ರಾಹುಲ್ ಗಾಂಧಿಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ: ಬಿಜೆಪಿ

|

Updated on: Jun 20, 2024 | 6:52 PM

ನಿಮಗೆ ಪರೀಕ್ಷೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ, ನೀವು ಅದರ ನ್ಯೂನತೆಗಳನ್ನು ಎತ್ತಿ ತೋರಿಸಬಹುದು. ಆದರೆ ನಿಮಗೆ ಪ್ರಧಾನಿ ಮೋದಿಯವರೊಂದಿಗೆ ಕೆಲವು ವೈಯಕ್ತಿಕ ಸಮಸ್ಯೆಗಳಿವೆ ಎಂಬ ಕಾರಣಕ್ಕಾಗಿ, ನೀವು ಮಧ್ಯಪ್ರದೇಶ ಮತ್ತು ಗುಜರಾತ್‌ನ ಯುವಕರ ವಿರುದ್ಧ ಇಂತಹ ದೊಡ್ಡ ಆರೋಪವನ್ನು ಮಾಡುತ್ತೀರಿ.ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಕೇಂದ್ರಬಿಂದುವಿದ್ದರೆ ಅದು ರಾಜಸ್ಥಾನ ಎಂದು ಬಿಜೆಪಿ ಹೇಳಿದೆ.

ರಾಹುಲ್ ಗಾಂಧಿಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ: ಬಿಜೆಪಿ
ರಾಹುಲ್ ಗಾಂಧಿ
Follow us on

ದೆಹಲಿ ಜೂನ್ 20: ನೀಟ್ ವಿವಾದ (NEET Exam row) ಮತ್ತು ಯುಜಿಸಿ-ನೆಟ್  (UGC NET)ಪರೀಕ್ಷೆ ರದ್ದತಿ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಗುರುವಾರ ರಾಹುಲ್ ಗಾಂಧಿ (Rahul gandhi) ವಿರುದ್ಧ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ 3ನೇ ಬಾರಿಗೆ ಸೋತಿದ್ದಾರೆ ಎಂದ ಮಾತ್ರಕ್ಕೆ ಗುಜರಾತ್ ಮತ್ತು ಮಧ್ಯಪ್ರದೇಶದ ಯುವಕರನ್ನು ನಿಂದಿಸಬಹುದು ಎಂದಲ್ಲ. ಗುಜರಾತ್ ಮತ್ತು ಮಧ್ಯಪ್ರದೇಶಗಳು ಪ್ರಶ್ನೆ ಪತ್ರಿಕೆ ಸೋರಿಕೆ ಕೇಂದ್ರಗಳಾಗಿವೆ ಎಂದು ರಾಹುಲ್ ಗಾಂಧಿ ಹೇಳಿದ್ದನ್ನು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಖಂಡಿಸಿದ್ದಾರೆ.

ನಿಮಗೆ ಪರೀಕ್ಷೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ, ನೀವು ಅದರ ನ್ಯೂನತೆಗಳನ್ನು ಎತ್ತಿ ತೋರಿಸಬಹುದು. ಆದರೆ ನಿಮಗೆ ಪ್ರಧಾನಿ ಮೋದಿಯವರೊಂದಿಗೆ ಕೆಲವು ವೈಯಕ್ತಿಕ ಸಮಸ್ಯೆಗಳಿವೆ ಎಂಬ ಕಾರಣಕ್ಕಾಗಿ, ನೀವು ಮಧ್ಯಪ್ರದೇಶ ಮತ್ತು ಗುಜರಾತ್‌ನ ಯುವಕರ ವಿರುದ್ಧ ಇಂತಹ ದೊಡ್ಡ ಆರೋಪವನ್ನು ಮಾಡುತ್ತೀರಿ.ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಕೇಂದ್ರಬಿಂದುವಿದ್ದರೆ ಅದು ರಾಜಸ್ಥಾನ. ಅಲ್ಲಿ ಅಶೋಕ್ ಗೆಹ್ಲೋಟ್ ಅವರ ಕಾಂಗ್ರೆಸ್ ಸರ್ಕಾರವಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗಲು ಕೇಂದ್ರವು ಅವಕಾಶ ನೀಡುವುದಿಲ್ಲ ಎಂದು ಹೇಳಿದ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, “ಸರ್ಕಾರವು NEET ಪರೀಕ್ಷೆಯ ಬಗ್ಗೆ ಸಂಪೂರ್ಣ ಎಚ್ಚರ ಮತ್ತು ಸೂಕ್ಷ್ಮವಾಗಿದೆ. ಸರ್ಕಾರವು ದೃಢಸಂಕಲ್ಪ ಹೊಂದಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗಲು ಬಿಡುವುದಿಲ್ಲ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ರಾಹುಲ್ ಗಾಂಧಿಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ, ಅವರು ಈ ವಿಷಯದ ಮೇಲೆ ತಮ್ಮ ರಾಜಕೀಯವನ್ನು ಆಡಲು ಬಯಸುತ್ತಾರೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ರಾಹುಲ್ ಗಾಂಧಿ ಅದರ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ ಎಂದಿದ್ದಾರೆ.

ಭಾರತದಲ್ಲಿನ ಶಿಕ್ಷಣ ಸಂಸ್ಥೆಗಳನ್ನು ಬಿಜೆಪಿ ವಶಪಡಿಸಿಕೊಂಡಿದೆ.ಪ್ರಧಾನಿ ನರೇಂದ್ರ ಮೋದಿ ಅದಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ ರಾಹುಲ್ ಗಾಂಧಿ ಆರೋಪಿಸಿದ್ದಕ್ಕೆ ಬಿಜೆಪಿ ಈ ರೀತಿ ಪ್ರತ್ರಿಕ್ರಿಯಿಸಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ಮೋದಿ ಉಕ್ರೇನ್-ರಷ್ಯಾ ಯುದ್ಧ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ, ಆದರೆ ಅವರಿಗೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಅಥವಾ ಬಯಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Rahul Gandhi: ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಮಧ್ಯಪ್ರದೇಶದಲ್ಲಿ ವ್ಯಾಪಮ್ ಪರೀಕ್ಷೆ ಮತ್ತು ನೇಮಕಾತಿ ಹಗರಣವನ್ನು ಉಲ್ಲೇಖಿಸುವಾಗ ಅವರು “ದೇಶದ ಇತರ ಭಾಗಗಳಿಗೆ ವ್ಯಾಪಮ್ ಕಲ್ಪನೆಯನ್ನು ವಿಸ್ತರಿಸಲಾಗಿದೆ” ಎಂದು ಹೇಳಿದರು. ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ಭಾರಿ ವಿವಾದ ಭುಗಿಲೆದ್ದಿದ್ದು, ಈ ವಿಷಯ ಇದೀಗ ಸುಪ್ರೀಂಕೋರ್ಟ್‌ನಲ್ಲಿದೆ. ಬುಧವಾರ ರಾತ್ರಿ, ಕೇಂದ್ರ ಶಿಕ್ಷಣ ಸಚಿವಾಲಯವು ಯುಜಿಸಿ-ನೆಟ್ ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿದ್ದು, ಸಿಬಿಐ ಈ ಬಗ್ಗೆ ತನಿಖೆ ಮಾಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ