM

Share

ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬರೇಲಿ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜನವರಿ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಂಸದ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದೆ.

ಈ ಪ್ರಕರಣದ ಅರ್ಜಿದಾರರಾದ ಪಂಕಜ್ ಪಾಠಕ್, ಚುನಾವಣೆಯಲ್ಲಿ ಜಾತಿ ಗಣತಿ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯು ದೇಶದಲ್ಲಿ ಅಂತರ್ಯುದ್ಧವನ್ನು ಪ್ರಾರಂಭಿಸುವ ಪ್ರಯತ್ನದಂತೆ ಕಾಣುತ್ತಿದೆ. ನಾವು ಮೊದಲು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆ ಬಳಿಕ ವಜಾಗೊಂಡ ಸಂಸದ-ಶಾಸಕ ನ್ಯಾಯಾಲಯ, ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ತೆರಳಿ, ಅಲ್ಲಿ ನಮ್ಮ ಮನವಿಯನ್ನು ಸಲ್ಲಿಸಿ, ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ಬಿಜೆಪಿ ಸಂಸದರ ಮೇಲೆ ದೈಹಿಕ ಹಲ್ಲೆ ಆರೋಪ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲು

ರಾಹುಲ್ ಗಾಂಧಿ ಹೇಳಿದ್ದೇನು?:

ರಾಹುಲ್ ಗಾಂಧಿ ಚುನಾವಣಾ ರ್ಯಾಲಿಯಲ್ಲಿ, “ಮೊದಲು ಹಿಂದುಳಿದ ಜಾತಿಗಳು, ಎಸ್​ಗಳು, ಎಸ್​ಟಿಗಳು, ಅಲ್ಪಸಂಖ್ಯಾತರು, ಇತರ ಜಾತಿಗಳ ನಿಖರವಾದ ಜನಸಂಖ್ಯೆ ಮತ್ತು ಸ್ಥಿತಿಯನ್ನು ತಿಳಿಯಲು ನಾವು ಜಾತಿ ಗಣತಿಯನ್ನು ನಡೆಸುತ್ತೇವೆ. ನಂತರ, ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸುತ್ತೇವೆ. ಅದಾದ ಬಳಿಕ, ಈ ವರ್ಗಗಳಿಗೆ ಅವರ ಜನಸಂಖ್ಯೆಯ ಆಧಾರದ ಮೇಲೆ ಭಾರತದ ಸಂಪತ್ತು, ಉದ್ಯೋಗಗಳು ಮತ್ತು ಇತರ ಕಲ್ಯಾಣ ಯೋಜನೆಗಳನ್ನು ವಿತರಿಸಲು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಹುಲ್ ಗಾಂಧಿಯ ಹೇಳಿಕೆಯು ವಿವಾದಾತ್ಮಕ ವಿಷಯವಾಗಿ ಮಾರ್ಪಟ್ಟಿದೆ. ಬಿಜೆಪಿ ಸೇರಿದಂತೆ ಹಲವು ಪಕ್ಷಗಳು ಈ ಬಗ್ಗೆ ಆಕ್ಷೇಪ ಹೊರಹಾಕಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ