ನಗರಗಳ ಬಳಿಕ ಹಳ್ಳಿಗಳು ಈಗ ಕೊರೊನಾ ಸೋಂಕಿನ ಅಪಾಯದಲ್ಲಿ; ಪರಮಾತ್ಮ ನಿರ್ಭರ್ ಭಾರತ್ ಎಂದ ರಾಹುಲ್ ಗಾಂಧಿ

ನಗರಗಳ ಬಳಿಕ, ಹಳ್ಳಿಗಳೂ ಪರಮಾತ್ಮ ನಿರ್ಭರ್ ಆಗಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕೊರೊನಾ ಸೋಂಕು ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಕೈಗೊಂಡಿರುವ ಕ್ರಮಗಳನ್ನು ಸತತವಾಗಿ ವಿರೋಧಿಸುತ್ತಾ ಬಂದಿರುವ ರಾಹುಲ್ ಗಾಂಧಿ, ಹೀಗೆ ಟ್ವೀಟ್ ಮಾಡಿದ್ದಾರೆ.

ನಗರಗಳ ಬಳಿಕ ಹಳ್ಳಿಗಳು ಈಗ ಕೊರೊನಾ ಸೋಂಕಿನ ಅಪಾಯದಲ್ಲಿ; ಪರಮಾತ್ಮ ನಿರ್ಭರ್ ಭಾರತ್ ಎಂದ ರಾಹುಲ್ ಗಾಂಧಿ
ರಾಹುಲ್​ ಗಾಂಧಿ

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ನಗರಗಳಿಂದ ಹಳ್ಳಿಗಳಿಗೂ ಸೋಂಕು ಹಬ್ಬುತ್ತಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ನಗರಗಳ ಬಳಿಕ ಈಗ ಹಳ್ಳಿಗಳೂ ಭಗವಂತನ ಕೈಯಲ್ಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

ನಗರಗಳ ಬಳಿಕ, ಹಳ್ಳಿಗಳೂ ಪರಮಾತ್ಮ ನಿರ್ಭರ್ ಆಗಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕೊರೊನಾ ಸೋಂಕು ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಕೈಗೊಂಡಿರುವ ಕ್ರಮಗಳನ್ನು ಸತತವಾಗಿ ವಿರೋಧಿಸುತ್ತಾ ಬಂದಿರುವ ರಾಹುಲ್ ಗಾಂಧಿ, ಹೀಗೆ ಟ್ವೀಟ್ ಮಾಡಿದ್ದಾರೆ.

ಕೊವಿಡ್19 ನಿಯಂತ್ರಣ ಸಂಬಂಧ ಮೇ 7ರಂದು ರಾಹುಲ್ ಗಾಂಧಿ ಮೋದಿಗೆ ಪತ್ರ ಬರೆದಿದ್ದರು. ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಅದನ್ನು ನಿಯಂತ್ರಿಸಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಲಸಿಕೆಗಳ ಪರಿಣಾಮಕಾರಿತ್ವ ಪರಿಶೀಲಿಸಬೇಕು. ಹಾಗೂ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ತಿಳಿಸಿದ್ದರು.

ಈ ಮೊದಲು ದೇಶದಲ್ಲಿ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಕೊವಿಡ್ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್​ನಲ್ಲಿ ಹೇಳಿದ್ದರು.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ ಸುಮಾರು 24 ಜನ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕೈ ನಾಯಕ ರಾಹುಲ್ ಗಾಂಧಿ ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ಕೊರತೆ ವಿಚಾರ ದೆಹಲಿ ಅಂಗಳಕ್ಕೆ ತಲುಪಿದ್ದು, ಇದು ಸಾವುಗಳೋ ಅಥವಾ ಕೊಲೆಯೋ ಎಂದು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ದುರಂತದ ಬಗ್ಗೆ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಈ ದುರಂತದಂತೆ ಇನ್ನೆಷ್ಟು ಜನ ಬಳಲಬೇಕು? ಎಂದು ಪ್ರಶ್ನೆ ಮಾಡಿರುವ ಅವರು ಮಲಗಿರುವ ವ್ಯವಸ್ಥೆ ಎದ್ದೇಳಬೇಕು ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದರು.

ಇದನ್ನೂ ಓದಿ: ಬೋಳುತಲೆ ಸಮಸ್ಯೆ ಹೊಂದಿರುವ ಪುರುಷರಲ್ಲಿ ಕೊರೊನಾ ವೈರಾಣು ಹೆಚ್ಚು ಪ್ರಭಾವ ಬೀರಬಲ್ಲದು!

ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್