WFI ಅಮಾನತು, ಪ್ರತಿಭಟನೆ ನಡುವೆ ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಮುಂಜಾನೆ ಹರ್ಯಾಣ ಜಜ್ಜರ್ ಜಿಲ್ಲೆಯ ಛಾರಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ವೀರೇಂದ್ರ ಆರ್ಯ ಅಖಾಡಕ್ಕೆ ಹೋಗಿ ಬಜರಂಗ್ ಪುನಿಯಾ ಮತ್ತು ಇತರ ಕುಸ್ತಿಪಟುಗಳನ್ನು ಭೇಟಿಯಾದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಬುಧವಾರ ಮುಂಜಾನೆ ಹರ್ಯಾಣ ಜಜ್ಜರ್ ಜಿಲ್ಲೆಯ ಛಾರಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ವೀರೇಂದ್ರ ಆರ್ಯ ಅಖಾಡಕ್ಕೆ ಹೋಗಿ ಬಜರಂಗ್ ಪುನಿಯಾ ಮತ್ತು ಇತರ ಕುಸ್ತಿಪಟುಗಳನ್ನು ಭೇಟಿಯಾದರು.
ಛಾರಾ ಕುಸ್ತಿಪಟು ದೀಪಕ್ ಪುನಿಯಾ ಅವರ ಗ್ರಾಮ. ದೀಪಕ್ ಮತ್ತು ಬಜರಂಗ್ ವೀರೇಂದ್ರ ಅಖಾಡದಿಂದ ತಮ್ಮ ಕುಸ್ತಿ ವೃತ್ತಿಯನ್ನು ಪ್ರಾರಂಭಿಸಿದರು. ಇಲ್ಲಿ ರಾಹುಲ್ ಅವರ ಚಿತ್ರವೂ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು ಕುಸ್ತಿಪಟುಗಳೊಂದಿಗೆ ಕುಳಿತಿರುವುದನ್ನು ಕಾಣಬಹುದು.
ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಕುರಿತು ವಿವಾದ ನಡೆಯುತ್ತಿರುವ ಸಂದರ್ಭದಲ್ಲಿ ರಾಹುಲ್ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಕ್ರೀಡಾ ಸಚಿವಾಲಯವು ಇತ್ತೀಚೆಗೆ ಡಬ್ಲ್ಯುಎಫ್‌ಐನ ಹೊಸ ಸಂಘಟನೆಯನ್ನು ರದ್ದುಗೊಳಿಸಿದೆ. ಇದು ಮಾತ್ರವಲ್ಲದೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಸಂಜಯ್ ಸಿಂಗ್ ಅವರನ್ನೂ ಅಮಾನತುಗೊಳಿಸಲಾಗಿತ್ತು.
ಸಂಜಯ್ ಸಿಂಗ್ ಅವರು ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟವರ್ತಿ ಎಂದು ಪರಿಗಣಿಸಲಾಗಿದೆ. ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪವಿದೆ.
ಇದೇ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರು ಬಜರಂಗ್ ಪುನಿಯಾ ಅವರನ್ನು ಕಾಂಗ್ರೆಸ್ ನಾಯಕ ಇಲ್ಲಿಗೆ ಏಕೆ ಬಂದಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಬುಧವಾರ ರೋಹ್ಟಕ್‌ಗೆ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ, ಅಲ್ಲಿ ಅವರು ಕುಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮತ್ತಷ್ಟು ಓದಿ: ಭಾರತ ಕುಸ್ತಿ ಒಕ್ಕೂಟ ಸಮಿತಿಯನ್ನು ಅಮಾನತುಗೊಳಿಸಿದ ಕೇಂದ್ರ ಸರ್ಕಾರ
ರಾಹುಲ್ ಭೇಟಿ ನೀಡಿದ ಛಾರಾ ಗ್ರಾಮವು 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ದೀಪಕ್ ಪುನಿಯಾ ಅವರ ಗ್ರಾಮವಾಗಿದೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳಲ್ಲಿ ಬಜರಂಗ್ ಪುನಿಯಾ, ದೀಪಕ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ