ನಾಯಿ ತಿನ್ನಲಿಲ್ಲ ಎಂದು ಅದೇ ಬಿಸ್ಕತ್ತನ್ನು ತನ್ನ ಕಾರ್ಯಕರ್ತನಿಗೆ ಕೊಟ್ಟ ರಾಹುಲ್ ಗಾಂಧಿ, ವಿಡಿಯೋ ವೈರಲ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ನಾಯಿಗೆ ಬಿಸ್ಕೆಟ್ ತಿನ್ನಿಸುತ್ತಿರುವುದನ್ನು ಕಾಣಬಹುದು. ಆ ಸಮಯದಲ್ಲಿ, ನಾಯಿ ಬಿಸ್ಕತ್ತನ್ನು ತಿನ್ನಲು ನಿರಾಕರಿಸಿದಾಗ, ಅವರು ಅದೇ ಬಿಸ್ಕತ್ತನ್ನು ತನ್ನ ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ಅದಾಗಿದೆ.
ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra) ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ನಾಯಿಗೆ ಹಾಕಿದ್ದ ಬಿಸ್ಕತ್ತನ್ನೇ ತೆಗೆದು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆಗಿದೆ.ರಾಹುಲ್ ಗಾಂಧಿ ಅವರ ರೋಡ್ ಶೋ ವೇಳೆ ಅವರ ಜತೆ ಒಂದು ನಾಯಿಯೂ ಇತ್ತು, ಅದಕ್ಕೆ ರಾಹುಲ್ ಗಾಂಧಿ ಬಿಸ್ಕತ್ತು ಹಾಕುತ್ತಿದ್ದರು, ಆದರೆ ಆ ನಾಯಿ ತಿನ್ನುತ್ತಿರಲಿಲ್ಲ, ಅದೇ ಸಮಯದಲ್ಲಿ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿಯನ್ನು ಮಾತನಾಡಿಸಿದರು ಆಗ ರಾಹುಲ್ ನಾಯಿಗೆ ಹಾಕಿದ್ದ ಬಿಸ್ಕತ್ತಲ್ಲೇ ಒಂದು ಬಿಸ್ಕತ್ತನ್ನು ತೆಗೆದು ಕಾರ್ಯಕರ್ತನಿಗೆ ನೀಡಿದ್ದರು. ಅದಾದ ಬಳಿಕ ಕಾರ್ಯಕರ್ತನ ಬಳಿ ನಗುತ್ತಲೇ ಮಾತು ಆರಂಭಿಸಿದ್ದರು.
ಎಕ್ಸ್ನಲ್ಲಿ ಬಿಜೆಪಿ ಐಟಿ ಸೆಲ್ನ ಅಮಿತ್ ಮಾಳವೀಯ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೂತ್ ಏಜೆಂಟರನ್ನು ನಾಯಿಗಳಿಗೆ ಹೋಲಿಸಿದ್ದರು. ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷರು ತನ್ನ ಕಾರ್ಯಕರ್ತನನ್ನು ನಾಯಿಯಂತೆ ನಡೆಸಿಕೊಂಡರೆ ಅಂತಹ ಪಕ್ಷವು ಕಣ್ಮರೆಯಾಗುವುದು ಪಕ್ಕಾ ಎಂದು ಮಾಳವೀಯ ಬರೆದಿದ್ದಾರೆ.
ಈ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿದ್ದು, ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ವಿಚಾರವನ್ನು ಮುನ್ನೆಲೆಗೆ ತಂದಿದೆ. ಇದು ತನ್ನದೇ ಸದಸ್ಯರ ಬಗ್ಗೆ ನಾಯಕತ್ವದ ವರ್ತನೆ ಮತ್ತು ಅವರ ಕಡೆಗೆ ತೋರುವ ಗೌರವದ ಕೊರತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ.
ಮತ್ತಷ್ಟು ಓದಿ: Bharat Jodo Nyay Yatra: ಬಿಹಾರ ತಲುಪಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ
ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತನಿಗೆ ನಾಯಿ ತಿರಸ್ಕರಿಸಿದ ಬಿಸ್ಕತ್ತನ್ನು ನೀಡಿದ್ದಾರೆ. ಇದು ಅವರ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಮತದಾರರಿಗೆ ನೀಡುವ ಗೌರವವೇ ಎಂದು ಬಿಜೆಪಿ ನಾಯಕಿ ಪಲ್ಲವಿ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ವಿಡಿಯೋ
अभी कुछ दिन पहले कांग्रेस अध्यक्ष खड़गे जी ने पार्टी के बूथ एजेंटों की तुलना कुत्तों से की और यहाँ राहुल गांधी अपनी यात्रा में एक कुत्ते को बिस्किट खिला रहे हैं और जब कुत्ते ने नहीं खाया तो वही बिस्किट उन्होंने अपने कार्यकर्ता को दे दिया।
जिस पार्टी का अध्यक्ष और युवराज अपने… pic.twitter.com/70Mn2TEHrx
— Amit Malviya (@amitmalviya) February 5, 2024
ಪಲ್ಲವಿ ಅವರ ಟ್ವೀಟ್‌ಗೆ ಹಿಮಂತ ಬಿಸ್ವಾ ಶರ್ಮಾ ಕೂಡ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಮಾತ್ರವಲ್ಲ, ಅವರ ಇಡೀ ಕುಟುಂಬವೂ ನನಗೆ ಆ ಬಿಸ್ಕತ್ತನ್ನು ತಿನ್ನಿಸಲು ಸಾಧ್ಯವಾಗಲಿಲ್ಲ. ನಾನು ಹೆಮ್ಮೆಯ ಅಸ್ಸಾಮಿ ಮತ್ತು ಭಾರತೀಯ. ನಾನು ಅದನ್ನು ತಿನ್ನಲು ನಿರಾಕರಿಸಿದೆ ಮತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ