Rahul Gandhi Press Conference: ಭಾರತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ನಾಲ್ವರಿಂದ ಸರ್ವಾಧಿಕಾರ; ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

| Updated By: ಸುಷ್ಮಾ ಚಕ್ರೆ

Updated on: Aug 05, 2022 | 10:37 AM

ದೇಶದಲ್ಲಿ ಇಂದು 4 ಜನರಿಂದ ಸರ್ವಾಧಿಕಾರ ನಡೆಯುತ್ತಿದೆ. ಯಾರಾದರೂ ಆ ಸರ್ವಾಧಿಕಾರಿಗಳ ವಿರುದ್ಧ ತಿರುಗಿಬಿದ್ದರೆ ಸುಳ್ಳು ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Rahul Gandhi Press Conference: ಭಾರತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ನಾಲ್ವರಿಂದ ಸರ್ವಾಧಿಕಾರ; ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ ಸುದ್ದಿಗೋಷ್ಠಿ
Follow us on

ನವದೆಹಲಿ: ಭಾರತದಲ್ಲಿ ಇಂದು ಪ್ರತಿದಿನ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಸಂಸತ್​​ನಲ್ಲಿ ವಿಪಕ್ಷ ನಾಯಕರಿಗೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ. 70 ವರ್ಷದ ಪ್ರಜಾಪ್ರಭುತ್ವ ವ್ಯವಸ್ಥೆ 8 ವರ್ಷದಲ್ಲಿ ನಾಶವಾಗಿದೆ. ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಚರ್ಚಿಸಲು ಅವಕಾಶ ನೀಡುತ್ತಿಲ್ಲ. ದೇಶದಲ್ಲಿ ಇಂದು 4 ಜನರಿಂದ ಸರ್ವಾಧಿಕಾರ (Dictatorship) ನಡೆಯುತ್ತಿದೆ. ಯಾರಾದರೂ ಆ ಸರ್ವಾಧಿಕಾರಿಗಳ ವಿರುದ್ಧ ತಿರುಗಿಬಿದ್ದರೆ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಸುಳ್ಳು ಕೇಸ್ ಹಾಕಿ ನಮ್ಮನ್ನು ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ (Rahul Gandhi) ಕಪ್ಪು ಪಟ್ಟಿ ಧರಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಂಸತ್​​ನಲ್ಲಿ ಜನರ ಯಾವುದೇ ಸಮಸ್ಯೆಗಳು ಚರ್ಚೆಯಾಗುತ್ತಿಲ್ಲ. ನಾಲ್ಕೈದು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಬಿಜೆಪಿಯ ಬೆದರಿಕೆ ತಂತ್ರವಾಗಿದೆ. ಬಿಜೆಪಿಯವರು ನಮ್ಮ ವಿರುದ್ಧ ಏನೇ ಷಡ್ಯಂತ್ರ ಮಾಡಿದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ನಮ್ಮ ದೇಶ, ಅದರ ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸವನ್ನು ನಾನು ಮುಂದುವರಿಸುತ್ತೇನೆ. ಸ್ವಲ್ಪ ಒತ್ತಡ ಹಾಕಿದರೆ ನಮ್ಮನ್ನು ಸುಮ್ಮನಿರಿಸಬಹುದು ಎಂದು ಅವರು ಭಾವಿಸಿದ್ದಾರೆ. ಆದರೆ, ನಾವು ಸುಮ್ಮನಿರುವುದಿಲ್ಲ. ಬಿಜೆಪಿಯವರ ವಿರುದ್ಧ ನಾವು ನಿಲ್ಲುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಸೂಚನೆ ಮೇರೆಗೆ ಸಿದ್ದರಾಮಯ್ಯರನ್ನು ತಬ್ಬಿಕೊಂಡ ಡಿಕೆ ಶಿವಕುಮಾರ್​! ವಿಡಿಯೋ ನೋಡೀ

ಪ್ರಜಾಪ್ರಭುತ್ವದ ಸಾವಿಗೆ ನಾವು ಸಾಕ್ಷಿಯಾಗಿದ್ದೇವೆ. ಸರ್ವಾಧಿಕಾರದ ಕಲ್ಪನೆಯ ವಿರುದ್ಧ ನಿಂತಿರುವ ಎ್ಲಲರನ್ನೂ ಕೆಟ್ಟದಾಗಿ ಹಲ್ಲೆ ನಡೆಸಿ, ಥಳಿಸಿ, ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ಭಾರತ ಸರ್ವಾಧಿಕಾರದಲ್ಲಿದೆ, ಪ್ರಜಾಪ್ರಭುತ್ವ ಸತ್ತಿದೆ. ಇಂದು ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ, ನಮಗೆ ಮಾತನಾಡಲು ಅವಕಾಶವಿಲ್ಲ, ಪ್ರತಿಭಟನೆಗೆ ಅವಕಾಶವಿಲ್ಲ, ಲೋಕಸಭೆ ಮತ್ತು ರಾಜ್ಯಸಭೆಯಿಂದ ನಮ್ಮನ್ನು ಅಮಾನತುಗೊಳಿಸಲಾಗಿದೆ. ನಮ್ಮ ದೇಶವು ಸರ್ವಾಧಿಕಾರಿಗಳ ಹಿಡಿತದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 10:27 am, Fri, 5 August 22