AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi:ರಾಹುಲ್​​ ಗಾಂಧಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮನೆಯನ್ನು ಬಾಡಿಗೆಗೆ ಪಡೆಯುವ ಸಾಧ್ಯತೆ

ಪ್ರಧಾನಿ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸಂಸತ್ತಿನಿಂದ ಅನರ್ಹಗೊಂಡ ನಂತರ ಸರ್ಕಾರಿ ಬಂಗಲೆ ತೆರವುಗೊಳಿಸಿದ್ದಾರೆ. ಇದೀಗ ರಾಷ್ಟ್ರರಾಜಧಾನಿಯಲ್ಲಿ ವಾಸ್ತವ್ಯಕ್ಕಾಗಿ ದೆಹಲಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಮನೆಯನ್ನು ಬಾಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Rahul Gandhi:ರಾಹುಲ್​​ ಗಾಂಧಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮನೆಯನ್ನು ಬಾಡಿಗೆಗೆ ಪಡೆಯುವ ಸಾಧ್ಯತೆ
ರಾಹುಲ್​​ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on: Jul 13, 2023 | 12:47 PM

Share

ದೆಹಲಿ: ಪ್ರಧಾನಿ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್​ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ(Rahul Gandhi) ಅವರಿಗೆ 2 ವರ್ಷಗಳ ಶಿಕ್ಷೆ ವಿಧಿಸಿ ಆದೇಶವನ್ನು ನೀಡಿ, ಜಾಮೀನು ಕೂಡ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್​​ ಗಾಂಧಿ ಅವರು ಗುಜರಾತ್​ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅದನ್ನು ಹೈಕೋರ್ಟ್​ ತಿರಸ್ಕರಿಸಿತ್ತು. ಇದಕ್ಕೂ ಮುನ್ನ ರಾಹುಲ್​​ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿತ್ತು.  ಅನರ್ಹಗೊಂಡ ನಂತರ ಸರ್ಕಾರ ಬಂಗಲೆಗಳಲ್ಲಿ ಇರುವಂತಿಲ್ಲ, ಈ ಕಾರಣಕ್ಕೆ ರಾಹುಲ್​​ ಗಾಂಧಿ ತುಘಲಕ್ ಲೇನ್‌ನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ಇದೀಗ ರಾಹುಲ್​​ ಗಾಂಧಿ ದಕ್ಷಿಣ ದೆಹಲಿಯಲ್ಲಿ ಹೊಸ ನಿವಾಸವನ್ನು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹುಮಾಯೂನ್ ಸಮಾಧಿಯ ಹಿಂದೆ ಇರುವ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (Sheila Dixit) ಅವರ ನಿವಾಸವನ್ನು ಬಾಡಿಗೆಗೆ ತೆಗೆದುಕೊಳ್ಳಲು ರಾಹುಲ್​ ಗಾಂಧಿ ಸಿದ್ಧರಾಗಿದ್ದಾರೆ, ಇದಕ್ಕೂ ಮುನ್ನ ಅವರು ಆ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆ ಸಂಬಂಧಿಸಿದ ಕ್ಲಿಯರೆನ್ಸ್ಗಾಗಿ ಕಾಯುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿದೆ.

ನಿಜಾಮುದ್ದೀನ್ ಪ್ರದೇಶದಲ್ಲಿರುವ 3 BHK ಮನೆ ಮಾಜಿ ಸಿಎಂ ಶೀಲಾ ದೀಕ್ಷಿತ್ ಕುಟುಂಬಕ್ಕೆ ಸೇರಿದ್ದು. ಶೀಲಾ ದೀಕ್ಷಿತ್ ತಮ್ಮ ಜೀವನದ ಕೊನೆಯ ದಿನಗಳನ್ನು ಅಲ್ಲಿಯೇ ಕಳೆದಿದ್ದರು. ರಾಹುಲ್ ಗಾಂಧಿ ಅವರಿಗೆ ಕೇಂದ್ರವು Z+ ಭದ್ರತೆಯನ್ನು ನೀಡಿದ್ದು, ಹೊಸ ಸ್ಥಳದಲ್ಲಿ ವಾಸಕ್ಕೆ ತೆರಳುವ ಮೊದಲು ಅವರು NOC (ಯಾವುದೇ ಆಕ್ಷೇಪಣೆಗಳ ಪ್ರಮಾಣಪತ್ರ) ಪಡೆಯಬೇಕಾಗುತ್ತದೆ.

ಇದನ್ನೂ ಓದಿ: Rahul Gandhi Defamation Case: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆ, 2 ವರ್ಷಗಳ ಶಿಕ್ಷೆ ಕಾಯಂ

ರಾಹುಲ್​​ ಗಾಂಧಿ ಪ್ರಸ್ತುತ ತನ್ನ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಜನಪಥ್ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಇನ್ನೂ ನಿಜಾಮುದ್ದೀನ್ ಪ್ರದೇಶದಲ್ಲಿರುವ ಶೀಲಾ ದಿಕ್ಷೀತ್ ಅವರ ಮನೆಯನ್ನು ಅವರ ಮಗ ಸಂದೀಪ್ ದೀಕ್ಷಿತ್ ಬಾಡಿಗೆ ನೀಡುವುದಾಗಿ ತಿಳಿಸಿದ್ದರು ಎಂದು ವರದಿಗಳು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು