ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ

ನಿನ್ನೆ ಒಂದೇ ದಿನ 85 ಲಕ್ಷ ಜನರಿಗೆ ಲಸಿಕೆ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಹೌದು ನಿನ್ನೆ ತುಂಬ ಒಳ್ಳೆಯ ಕೆಲಸ ಆಗಿದೆ. ಆದರೆ ಇದು ಯಾವುದೇ ಸಮಾರಂಭವಲ್ಲ. ಅದೊಂದು ಪ್ರಕ್ರಿಯೆ. ಇದನ್ನು ಶ್ರದ್ಧೆಯಿಂದ ಮುಂದುವರಿಸಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೊವಿಡ್ 19 ನಿರ್ವಹಣೆ ಬಗ್ಗೆ ಶ್ವೇತಪತ್ರ ಹೊರಡಿಸಿದ ರಾಹುಲ್​ ಗಾಂಧಿ; ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಎಂದ ಕಾಂಗ್ರೆಸ್​ ಸಂಸದ
ರಾಹುಲ್​ ಗಾಂಧಿ
Follow us
TV9 Web
| Updated By: Lakshmi Hegde

Updated on: Jun 22, 2021 | 4:48 PM

ಕೊವಿಡ್ 19 ಸಾಂಕ್ರಾಮಿಕ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮೊದಲಿನಿಂದಲೂ ಆರೋಪ ಮಾಡುತ್ತಲೇ ಬಂದಿರುವ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ, ಇದೀಗ ಕೇಂದ್ರ ಸರ್ಕಾರದ ಕೊವಿಡ್​ 19 ನಿರ್ವಹಣೆ ಕುರಿತು ಶ್ವೇತಪತ್ರ ಹೊರಡಿಸಿದ್ದಾರೆ. ಶೀಘ್ರದಲ್ಲೇ ಅಪ್ಪಳಿಸಲಿರುವ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಕೊರೊನಾ ಪರಿಸ್ಥಿತಿಯನ್ನು ಇಷ್ಟು ದಿನವಂತೂ ಸರಿಯಾಗಿ ನಿಭಾಯಿಸಲಿಲ್ಲ. ಇನ್ನು ಮುಂದೆಯೂ ಸಹ ಸರಿಯಾಗಿ ನಿಭಾಯಿಸದೆ ಇದ್ದರೆ ಹೀಗೆ ಕೊರೊನಾದ ಹಲವು ಅಲೆಗಳು ಬರುತ್ತವೆ ಎಂದು ಎಚ್ಚರಿಸಿದ್ದಾರೆ.

ಇಂದು ಡಿಜಿಟಲ್​ ಪ್ರೆಸ್​ಕಾನ್ಫರೆನ್ಸ್​ನಲ್ಲಿ ಮಾತನಾಡಿದ ರಾಹುಲ್​ ಗಾಂಧಿ, ನಾನಿವತ್ತು ಹೊರಡಿಸಿದ ಶ್ವೇತಪತ್ರದ ಉದ್ದೇಶ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದಲ್ಲ. ಮೂರನೇ ಅಲೆಯ ಬಗ್ಗೆ ಈ ದೇಶದ ಜನರನ್ನು ಎಚ್ಚರಿಸುವುದು ಎಂದು ಹೇಳಿದ್ದಾರೆ. ಹಾಗೇ, ಕೇಂದ್ರ ಸರ್ಕಾರ ಮೊದಲು ಮತ್ತು ಎರಡನೇ ಅಲೆಯ ಕೊವಿಡ್​ 19ನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ. ಹಾಗಾಗಿ ಇವೆರಡೂ ಅಲೆಗಳು ಅತ್ಯಂತ ವಿನಾಶಕಾರಿಯಾಗಿ ಪರಿಣಮಿಸಿದ್ದವು ಎಂದು ಶ್ವೇತಪತ್ರದಲ್ಲಿ ಹೇಳಿದ್ದಾರೆ.

ಕೊರೊನಾ ಮೂರನೇ ಅಲೆ ಬರುತ್ತದೆ ಎಂಬುದು ಇಡೀ ದೇಶಕ್ಕೇ ಗೊತ್ತು. ಅದರಲ್ಲೂ ವೈರಸ್​ ರೂಪಾಂತರಗೊಳ್ಳುತ್ತಿರುವುದರಿಂದ ಅದು ಇನ್ನಷ್ಟು ಮಾರಣಾಂತಿಕ ಆಗಬಹುದು. ಸಾಂಕ್ರಾಮಿಕ ನಿರ್ವಹಣೆಗೆ ಸಂಬಂಧಿಸಿದಂತೆ ಯಾರೇನೇ ಸಲಹೆ ನೀಡಿದರೂ ಕೇಂದ್ರ ಸರ್ಕಾರ ಅದನ್ನು ಸ್ವೀಕರಿಸದೆ ನಿರ್ಲಕ್ಷ್ಯ ಮಾಡುತ್ತದೆ ಎಂದ ರಾಹುಲ್​ ಗಾಂಧಿ, ಸರ್ಕಾರದ ತೀವ್ರ ನಿರ್ಲಕ್ಷ್ಯ ಮತ್ತು ಕೆಟ್ಟ ನಿರ್ವಹಣೆಯಿಂದಾಗಿ ಇಡೀ ದೇಶಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು.

ಜೀವ ಉಳಿಸಿದ್ದು ಪ್ರಧಾನಿ ಕಣ್ಣೀರಲ್ಲ ಕೊವಿಡ್ 19 ಎರಡನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಸಿಕ್ಕಾಪಟೆ ಆಕ್ಸಿಜನ್​ ಕೊರತೆ ಎದುರಾಯಿತು. ಆಮ್ಲಜನಕವಿಲ್ಲದೆ ಜೀವ ಕಳೆದುಕೊಂಡವರಲ್ಲಿ ಶೇ.90ರಷ್ಟು ಜನರನ್ನು ಉಳಿಸಬಹುದಿತ್ತು. ಸರಿಯಾದ ಸಮಯದಲ್ಲಿ ಆಕ್ಸಿಜನ್ ಲಭ್ಯವಾಗುವಂತೆ ಮಾಡಿದ್ದರೆ ಅವರು ಬದುಕುಳಿಯುತ್ತಿದ್ದರು. ಆಕ್ಸಿಜನ್​ ಲಭ್ಯವಾಗದೆ ಇದ್ದಾಗ ಪ್ರಧಾನಿಯ ಕಣ್ಣೀರು ಜನರ ಜೀವ ರಕ್ಷಣೆ ಮಾಡಲಿಲ್ಲ ಎಂದು ರಾಹುಲ್​ ಗಾಂಧಿ ವ್ಯಂಗ್ಯ ಮಾಡಿದರು.

ಸಣ್ಣ ಉದ್ದಿಮೆಗಳಿಗೆ ಸಹಾಯ ಮಾಡಿ ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ಸಣ್ಣ ಉದ್ದಿಮೆದಾರರು ಮತ್ತು ಬಡವರಿಗೆ ಸಹಾಯ ಮಾಡಬೇಕು. ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ನೀಡಲೆಂದು ಕೊವಿಡ್​ 19 ಪರಿಹಾರ ನಿಧಿ ಸ್ಥಾಪಿಸಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ನಿನ್ನೆ ಒಂದೇ ದಿನ 85 ಲಕ್ಷ ಜನರಿಗೆ ಲಸಿಕೆ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಹೌದು ನಿನ್ನೆ ತುಂಬ ಒಳ್ಳೆಯ ಕೆಲಸ ಆಗಿದೆ. ಆದರೆ ಇದು ಯಾವುದೇ ಸಮಾರಂಭವಲ್ಲ. ಅದೊಂದು ಪ್ರಕ್ರಿಯೆ. ಇದನ್ನು ಶ್ರದ್ಧೆಯಿಂದ ಮುಂದುವರಿಸಬೇಕು. ಎಲ್ಲರಿಗೂ ಲಸಿಕೆ ಕೊಟ್ಟು ಮುಗಿಯುವವರೆಗೂ ನಿರಂತರವಾಗಿ ಈ ಪ್ರಕ್ರಿಯೆ ನಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಬಳಿ ಚರ್ಚಿಸಿದ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

(Rahul Gandhi released a white paper on the Central governments covid 19 management)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್