‘ಮನಮೋಹನ್ ಸಿಂಗ್ ನೀಡಿದ್ದ ಪ್ರಧಾನಿ ಹುದ್ದೆಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ್ದರು’; ಪಪ್ಪು ಯಾದವ್

ಸಂದರ್ಶನವೊಂದರಲ್ಲಿ ಮಾತನಾಡಿದ ಬಿಹಾರದ ಸಂಸದ ಪಪ್ಪು ಯಾದವ್ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಹಲವು ಮಹತ್ವದ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ. ರಾಹುಲ್ ಗಾಂಧಿ ತಮ್ಮ ಪಾಲಿಗೆ ಬಂದಿದ್ದ ಪ್ರಧಾನಿ ಕುರ್ಚಿಯ ಪ್ರಸ್ತಾಪವನ್ನು ಒಂದೇ ಕ್ಷಣದಲ್ಲಿ ತಿರಸ್ಕರಿಸಿದ್ದರು ಎಂದು ಹೇಳಿದ್ದಾರೆ.

ಮನಮೋಹನ್ ಸಿಂಗ್ ನೀಡಿದ್ದ ಪ್ರಧಾನಿ ಹುದ್ದೆಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ್ದರು; ಪಪ್ಪು ಯಾದವ್
Rahul Gandhi - Manmohan Singh

Updated on: Jul 21, 2025 | 10:13 PM

ನವದೆಹಲಿ, ಜುಲೈ 21: ಬಿಹಾರದ ಸ್ವತಂತ್ರ ಸಂಸದ ಪಪ್ಪು ಯಾದವ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ (Rahul Gandhi) ಬಗ್ಗೆ ಕೆಲವು ಮಹತ್ತರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರು ನೀಡಿದ್ದ ಪ್ರಧಾನಿ ಹುದ್ದೆಯನ್ನು ರಾಹುಲ್ ಗಾಂಧಿ ಒಂದೇ ಕ್ಷಣದಲ್ಲಿ ತಿರಸ್ಕರಿಸಿದ್ದರು” ಎಂದು ಅವರು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಪಪ್ಪು ಯಾದವ್ ಅವರು ರಾಹುಲ್ ಗಾಂಧಿ “ಒಬ್ಬ ಅದ್ಭುತ ಪ್ರತಿಭೆ” ಎಂದಿದ್ದು, ಪ್ರಧಾನಿ ಹುದ್ದೆಯ ಪ್ರಸ್ತಾಪವನ್ನು ಒಂದು ಕ್ಷಣದಲ್ಲಿ ತಿರಸ್ಕರಿಸಿದ್ದರು ಎಂದು ಹೇಳಿದ್ದಾರೆ.

“ಹಾರ್ವರ್ಡ್ ಯುನಿವರ್ಸಿಟಿಯ ವಿದ್ಯಾರ್ಥಿ, ಸತ್ಯವನ್ನು ಮಾತನಾಡುವ ಧೈರ್ಯವಿರುವ ಪ್ರತಿಭಾನ್ವಿತ ಹುಡುಗನಾದ ರಾಹುಲ್ ಗಾಂಧಿ ಒಂದು ಕ್ಷಣವೂ ಯೋಚನೆ ಮಾಡದೆ ತಮ್ಮ ಪಾಲಿಗೆ ಬಂದಿದ್ದ ಪ್ರಧಾನಿ ಹುದ್ದೆಯನ್ನು ತಿರಸ್ಕರಿಸಿದರು” ಎಂದು ಪಪ್ಪು ಯಾದವ್ ಎಎನ್​ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿಗೆ ಜಾಮೀನು

“ಮನಮೋಹನ್ ಸಿಂಗ್ ಅವರೇ ರಾಹುಲ್ ಗಾಂಧಿ ಬಳಿ ನೀವೇ ಪ್ರಧಾನಿ ಆಗಿ ಎಂದು ಹೇಳಿದರು. ಆದರೆ, ರಾಹುಲ್ ಗಾಂಧಿ ಅದನ್ನು ಒಂದೇ ಕ್ಷಣದಲ್ಲಿ ತಿರಸ್ಕರಿಸಿದರು. ಮನಮೋಹನ್ ಸಿಂಗ್ ಎಷ್ಟೇ ಹೇಳಿದರೂ ರಾಹುಲ್ ಅದಕ್ಕೆ ಒಪ್ಪಲಿಲ್ಲ” ಎಂದು ಪಪ್ಪು ಯಾದವ್ ಹೇಳಿದ್ದಾರೆ.


ಇದೇ ವೇಳೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ಪಪ್ಪು ಯಾದವ್, “ಕೇಂದ್ರ ಸರ್ಕಾರದಿಂದ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇಡೀ ವಿರೋಧ ಪಕ್ಷ ಮತ್ತು ನಮ್ಮ ನಾಯಕ ರಾಹುಲ್ ಗಾಂಧಿ ಸರ್ಕಾರದಿಂದ ಉತ್ತರಗಳನ್ನು ಪಡೆಯಬೇಕಾದ ಕೆಲವು ವಿಷಯಗಳನ್ನು ಚರ್ಚಿಸಿದ್ದಾರೆ” ಎಂದು ಅವರು ANI ಸಂದರ್ಶನದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತದೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಿಹಾರ ಮತ್ತು ಬಿಹಾರಿಗಳ ಮೇಲಿನ ದಾಳಿ, ಬಡವರ ಮೇಲಿನ ದಾಳಿ ಮತ್ತು ಬಡತನದ ಮೇಲಿನ ದಾಳಿಗಳು ದೊಡ್ಡ ಸಮಸ್ಯೆಗಳು. ಸರ್ಕಾರ ಈ ಸಮಸ್ಯೆಗಳನ್ನು ಬಗೆಹರಿಸುವವರೆಗೆ ಸದನವು ಕಾರ್ಯನಿರ್ವಹಿಸುವುದಿಲ್ಲ” ಎಂದು ಪಪ್ಪು ಯಾದವ್ ಹೇಳಿದ್ದಾರೆ.

ಇಂದು (ಸೋಮವಾರ) ಪ್ರಾರಂಭವಾಗಿ ಆಗಸ್ಟ್ 21ರವರೆಗೆ ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಈ ಹೇಳಿಕೆಗಳು ಬಂದಿವೆ. ಸರ್ಕಾರವು ಶಾಸಕಾಂಗ ಕಾರ್ಯಸೂಚಿಯನ್ನು ಮಂಡಿಸುವ ನಿರೀಕ್ಷೆಯಿದೆ. ಚರ್ಚೆ ಮತ್ತು ಅಂಗೀಕಾರಕ್ಕಾಗಿ ಬಹು ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:39 pm, Mon, 21 July 25