Bharat Jodo Yatra: ಬಿಜೆಪಿ, ಆರ್‌ಎಸ್‌ಎಸ್ ನಾಯಕರು ದಲಿತರನ್ನು ಓಲೈಸಲು ಅಂಬೇಡ್ಕರ್ ಮುಂದೆ ಕೈ ಜೋಡಿಸಿ, ಬೆನ್ನಿಗೆ ಚೂರಿ ಹಾಕುತ್ತಾರೆ: ರಾಹುಲ್ ಗಾಂಧಿ

ಬಿಜೆಪಿ(BJP) ಮತ್ತು ಆರ್‌ಎಸ್‌ಎಸ್(RSS) ನಾಯಕರು ಸಂವಿಧಾನ(Constitution)ವನ್ನು ಕತ್ತು ಹಿಸುಕಲು ಮತ್ತು ನಾಶಮಾಡಲು ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Bharat Jodo Yatra: ಬಿಜೆಪಿ, ಆರ್‌ಎಸ್‌ಎಸ್ ನಾಯಕರು ದಲಿತರನ್ನು ಓಲೈಸಲು ಅಂಬೇಡ್ಕರ್ ಮುಂದೆ ಕೈ ಜೋಡಿಸಿ, ಬೆನ್ನಿಗೆ ಚೂರಿ ಹಾಕುತ್ತಾರೆ: ರಾಹುಲ್ ಗಾಂಧಿ
Rahul Gandhi
Follow us
TV9 Web
| Updated By: ನಯನಾ ರಾಜೀವ್

Updated on: Nov 27, 2022 | 11:39 AM

ಬಿಜೆಪಿ(BJP) ಮತ್ತು ಆರ್‌ಎಸ್‌ಎಸ್(RSS) ನಾಯಕರು ಸಂವಿಧಾನ(Constitution)ದ ಕತ್ತು ಹಿಸುಕಲು ಮತ್ತು ನಾಶಮಾಡಲು ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ, ಆರ್​ಎಸ್​ಎಸ್​ ನಾಯಕರು ದಲಿತರ ಓಲೈಸಲು  ಬಿಆರ್ ಅಂಬೇಡ್ಕರ್ ಅವರ ಮುಂದೆ ಕೈ ಜೋಡಿಸಿ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಮಧ್ಯಪ್ರದೇಶದಲ್ಲಿ ಉಪಸ್ಥಿತರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮೊವ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನವು ಕೇವಲ ಪುಸ್ತಕವಾಗಿರದೆ ಜೀವಂತ ಶಕ್ತಿ, ಚಿಂತನೆ ಮತ್ತು ಧ್ವನಿಯಾಗಿದ್ದು, ಆ ಶಕ್ತಿಯನ್ನು ನಾಶ ಮಾಡಲು ಆರ್‌ಎಸ್‌ಎಸ್ ಬಯಸುತ್ತಿದೆ ಎಂದು ಹೇಳಿದರು.

ನ್ಯಾಯಾಂಗ, ಮಾಧ್ಯಮ, ಸೇನೆ ಸೇರಿದಂತೆ ದೇಶದ ಪ್ರತಿಯೊಂದು ಸಂಸ್ಥೆಗಳಲ್ಲೂ ಸಂಘದ ಪ್ರಭಾವವಿದೆ ಎಂದು ರಾಹುಲ್ ಹೇಳಿದ್ದಾರೆ. ಸಂವಿಧಾನದಿಂದ ತ್ರಿವರ್ಣ ಧ್ವಜಕ್ಕೆ ಬಲ ಬಂದಿದೆ, ಆರ್‌ಎಸ್‌ಎಸ್ ತನ್ನ ಕೇಂದ್ರ ಕಚೇರಿಯಲ್ಲಿ 52 ವರ್ಷಗಳಿಂದ ರಾಷ್ಟ್ರಧ್ವಜವನ್ನು ಹಾರಿಸಿಲ್ಲ. ಅವರು (ಬಿಜೆಪಿ-ಆರ್‌ಎಸ್‌ಎಸ್) ಅಂಬೇಡ್ಕರ್ ಅವರ ಮುಂದೆ ಕೈ ಜೋಡಿಸಿ ನಂತರ ಬಾಬಾಸಾಹೇಬರು ನಿರ್ಮಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಂವಿಧಾನವನ್ನು ನಾಶಮಾಡಲು ಮತ್ತು ಹರಿದು ಹಾಕಲು ಪ್ರಯತ್ನಿಸುತ್ತಾರೆ.

ಅವರು ಎಂದಿಗೂ ಅಂಬೇಡ್ಕರ್ ಅವರನ್ನು ಬಹಿರಂಗವಾಗಿ ಅವಮಾನಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು. RSS ನವರು ಈಗ ಏನು ಮಾಡುತ್ತಿದ್ದಾರೆ? ಮೊದಲು ಅವರು ಗಾಂಧಿ ಮುಂದೆ ಕೈ ಜೋಡಿಸಲಿಲ್ಲ. ಮೊದಲು ಅವರು ಗೋಡ್ಸೆಯ ಮುಂದೆ ಕೈ ಜೋಡಿಸುತ್ತಿದ್ದರು ಆದರೆ ಇಂದು ಅವರು ಗಾಂಧಿಯ ಮುಂದೆ ಬಲವಂತವಾಗಿ ಬಾಗುತ್ತಿದ್ದಾರೆ, ಗಾಂಧಿಯವರ ಪ್ರತಿಮೆಯ ಮುಂದೆ ಕೈ ಜೋಡಿಸಿ ನಂತರ ಅವರ ಅಹಿಂಸೆಯ ಸಂದೇಶವನ್ನು ಅಳಿಸಲು ಪ್ರಯತ್ನಿಸುತ್ತಿದ್ದಾರೆ. ಆರ್​ಎಸ್​ಎಸ್​ ಮತ್ತು ಬಿಜೆಪಿಗೆ ಸಂವಿಧಾನವನ್ನು ಬಹಿರಂಗವಾಗಿ ನಾಶಮಾಡಲು ಧೈರ್ಯವಿಲ್ಲ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ