ಮಣಿಪುರಕ್ಕೆ ಭೇಟಿ ನೀಡುವಂತೆ ಪ್ರಧಾನಿಗೆ ಒತ್ತಾಯ; ಪ್ರವಾಸದ ವಿಡಿಯೊ ಪೋಸ್ಟ್ ಮಾಡಿದ ರಾಹುಲ್ ಗಾಂಧಿ

ಮೇ 2023 ರಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮೂರನೇ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿರುವ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇಂದಿಗೂ ರಾಜ್ಯವು ಎರಡು ಭಾಗವಾಗಿದೆ. ಹಾಗಾಗಿ ರಾಜ್ಯಕ್ಕೆ ಖುದ್ದಾಗಿಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ ಮತ್ತು ಶಾಂತಿಗಾಗಿ ಮನವಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಮಣಿಪುರಕ್ಕೆ ಭೇಟಿ ನೀಡುವಂತೆ ಪ್ರಧಾನಿಗೆ ಒತ್ತಾಯ; ಪ್ರವಾಸದ ವಿಡಿಯೊ ಪೋಸ್ಟ್ ಮಾಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 11, 2024 | 5:20 PM

ದೆಹಲಿ ಜುಲೈ 11: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಗುರುವಾರ ಮಣಿಪುರದ (Manipur) ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಒತ್ತಾಯಿಸಿದ್ದಾರೆ. ಐದು ನಿಮಿಷಗಳ ಅವಧಿಯ ವಿಡಿಯೊದಲ್ಲಿ, ಮಣಿಪುರ ಇನ್ನೂ ಸಂಕಷ್ಟದಲ್ಲಿದೆ. ಮನೆಗಳು ಸುಟ್ಟುಹೋಗುತ್ತಿವೆ, ಅಮಾಯಕರ ಜೀವಗಳು ಅಪಾಯದಲ್ಲಿವೆ ಮತ್ತು ಸಾವಿರಾರು ಕುಟುಂಬಗಳಿಗೆ ಪರಿಹಾರ ಶಿಬಿರಗಳಲ್ಲಿ ವಾಸಿಸಬೇಕಾಗಿ ಬಂದಿದೆ ಎಂದು ರಾಹುಲ್ ಹೇಳಿದ್ದಾರೆ.

ಮೇ 2023 ರಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮೂರನೇ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಇಂದಿಗೂ ರಾಜ್ಯವು ಎರಡು ಭಾಗವಾಗಿದೆ. ಹಾಗಾಗಿ ರಾಜ್ಯಕ್ಕೆ ಖುದ್ದಾಗಿಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ ಮತ್ತು ಶಾಂತಿಗಾಗಿ ಮನವಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಪೋಸ್ಟ್ ಮಾಡಿದ ವಿಡಿಯೊದಲ್ಲಿ, ರಾಜ್ಯದಲ್ಲಿನ ಜನಾಂಗೀಯ ಘರ್ಷಣೆಯ ಬಗ್ಗೆ ತಮ್ಮ ಅಳಲನ್ನು ವ್ಯಕ್ತಪಡಿಸುವ ಅನೇಕ ಜನರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು.

ರಾಹುಲ್ ಗಾಂಧಿ ಟ್ವೀಟ್

ಮಣಿಪುರದ ಜಿರಿಬಾಮ್ ಪರಿಹಾರ ಶಿಬಿರದ ಮಹಿಳೆಯೊಬ್ಬರು ತಮ್ಮ ಅಜ್ಜಿ ಇನ್ನೂ ಸಂಘರ್ಷದ ಸ್ಥಳದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ತಿಳಿದಿಲ್ಲ. ನಾವು ಅವಳನ್ನು ಸಂಪರ್ಕಿಸಿದರೂ, ಅವಳು ಇಲ್ಲಿಗೆ ಬರಲು ಸಾಧ್ಯವಿಲ್ಲ ಅಥವಾ ನಾವು ಅಲ್ಲಿಗೆ ಹೋಗುವುದಿಲ್ಲ ಎಂದು ಹೇಳುತ್ತಿರುವುದು ವಿಡಿಯೊದಲ್ಲಿದೆ.

ಅಸ್ಸಾಂನ ತಲೈನಲ್ಲಿನ ಪರಿಹಾರ ಶಿಬಿರದಲ್ಲಿ ಮಹಿಳೆಯೊಬ್ಬರು ವೈದ್ಯಕೀಯ ನಿರ್ಲಕ್ಷ್ಯದಿಂದ ತನ್ನ ಸಹೋದರನನ್ನು ಕಳೆದುಕೊಂಡಿರುವುದಾಗಿ ಹೇಳಿದರು. ಸರ್ಕಾರದಿಂದ ಸಾಕಷ್ಟು ವೈದ್ಯಕೀಯ ಸೇವೆ ಲಭ್ಯವಾಗದ ಕಾರಣ ತನ್ನ ಸಹೋದರ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಕಣ್ಣೀರು ಹಾಕಿದ್ದಾರೆ. ಶಿಬಿರದಲ್ಲಿ ಔಷಧಿಗಳಿಗೆ ಕಾಂಗ್ರೆಸ್ ಪಕ್ಷ ಸಹಾಯ ಮಾಡಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಸರ್ಕಾರವು ಅದನ್ನು (ಸಂಘರ್ಷ) ಕೊನೆಗೊಳಿಸಲು ಬಯಸಿದರೆ, ಅದು ಬೇಗನೆ ಕೊನೆಗೊಳ್ಳುತ್ತದೆ” ಎಂದು ಅವರು ಮಣಿಪುರದ ಚುರಾಚಂದ್‌ಪುರದ ಪರಿಹಾರ ಶಿಬಿರದಲ್ಲಿ ಮಾತನಾಡಿದ ರಾಹುಲ್ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮ್ ಮಹಿಳೆಯರಿಗೆ ವರವಾದ ಸಿಆರ್​ಪಿಸಿ ಸೆಕ್ಷನ್ 125 ಏನಿದು? ಶಹಬಾನೋ ಪ್ರಕರಣದಲ್ಲೂ ಈ ಕಾಯ್ದೆ ಬಳಕೆಯಾಗಿತ್ತು

ಮೇ 3 ರಂದು, ಮಣಿಪುರ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಿ ಕುಕಿ ನೇತೃತ್ವದ ಒಗ್ಗಟ್ಟಿನ ಮೆರವಣಿಗೆಯ ನಂತರ ಚುರಚಂದ್‌ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಇದು ಕುಕಿಗಳು ಮತ್ತು ಮೈತಿ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಇದು ಇಡೀ ರಾಜ್ಯದಲ್ಲಿ ಪಸರಿಸಿತು. ಈ ಸಂಘರ್ಷದಲ್ಲಿ 220 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

“ನಾನು ಸಮಸ್ಯೆಯನ್ನು ಹೇಳಬಹುದುಮತ್ತು ಒತ್ತಡ ಹಾಕಬಹುದು. ಆದರೆ ಅದರ ಸ್ಪಂದನೆ ಬಗ್ಗೆ ನಾನು ನಿಮಗೆ ಭರವಸೆ ನೀಡಲಾರೆ. ಏಕೆಂದರೆ ಆ ಪ್ರಶ್ನೆಗೆ ಸರಕಾರವೇ ಉತ್ತರ ನೀಡಲಿದೆ. ಮುಂದಿನ ಅಧಿವೇಶನದಲ್ಲಿ, ನಾನು ನಿಮ್ಮ ಪರವಾಗಿ ಮಾತನಾಡುತ್ತೇನೆ” ಎಂದು ರಾಹುಲ್ ಗಾಂಧಿ ಮೊಯಿರಾಂಗ್ ಪರಿಹಾರ ಶಿಬಿರದಲ್ಲಿ ನಿವಾಸಿಗಳಿಗೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ