Mamata Banerjee: ಬಿಜೆಪಿಯು ರಾಹುಲ್ ಗಾಂಧಿಯನ್ನು ಹೀರೋ ಮಾಡಲು ಹೊರಟಿದೆ: ಮಮತಾ ಬ್ಯಾನರ್ಜಿ

|

Updated on: Mar 20, 2023 | 10:44 AM

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಹಾಗೂ ಬಿಜೆಪಿ ಎರಡೂ ಪಕ್ಷಗಳನ್ನು ದೂರುವ ಮೂಲಕ ಮುಂದಿನ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ಗೆ ಯಾವುದೇ ಪಕ್ಷದ ಸಾಂಗತ್ಯ ಬೇಕಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Mamata Banerjee: ಬಿಜೆಪಿಯು ರಾಹುಲ್ ಗಾಂಧಿಯನ್ನು ಹೀರೋ ಮಾಡಲು ಹೊರಟಿದೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Image Credit source: Hindustan Times
Follow us on

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಹಾಗೂ ಬಿಜೆಪಿ ಎರಡೂ ಪಕ್ಷಗಳನ್ನು ದೂರುವ ಮೂಲಕ ಮುಂದಿನ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ಗೆ ಯಾವುದೇ ಪಕ್ಷದ ಸಾಂಗತ್ಯ ಬೇಕಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬಿಜೆಪಿ ಹೀರೋ ಮಾಡಲು ಹೊರಟಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.
ಲೋಕಸಭೆ ಚುನಾವಣೆಗೆ ಸುಮಾರು ಒಂದು ವರ್ಷ ಉಳಿದಿದ್ದು, ಈಗಾಗಲೇ ರಾಜಕೀಯ ವಾಕ್ಸಮರ ಆರಂಭವಾಗಿದೆ. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಡುವಿನ ಅಂತರವು ಕಡಿಮೆಯಾಗುವ ಬದಲು ಹೆಚ್ಚುತ್ತಿದೆ.

ಇದೇ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿಯನ್ನು ಹೀರೋ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ಪಕ್ಷದ ಆಂತರಿಕ ಸಭೆಯಲ್ಲಿ ಫೋನ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಮತತ್ಷ್ಟು ಓದಿ: Mamata Banerjee: ನನ್ನ ರುಂಡವನ್ನು ಬೇಕಾದರೂ ಕತ್ತರಿಸಿ ಆದರೆ.. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೀಗೆ ಹೇಳಿದ್ಯಾಕೆ?

ಜ್ವಲಂತ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಮಾಡಿದ ಹೇಳಿಕೆಗಳಿಗಾಗಿ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಅವರನ್ನು ಹೀರೋ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿ ತನ್ನ ಹಿತಾಸಕ್ತಿಗಳನ್ನು ಪೂರೈಸಲು ಇದನ್ನು ಮಾಡುತ್ತಿದೆ ಆದ್ದರಿಂದ ಇತರ ವಿರೋಧ ಪಕ್ಷಗಳು ಸಾಮಾನ್ಯ ಜನರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತಿಲ್ಲ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ತನ್ನ ರಾಜಕೀಯ ನಿಲುವಿನ ದೃಷ್ಟಿಯಿಂದ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಇತ್ತೀಚೆಗಷ್ಟೇ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ