Rahul Gandhi: ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಸಹ ಪ್ರತಿಭಟನೆ ನಡೆಸಿದ್ದಕ್ಕಾಗಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.
ನವದೆಹಲಿ: ಹಣದುಬ್ಬರ, ಬೆಲೆ ಏರಿಕೆ, ಜಿಎಸ್‌ಟಿ (GST) ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸುತ್ತಿದ್ದಾಗ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಸಹ ಪ್ರತಿಭಟನೆ ನಡೆಸಿದ್ದಕ್ಕಾಗಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.
ಸಂಸತ್ತಿನ ಹೊರಗೆ ಧರಣಿ ನಡೆಸಿದ್ದಕ್ಕಾಗಿ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಸಂಸತ್ತಿನ ಹೊರಗೆ ಧರಣಿ ನಡೆಸಿದ ಸಂಸದರೊಂದಿಗೆ ರಾಹುಲ್ ಗಾಂಧಿ ರಾಷ್ಟ್ರಪತಿ ಭವನದತ್ತ ಹೊರಟಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಅಧೀರ್ ರಂಜನ್ ಚೌಧರಿ ಮತ್ತು ಕೆ.ಸಿ ವೇಣುಗೋಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ.
Delhi | All Congress MPs were marching towards Rashtrapati Bhawan to raise the issue of inflation & price rise but they are not allowing us to go ahead from here. Our job is to raise the issues of the people…Some MPs detained,also beaten: Congress MP Rahul Gandhi at Vijay Chowk pic.twitter.com/qLrBNEhxti
— ANI (@ANI) August 5, 2022
ದೆಹಲಿಯ ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ವಿಜಯ್ ಚೌಕ್ ರಸ್ತೆ ಮತ್ತು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್‌ಗಳ ಮೂಲಕ ನಿರ್ಬಂಧಿಸಿದ್ದಾರೆ. ಕಾಂಗ್ರೆಸ್ ಸಂಸದರ ಪ್ರತಿಭಟನೆಯನ್ನು ತಡೆಯಲು ಬ್ಯಾರಿಕೇಡ್‌ಗಳ ಇನ್ನೊಂದು ಬದಿಯಲ್ಲಿ ಮಹಿಳಾ ಪ್ಯಾರಾ ಸಿಬ್ಬಂದಿಗಳು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಪ್ರತಿಭಟನೆಗೂ ಮುನ್ನ ಸುದ್ದಿಗೋಷ್ಠಿ ಕರೆದಿದ್ದ ರಾಹುಲ್ ಗಾಂಧಿ, 70 ವರ್ಷದ ಪ್ರಜಾಪ್ರಭುತ್ವ ವ್ಯವಸ್ಥೆ 8 ವರ್ಷದಲ್ಲಿ ನಾಶವಾಗಿದೆ. ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಚರ್ಚಿಸಲು ಅವಕಾಶ ನೀಡುತ್ತಿಲ್ಲ. ದೇಶದಲ್ಲಿ ಇಂದು 4 ಜನರಿಂದ ಸರ್ವಾಧಿಕಾರ ನಡೆಯುತ್ತಿದೆ. ಯಾರಾದರೂ ಆ ಸರ್ವಾಧಿಕಾರಿಗಳ ವಿರುದ್ಧ ತಿರುಗಿಬಿದ್ದರೆ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಸುಳ್ಳು ಕೇಸ್ ಹಾಕಿ ನಮ್ಮನ್ನು ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
#WATCH | Congress leader Priyanka Gandhi Vadra arrives at party HQ in Delhi. The party has called a nationwide protest today against unemployment and inflation. pic.twitter.com/fBj3IBIR2m
— ANI (@ANI) August 5, 2022
ಸಂಸತ್ನಲ್ಲಿ ಜನರ ಯಾವುದೇ ಸಮಸ್ಯೆಗಳು ಚರ್ಚೆಯಾಗುತ್ತಿಲ್ಲ. ನಾಲ್ಕೈದು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಬಿಜೆಪಿಯ ಬೆದರಿಕೆ ತಂತ್ರವಾಗಿದೆ. ಬಿಜೆಪಿಯವರು ನಮ್ಮ ವಿರುದ್ಧ ಏನೇ ಷಡ್ಯಂತ್ರ ಮಾಡಿದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ನಮ್ಮ ದೇಶ, ಅದರ ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸವನ್ನು ನಾನು ಮುಂದುವರಿಸುತ್ತೇನೆ. ಸ್ವಲ್ಪ ಒತ್ತಡ ಹಾಕಿದರೆ ನಮ್ಮನ್ನು ಸುಮ್ಮನಿರಿಸಬಹುದು ಎಂದು ಅವರು ಭಾವಿಸಿದ್ದಾರೆ. ಆದರೆ, ನಾವು ಸುಮ್ಮನಿರುವುದಿಲ್ಲ. ಬಿಜೆಪಿಯವರ ವಿರುದ್ಧ ನಾವು ನಿಲ್ಲುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:32 pm, Fri, 5 August 22