AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಸುಸ್ತಾಗಿದೆ ಎಂದು ಶೇ. 20ರಷ್ಟು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಲೇ ಇಲ್ಲ ಎಂದ ಇಡಿ; ರಾಹುಲ್ ಹೇಳಿದ್ದೇ ಬೇರೆ ಕತೆ!

ಇಷ್ಟು ಸುದೀರ್ಘ ಕಾಲ ವಿಚಾರಣೆ ನಡೆಸಿದರೂ ನಿಮಗೆ ಸುಸ್ತಾಗಲಿಲ್ಲವೇ? ಎಂದು ಕೇಳಿದರು. ನಿಮ್ಮ ತಾಳ್ಮೆಯ ಗುಟ್ಟೇನು? ಎಂದು ಇಡಿ ಅಧಿಕಾರಿಗಳು ನನ್ನ ಬಳಿ ಕೇಳಿದರು ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.

Rahul Gandhi: ಸುಸ್ತಾಗಿದೆ ಎಂದು ಶೇ. 20ರಷ್ಟು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಲೇ ಇಲ್ಲ ಎಂದ ಇಡಿ; ರಾಹುಲ್ ಹೇಳಿದ್ದೇ ಬೇರೆ ಕತೆ!
ರಾಹುಲ್ ಗಾಂಧಿ (ಫೋಟೋ ಕೃಪೆ-ಪಿಟಿಐ)
TV9 Web
| Edited By: |

Updated on:Jun 24, 2022 | 9:15 AM

Share

ನವದೆಹಲಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಇಡಿ ವಿಚಾರಣೆ ನಡೆಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಯ ಸಂದರ್ಭದಲ್ಲಿ ಬೆಂಬಲ ನೀಡಿದ ತಮ್ಮ ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ. ನಾನು ತಾಳ್ಮೆಯಿಂದ ಅವರ ಪ್ರಶ್ನೆಗಳಿಗೆ ಉತ್ತರಿಸಿದ್ದನ್ನು ಕಂಡು ಇಡಿ (ED) ಅಧಿಕಾರಿಗಳೇ ಆಶ್ಚರ್ಯಪಟ್ಟರು. ಇಷ್ಟು ಸುದೀರ್ಘ ಕಾಲ ವಿಚಾರಣೆ ನಡೆಸಿದರೂ ನಿಮಗೆ ಸುಸ್ತಾಗಲಿಲ್ಲವೇ? ಎಂದು ಕೇಳಿದರು. ನಿಮ್ಮ ತಾಳ್ಮೆ, ಸಾಮರ್ಥ್ಯದ ಗುಟ್ಟೇನು? ಎಂದು ಇಡಿ ಅಧಿಕಾರಿಗಳು ನನ್ನ ಬಳಿ ಕೇಳಿದರು ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.

ಅದಕ್ಕೆ ನಾನು ಇಷ್ಟು ವರ್ಷಗಳ ಕಾಲ ಕಾಂಗ್ರೆಸ್​ನಲ್ಲಿ ಕೆಲಸ ಮಾಡುತ್ತಿರುವ ನನ್ನಂತಹ ಎಲ್ಲರೂ ತಾಳ್ಮೆಯಿಂದ ತಪಸ್ಸನ್ನು ಹೊಂದಿದ್ದಾರೆ ಎಂದು ಹೇಳಿದೆ ಎಂದು ರಾಹುಲ್ ಗಾಂಧಿ ವಿಚಾರಣೆ ಬಳಿಕ ಹೇಳಿಕೊಂಡಿದ್ದಾರೆ. ಆದರೆ, ರಾಹುಲ್ ಗಾಂಧಿಯ ವಿಚಾರಣೆ ಬಗ್ಗೆ ಇಡಿ ಮೂಲಗಳು ಕೆಲವು ಅಂಶಗಳನ್ನು ಬಹಿರಂಗಪಡಿಸಿದ್ದು, ರಾಹುಲ್ ಗಾಂಧಿ ಶೇ. 20ರಷ್ಟು ಪ್ರಶ್ನೆಗಳಿಗೆ ಉತ್ತರಿಸಲೇ ಇಲ್ಲ. ನನಗೆ ತುಂಬಾ ಸುಸ್ತಾಗಿದೆ ಎಂದು ಅವರು ಆ ಪ್ರಶ್ನೆಗಳಿಂದ ಜಾರಿಕೊಂಡರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಮಿತ್ ಶಾ, ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪ್ರಯೋಗಿಸಿದ್ದ ಅಸ್ತ್ರವೇ ರಾಹುಲ್, ಸೋನಿಯಾ ಗಾಂಧಿಗೆ ತಿರುಗುಬಾಣವಾಯಿತೇ?

ಇದನ್ನೂ ಓದಿ
Image
Viral News: ಕೆಟ್ಟ ಕನಸಿಗೆ ಹೆದರಿ ಕದ್ದ ದೇವರ ವಿಗ್ರಹಗಳನ್ನು ವಾಪಾಸ್ ತಂದಿಟ್ಟ ಕಳ್ಳರು; ಅಂಥದ್ದೇನಾಯ್ತು?
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಕಾಲ್ಪನಿಕ ಕತೆ ಎಂದ ವಿಕಿಪೀಡಿಯಾ ಬರಹ; ವಿವೇಕ್ ಅಗ್ನಿಹೋತ್ರಿ ತೀವ್ರ ಆಕ್ಷೇಪ
Image
ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ

ಜಾರಿ ನಿರ್ದೇಶನಾಲಯದ ವಿಚಾರಣೆ ವೇಳೆ ತಮಗೆ ನೈತಿಕ ಬೆಂಬಲ ನೀಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ಇತರೆ ಪಕ್ಷಗಳ ನಾಯಕರಿಗೆ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದ್ದಾರೆ. ಈ ವಿಚಾರಣೆ ವೇಳೆ ನಾನು ಒಬ್ಬಂಟಿಯಾಗಿರಲಿಲ್ಲ. ಪ್ರಜಾಪ್ರಭುತ್ವಕ್ಕಾಗಿ ಹೋರಾಡುವ ಎಲ್ಲರೂ ನನ್ನ ಜೊತೆಗಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅದಕ್ಕೆ ನಾನು ಇಷ್ಟು ವರ್ಷಗಳ ಕಾಲ ಕಾಂಗ್ರೆಸ್​ನಲ್ಲಿ ಕೆಲಸ ಮಾಡುತ್ತಿರುವ ನನ್ನಂತಹ ಎಲ್ಲರೂ ತಾಳ್ಮೆಯಿಂದ ತಪಸ್ಸನ್ನು ಹೊಂದಿದ್ದಾರೆ ಎಂದು ಹೇಳಿದೆ ಎಂದು ರಾಹುಲ್ ಗಾಂಧಿ ವಿಚಾರಣೆ ಬಳಿಕ ಹೇಳಿಕೊಂಡಿದ್ದಾರೆ. ನಾನು ಮಾತ್ರವಲ್ಲ ಸಚಿನ್ ಪೈಲಟ್, ಸಿದ್ದರಾಮಯ್ಯ, ಖರ್ಗೆ ಅವರಂತಹ ನಾಯಕರೆಲ್ಲರಿಗೂ ಈ ಗುಣ ಒಲಿದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇಡಿ ಅವರನ್ನು ಪ್ರಶ್ನಿಸಿದ ನಂತರ ಅವರಿಗೆ ಒಗ್ಗಟ್ಟು ವ್ಯಕ್ತಪಡಿಸಲು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಮಾವೇಶಗೊಂಡ ದೇಶದ ಕಾಂಗ್ರೆಸ್ ಸಂಸದರು ಮತ್ತು ಶಾಸಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ?:

ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿತ್ತು. ಇದು 1937ರಲ್ಲಿ 5,000 ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಅದರ ಷೇರುದಾರರಾಗಿ ಸ್ಥಾಪಿಸಿತು. ಈ ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ. 2010ರಲ್ಲಿ, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 1,057 ಷೇರುದಾರರನ್ನು ಹೊಂದಿತ್ತು. ಇದು ತೀವ್ರ ನಷ್ಟವನ್ನು ಅನುಭವಿಸಿತು. ಹೀಗಾಗಿ, ಅದರ ಹಿಡುವಳಿಗಳನ್ನು 2011ರಲ್ಲಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (YIL)ಗೆ ವರ್ಗಾಯಿಸಲಾಯಿತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅದರ ನಿರ್ದೇಶಕರ ಮಂಡಳಿಯಲ್ಲಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಾಗ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರು ‘ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?

2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲ ಸುಬ್ರಮಣಿಯನ್ ಸ್ವಾಮಿ ಅವರು ಯಂಗ್ ಇಂಡಿಯನ್ ಲಿಮಿಟೆಡ್ (ವೈಐಎಲ್) ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಕೆಲವು ಕಾಂಗ್ರೆಸ್ ನಾಯಕರು ವಂಚನೆ ಮತ್ತು ನಂಬಿಕೆಯ ಉಲ್ಲಂಘನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ವಿಚಾರಣಾ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದರು. ವೈಐಎಲ್ ನ್ಯಾಷನಲ್ ಹೆರಾಲ್ಡ್​ನ ಆಸ್ತಿಯನ್ನು ‘ದುರುದ್ದೇಶಪೂರಿತ’ ರೀತಿಯಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದರು.

Published On - 9:09 am, Fri, 24 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ