ದೆಹಲಿ: ಅಸಮರ್ಥೆಯ ಲಾಕ್ಡೌನ್ನಿಂದಾಗಿ ದೇಶದ ಜನರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಈ ಹಿಂದೆ ಹೇಳಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ದೇಶದಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್ಡೌನ್ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಟ್ವೀಟ್ನಲ್ಲಿ ಹೇಳಿದರು.
ಕಳೆದ ಬಾರಿ ದೇಶದಲ್ಲಿ ಕೊರೊನಾ ಸೋಂಕಿನಿಂದ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿತ್ತು. ಯೋಜಿತವಲ್ಲದ ಲಾಕ್ಡೌನ್ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟವನ್ನು ಅನುಭವಿಸಿದ್ದರು ಎಂದು ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾ ವಿರುದ್ಧ ಹೋರಾಡಲು ಲಾಕ್ಡೌನ್ ಅನಿವಾರ್ಯವೆಂದು ಇದೀಗ ಟ್ವೀಟ್ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
GOI doesn’t get it.
The only way to stop the spread of Corona now is a full lockdown- with the protection of NYAY for the vulnerable sections.
GOI’s inaction is killing many innocent people.
— Rahul Gandhi (@RahulGandhi) May 4, 2021
ಇದನ್ನೂ ಓದಿ
Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ
(Rahul Gandhi says it was appropriate to implement a lockdown in country to fight corona in twitter)
Published On - 10:52 am, Tue, 4 May 21