ರಾಹುಲ್ ಚೀನಾವನ್ನು ಹೊಗಳಿ ಭಾರತವನ್ನು ಕೀಳಾಗಿ ಬಿಂಬಿಸುತ್ತಾರೆ: ಹಿಮಂತ ಬಿಸ್ವಾ ಶರ್ಮಾ

ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅಸ್ಸಾಂ ಸಿಎಂ, "ರಾಹುಲ್ ಗಾಂಧಿ ಚೀನಾವನ್ನು ವಿವಿಧ ರೀತಿಯಲ್ಲಿ ಪ್ರಚಾರ ಮಾಡುತ್ತಾರೆ. ಭಾರತವನ್ನು ಕೀಳಾಗಿಸಿ ಅವರು ಚೀನಾವನ್ನು ಅತ್ಯುತ್ತಮ ರಾಷ್ಟ್ರವೆಂದು ಬಿಂಬಿಸಲು ಪ್ರಯತ್ನಿಸುತ್ತಾರೆ. ಆದರೆ, ಚೀನಾದಲ್ಲಿ ಪ್ರಜಾಪ್ರಭುತ್ವವಿಲ್ಲ ಮತ್ತು ಜನರಿಗೆ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ಆದರೆ ರಾಹುಲ್ ಗಾಂಧಿ ಅದರ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ರಾಹುಲ್ ಚೀನಾವನ್ನು ಹೊಗಳಿ ಭಾರತವನ್ನು ಕೀಳಾಗಿ ಬಿಂಬಿಸುತ್ತಾರೆ: ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ
Follow us
|

Updated on: Sep 09, 2024 | 8:45 PM

ದೆಹಲಿ ಸೆಪ್ಟೆಂಬರ್ 09:ಅಮೆರಿಕದ ಡಲ್ಲಾಸ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ (Rahul Gandhi) ಹೇಳಿಕೆಯನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಖಂಡಿಸಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, “ಪಾಶ್ಚಿಮಾತ್ಯ ದೇಶಗಳಲ್ಲಿ ಉದ್ಯೋಗದ ಸಮಸ್ಯೆ ಇದೆ. ಭಾರತದಲ್ಲಿ ಉದ್ಯೋಗ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಇಲ್ಲ, ವಿಯೆಟ್ನಾಂನಲ್ಲಿ ಕೂಡಾ ಇಲ್ಲ’ ಎಂದು ಹೇಳಿದರು.

“ನೀವು 1940, 50 ಮತ್ತು 60 ರ ದಶಕಗಳಲ್ಲಿ ಯುನೈಟೆಡ್ ಸ್ಟೇಟ್ಸ್ ಅನ್ನು ನೋಡಿದರೆ, ಅವರು ಜಾಗತಿಕ ಉತ್ಪಾದನೆಯ ಕೇಂದ್ರವಾಗಿತ್ತು. ತಯಾರಿಸಿದ ಯಾವುದಾದರೂ, (ಅದು) ಕಾರುಗಳು, ವಾಷಿಂಗ್ ಮೆಷೀನ್ (ಅಥವಾ) ಟಿವಿಗಳು, ಎಲ್ಲವನ್ನೂ ಅಮೆರಿಕದಲ್ಲಿ ತಯಾರಿಸಲಾಗುತ್ತದೆ. ಉತ್ಪಾದನೆಯು ಅಮೆರಿಕದಿಂದ ಸ್ಥಳಾಂತರಗೊಂಡಿತು. ಅದು ಕೊರಿಯಾಕ್ಕೆ ಹೋಯಿತು, ಅದು ಜಪಾನ್‌ಗೆ ಹೋಯಿತು. ಅಂತಿಮವಾಗಿ, ಅದು ಚೀನಾಕ್ಕೆ ಹೋಯಿತು. ಇಂದು ನೀವು ನೋಡಿದರೆ, ಚೀನಾ ಜಾಗತಿಕ ಉತ್ಪಾದನೆಯಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅಸ್ಸಾಂ ಸಿಎಂ, “ರಾಹುಲ್ ಗಾಂಧಿ ಚೀನಾವನ್ನು ವಿವಿಧ ರೀತಿಯಲ್ಲಿ ಪ್ರಚಾರ ಮಾಡುತ್ತಾರೆ. ಭಾರತವನ್ನು ಕೀಳಾಗಿಸಿ ಅವರು ಚೀನಾವನ್ನು ಅತ್ಯುತ್ತಮ ರಾಷ್ಟ್ರವೆಂದು ಬಿಂಬಿಸಲು ಪ್ರಯತ್ನಿಸುತ್ತಾರೆ. ಆದರೆ, ಚೀನಾದಲ್ಲಿ ಪ್ರಜಾಪ್ರಭುತ್ವವಿಲ್ಲ ಮತ್ತು ಜನರಿಗೆ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ಆದರೆ ರಾಹುಲ್ ಗಾಂಧಿ ಅದರ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಮರ್ಯಾದೆ ತೆಗೆಯಲೆಂದೇ ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿದ್ದಾರೆ; ಬಿಜೆಪಿ ತಿರುಗೇಟು

ರಾಹುಲ್ ಗಾಂಧಿ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದ ಬಿಜೆಪಿ

ಶರ್ಮಾ ಮಾತ್ರವಲ್ಲ, ಹಲವಾರು ಬಿಜೆಪಿ ನಾಯಕರು ರಾಹುಲ್ ಗಾಂಧಿ ಅವರನ್ನು ವಿದೇಶದಲ್ಲಿ “ಭಾರತದ ಘನತೆಯನ್ನು ಅನ್ನು ಕಳಂಕಗೊಳಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.  “ಜಾರ್ಜ್ ಬುಷ್, ಡೊನಾಲ್ಡ್ ಟ್ರಂಪ್, ಬಿಲ್ ಕ್ಲಿಂಟನ್ ಮತ್ತು ಬೈಡನ್ ಬೇರೆ ದೇಶಕ್ಕೆ ಹೋದ ನಂತರ ಅಮೆರಿಕದ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದನ್ನು ನೀವು ಎಂದಾದರೂ ಕೇಳಿದ್ದೀರಾ? ಅವರು ತಮ್ಮ ದೇಶದ ಬಗ್ಗೆ ಕೆಟ್ಟ ಮಾತುಗಳನ್ನು ಹೇಳಲಿಲ್ಲ. ಆದರೆ ರಾಹುಲ್ ಗಾಂಧಿ ಇದನ್ನು ಮಾಡಬಹುದು, ಇದನ್ನು ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ದೇಶ, ಪ್ರಧಾನಿ ಮತ್ತು ಆರ್‌ಎಸ್‌ಎಸ್‌ಗೆ ಗೊತ್ತಿಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

“ರಾಹುಲ್ ಗಾಂಧಿ ಅರೆಕಾಲಿಕ ನಾಯಕ. ಲೋಕಸಭೆಯಲ್ಲಿ ವಿಪಕ್ಷ ನಾಯಕ ಆದ ನಂತರ, ಸಾರ್ವಜನಿಕರು ನೀಡಿದ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅವರು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ವಿದೇಶಿ ನೆಲದಲ್ಲಿ ಏನು ಹೇಳಬೇಕೆಂದು ಅವರಿಗೆ ತಿಳಿದಿಲ್ಲ. ಅವರು ಚೀನಾದ ವಿರುದ್ಧ ಒಂದು ಮಾತನ್ನೂ ಹೇಳಲಾಗಲಿಲ್ಲ. ಅವರು ಭಾರತವನ್ನು ದುರ್ಬಲ ಘಟಕವೆಂದು ಬಿಂಬಿಸುತ್ತಾರೆ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ