Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ

ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹಿಡಿದುಕೊಂಡು ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

Rahul Gandhi: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕನಾದ ರಾಹುಲ್​​ ಗಾಂಧಿ
ರಾಹುಲ್​​ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 21, 2023 | 2:19 PM

ದೆಹಲಿ, ಸೆ.21: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ (Rahul Gandhi)​​ ದಿನಕ್ಕೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆ ಒಂದು ಕಡೆ ಹತ್ತಿರವಾಗುತ್ತಿರುವ ಕಾರಣ ಈ ಎಲ್ಲ ರಾಜಕೀಯ ಅಲೆದಾಟ ಇರುವುದು ಸಹಜ ಎಂದು ಅನೇಕರ ವಾದ, ಇನ್ನು ಕೆಲವರು ಇದು ಜನನಾಯಕನ ಕೆಲಸ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ರಾಹುಲ್​​ ಗಾಂಧಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದಾರೆ. ಇದೀಗ ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ರೈಲು ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ, ತಲೆಯಲ್ಲೊಂದು ಸೂಟ್​​ಕೇಸ್​​ ಹೊತ್ತುಕೊಂಡು ಕೂಲಿ ಕಾರ್ಮಿಕರ ಜತೆಗೆ ಸಂವಾದ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಈ ಹಿಂದೆ ರಾಹುಲ್​​ ಗಾಂಧಿ ಅವರು ರೈತರ ಹೊಲಕ್ಕೆ ಹೋಗಿ ಕೃಷಿ ಮಾಡಿದ್ದರು. ಇನ್ನು ಇಂತಹ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಇದೀಗ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಕಾಣಿಸಿಕೊಂಡ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್​​ಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್​​ನ ನಾಯಕ ರಾಹುಲ್​​ ಗಾಂಧಿ ರೈಲು ನಿಲ್ದಾಣದಲ್ಲಿ ಕೂಲಿ ಕಾರ್ಮಿಕರಂತೆ ಬಟ್ಟೆಯನ್ನು ಧರಿಸಿ ತಲೆಯ ಮೇಲೆ ಸೂಟ್​​​ಕೇಸ್​​ ಹೊತ್ತುಕೊಂಡು, ಅಲ್ಲಿ ಜನರ ಜತೆಗೆ ಸಂವಾದ ನಡೆಸಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಸಂವಾದ ಸಮಯದಲ್ಲಿ, ಅಲ್ಲಿನ ಜನರ ಜತೆಗೆ ಸುದೀರ್ಘ ಚರ್ಚೆಯನ್ನು ನಡೆಸಿ, ಅವರ ಕಷ್ಟಗಳನ್ನು ಆಲಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್​​ ಪಕ್ಷ ತನ್ನ X (ಹಿಂದಿನ ಟ್ವಿಟರ್​​)ನಲ್ಲಿ ಹಂಚಿಕೊಂಡಿದೆ. ಜನನಾಯಕರಾದ ನಮ್ಮ ರಾಹುಲ್​​ ಗಾಂಧಿ ಅವರು ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿರುವ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ, ಅವರ ಕಷ್ಟಗಳನ್ನು ಆಲಿಸಿದ್ದಾರೆ ಎಂದು ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಲುಕ್​​ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಹೇಗಿದ್ರು.. ಹೇಗಾದ್ರು ನೋಡಿ?

ರಾಹುಲ್​​ ಗಾಂಧಿ ಅವರ ಮುಂದಿನ ಭಾರತ್ ಜೋಡೋ ಪ್ರಯಾಣಕ್ಕೆ ಈ ಸಂವಾದ ಹಾದಿ ಎಂದು ಪಕ್ಷ ಹೇಳಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್​​ ಕೈಗೊಂಡ ಭಾರತ್ ಜೋಡೋ ಯಾತ್ರೆಯು ಮತ್ತೆ ಸಂವಾದದೊಂದಿಗೆ ಮುಂದುವರಿಯುತ್ತದೆ, ಇನ್ನು ರಾಹುಲ್​​ ಅವರು ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್​​ ಪಕ್ಷ ತನ್ನ ಅಧಿಕೃತ ಟ್ವೀಟ್​​​ನಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:15 pm, Thu, 21 September 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ