AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು 'ಕಾಕ್ರೋಚ್ ಜನತಾ ಪಾರ್ಟಿ' (CJP) ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನವದೆಹಲಿಯಲ್ಲಿ ಪ್ರಧಾನಿ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ
Rahul Gandhi Protesting Near Pm Modi HouseImage Credit source: PTI
ಸುಷ್ಮಾ ಚಕ್ರೆ
|

Updated on:Jul 21, 2026 | 6:34 PM

Share

ನವದೆಹಲಿ, ಜುಲೈ 21: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET Paper Leak) ಖಂಡಿಸಿ ನಿನ್ನೆ (ಸೋಮವಾರ) ದೆಹಲಿಯಲ್ಲಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 12 ಸಾವಿರಕ್ಕೂ ಹೆಚ್ಚು ಯುವಕ-ಯುವತಿಯರು ಪ್ರತಿಭಟನೆಯಲ್ಲಿ (Delhi Protest) ಭಾಗಿಯಾಗಿ ಸಂಸತ್ ಭವನದವರೆಗೂ ಮೆರವಣಿಗೆ ನಡೆಸಿದ್ದರು. ಆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದರಿಂದ ಹಲವಾರು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದರು. ಪೊಲೀಸರ ಈ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪ್ರಧಾನಮಂತ್ರಿಗಳ ನಿವಾಸದ ಹೊರಗೆ ಧರಣಿ ನಡೆಸಿದೆ. ಈ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಪ್ರಧಾನಿ ನಿವಾಸದ ಸಮೀಪ ಧರಣಿ ಕುಳಿತಿರುವ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ಸಂಧಾನ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕೃತ ನಿವಾಸದಿಂದ ಹೊರಟ ಕಾಂಗ್ರೆಸ್ ನಾಯಕರು ಹಾಗೂ ಲಕ್ಷಾಂತರ ಕಾರ್ಯಕರ್ತರು, ಕೇವಲ 1 ಕಿಲೋಮೀಟರ್ ದೂರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದತ್ತ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ!

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಸೋಮವಾರ ಯುವಕರ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಪ್ರಧಾನಿಯವರೇ ಉತ್ತರಿಸಬೇಕು. ಪ್ರಧಾನಿ ಮತ್ತು ಗೃಹ ಸಚಿವರು ದೇಶದ ಯುವಕರ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಅವರು ತಕ್ಷಣವೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಧರಣಿಗೆ ಕೈಜೋಡಿಸಲು ದೇಶದ ಜನತೆಗೆ ರಾಹುಲ್ ಕರೆ:

“ವಿದ್ಯಾರ್ಥಿಗಳ ಮೇಲಿನ ದಾಳಿಯು ಪ್ರತಿಯೊಂದು ಭಾರತೀಯ ಕುಟುಂಬದ ಮೇಲಿನ ದಾಳಿಯಾಗಿದೆ” ಎಂದು ಹೇಳಿರುವ ರಾಹುಲ್ ಗಾಂಧಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. “ಯಾವುದೇ ಉತ್ತರ ನೀಡದೆ, ಯಾವುದೇ ಪರಿಣಾಮಗಳನ್ನು ಎದುರಿಸದೆ ತಪ್ಪಿಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿ ಭಾವಿಸಿದ್ದಾರೆ. ಆದರೆ ಈ ಬಾರಿ ಅದು ಸಾಧ್ಯವಿಲ್ಲ. ನಮ್ಮ ದೇಶದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ಬಯಸುವ ಪ್ರತಿಯೊಬ್ಬ ದೇಶಪ್ರೇಮಿ ಭಾರತೀಯನೂ ಪ್ರಧಾನಿ ನಿವಾಸದ ಮುಂಭಾಗದಲ್ಲಿ ನಡೆಯುತ್ತಿರುವ ಈ ಧರಣಿಯಲ್ಲಿ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆ. ಭಾರತದ ವಿದ್ಯಾರ್ಥಿಗಳ ಧ್ವನಿಯನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ರಾಹುಲ್ ಕರೆ ನೀಡಿದ್ದಾರೆ.

ಇದನ್ನೂ ಓದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ

ನೀಟ್-ಯುಜಿ (NEET-UG) ಹಗರಣ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸೋಮವಾರ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸತ್ತಿಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿ ಚದುರಿಸಿದ್ದರು. ಈ ದೌರ್ಜನ್ಯದಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಇದನ್ನು ಖಂಡಿಸಿ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ನೇರ ಸಮರ ಸಾರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 21 July 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ