AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದಕ್ಕೆ 40 ಲಕ್ಷ ರೂ. ಪ್ಯಾಕೇಜ್‌ನ ವರನನ್ನೇ ರಿಜೆಕ್ಟ್ ಮಾಡಿದ ಯುವತಿ

ರಾಹುಲ್ ಗಾಂಧಿಯನ್ನು ರೋಲ್ ಮಾಡೆಲ್ ಎಂದು ಭಾವಿಸಿದ್ದ 40 ಲಕ್ಷ ರೂ. ಪ್ಯಾಕೇಜ್ ವರನ ಪ್ರಸ್ತಾಪವನ್ನು ಯುವತಿಯೊಬ್ಬಳು ತಿರಸ್ಕರಿಸಿದ್ದು ವೈರಲ್ ಆಗಿದೆ. ತಾನೊಬ್ಬ ಹೆಮ್ಮೆಯ ರಾಷ್ಟ್ರವಾದಿ ಹಿಂದೂ ಎಂದು ಹೇಳಿಕೊಂಡಿರುವ ಆ ಯುವತಿ, 'ಸೋಲುಣ್ಣುವ ವ್ಯಕ್ತಿಯನ್ನು ಆದರ್ಶವೆಂದು ಭಾವಿಸುವವರನ್ನು ಜೀವನಸಂಗಾತಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲ' ಎಂದಿದ್ದಾಳೆ. ಈ ಘಟನೆ ರಾಜಕೀಯ ಸಿದ್ಧಾಂತ ಹಾಗೂ ವೈಯಕ್ತಿಕ ಆಯ್ಕೆಗಳ ಕುರಿತು ತೀವ್ರ ಚರ್ಚೆಗೆ ಗ್ರಾಸವಾಗಿದೆ.

'ರಾಹುಲ್ ಗಾಂಧಿ ರೋಲ್ ಮಾಡೆಲ್' ಎಂದಿದ್ದಕ್ಕೆ 40 ಲಕ್ಷ ರೂ. ಪ್ಯಾಕೇಜ್‌ನ ವರನನ್ನೇ ರಿಜೆಕ್ಟ್ ಮಾಡಿದ ಯುವತಿ
ವೈರಲ್​​ ಪೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on:Aug 21, 2026 | 3:53 PM

Share

ದೆಹಲಿ, ಆ.21: ಮದುವೆ ನಿಶ್ಚಯವಾಗುವಾಗ ವರನ ಕೆಲಸ, ಸಂಬಳ ಹಾಗೂ ಕುಟುಂಬದ ಹಿನ್ನೆಲೆಯನ್ನು ನೋಡುವುದು ಸಾಮಾನ್ಯ. ಆದರೆ, ಯುವಕನೊಬ್ಬ ವಾರ್ಷಿಕ 40 ಲಕ್ಷ ರೂಪಾಯಿ ಪ್ಯಾಕೇಜ್ ಹೊಂದಿದ್ದು, ಸುಂದರ ಆಗಿದ್ದರೂ ಸಹ ವಿಚಿತ್ರ ಕಾರಣಕ್ಕಾಗಿಯೇ ಆತನ ಮದುವೆ ಪ್ರಸ್ತಾಪವನ್ನು ಯುವತಿಯೊಬ್ಬಳು ತಿರಸ್ಕರಿಸಿರುವ ಘಟನೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (X) ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಹುಲ್​​​ ಗಾಂಧಿಯ ವಿಚಾರಕ್ಕೆ ಯುವತಿಯೊಬ್ಬಳು ವರನ್ನು ತಿರಸ್ಕರ ಮಾಡಿರುವುದು ಎಲ್ಲ ಕಡೆ ವೈರಲ್​ ಆಗಿದೆ.

ವೈರಲ್ ಪೋಸ್ಟ್‌ನಲ್ಲೇನಿದೆ?

‘ಆರುಹಿ ರೆಡ್ಡಿ’ (Aaruhi Reddy) ಎಂಬ ಹೆಸರಿನ ಎಕ್ಸ್ ಖಾತೆಯಿಂದ ಈ ಪೋಸ್ಟ್ ಹಂಚಿಕೊಳ್ಳಲಾಗಿದ್ದು, “ನನಗೆ ಇತ್ತೀಚೆಗೆ ಮದುವೆ ಪ್ರಸ್ತಾಪವೊಂದು ಬಂದಿತ್ತು. ಆ ಯುವಕ ನೋಡಲು ಸುಂದರವಾಗಿದ್ದ, ವಾರ್ಷಿಕ 40 ಲಕ್ಷ ರೂ. ಆಕರ್ಷಕ ಪ್ಯಾಕೇಜ್ ಮತ್ತು ಉತ್ತಮ ಕುಟುಂಬದ ಹಿನ್ನೆಲೆ ಹೊಂದಿದ್ದ. ಆದರೆ ನಾನು ಆತನನ್ನು ಒಂದೇ ಕಾರಣಕ್ಕೆ ತಿರಸ್ಕರಿಸಿದೆ. ಆತನ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ತನ್ನ ‘ರೋಲ್ ಮಾಡೆಲ್’ ಎಂದು ಬರೆದುಕೊಂಡಿದ್ದ” ಎಂದು ಯುವತಿ ಬರೆದುಕೊಂಡಿದ್ದಾಳೆ.

ಈ ಪೋಸ್ಟ್‌ನಲ್ಲಿ ಇನ್ನು ಕೆಲವು ವಿಚಾರಗಳು ತಿಳಿಸಿದ್ದಾಳೆ. “ನಾನೊಬ್ಬ ಹೆಮ್ಮೆಯ ರಾಷ್ಟ್ರವಾದಿ ಹಿಂದೂ. ಸೋಲುಣ್ಣುವ ವ್ಯಕ್ತಿಯನ್ನು (Loser) ತನ್ನ ಆದರ್ಶ ಎಂದು ಭಾವಿಸುವ ವ್ಯಕ್ತಿಯನ್ನು ನನ್ನ ಜೀವನಸಂಗಾತಿಯಾಗಿ ಸ್ವೀಕರಿಸಲು ಸಾಧ್ಯವೇ ಇಲ್ಲ” ನನಗೆ ಹಣ, ಸಂಪತ್ತಿಗಿಂತ  ನನ್ನ ದೇಶ ಮುಖ್ಯ ಎಂದು ಸ್ಪಷ್ಟಪಡಿಸಿದ್ದಾಳೆ. ಕಾಮೆಂಟ್ ವಿಭಾಗದಲ್ಲಿ ಯುವತಿಯು ತನಗೆ ಕಳೆದ ತಿಂಗಳಷ್ಟೇ 18 ವರ್ಷ ತುಂಬಿದೆ ಎಂದು ತಿಳಿಸಿದ್ದಾಳೆ.

ಇದನ್ನೂ ಓದಿ: ಸೀರೆ ಧರಿಸಿ ತೃತೀಯಲಿಂಗಿಯಂತೆ ನಟಿಸಿ ಮನೆಗೆ ಎಂಟ್ರಿ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಗದು ದೋಚಿ ವ್ಯಕ್ತಿ ಪರಾರಿ

ಇಲ್ಲಿದೆ ನೋಡಿ ಪೋಸ್ಟ್​:

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವರು ಯುವತಿಯ ವೈಯಕ್ತಿಕ ನಿಲುವು ಮತ್ತು ಸಿದ್ಧಾಂತವನ್ನು ಬೆಂಬಲಿಸಿದ್ದರೆ, ಇನ್ನು ಕೆಲವರು ರಾಜಕೀಯ ವಿಚಾರಗಳನ್ನು ಜೀವನಸಂಗಾತಿಯ ಆಯ್ಕೆಗೆ ತರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 am, Fri, 21 August 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​