One Nation One Election: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಮೌನಮುರಿದ ರಾಹುಲ್ ಗಾಂಧಿ

|

Updated on: Sep 03, 2023 | 2:32 PM

ಭಾರತವು ರಾಜ್ಯಗಳ ಒಕ್ಕೂಟ, ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ ನಂತರ ಟ್ವೀಟ್ ಮಾಡಿದ್ದಾರೆ.

One Nation One Election: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಮೌನಮುರಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Image Credit source: The Siasat Daily
Follow us on

ಭಾರತವು ರಾಜ್ಯಗಳ ಒಕ್ಕೂಟ, ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ ನಂತರ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಅನುಷ್ಠಾನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯ ಭಾಗವಾಗುವ ಆಹ್ವಾನವನ್ನು ನಿರಾಕರಿಸಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವ ಬಗ್ಗೆಯೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆ ಬದಲಿಗೆ ಪ್ರತಿಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸರ್ಕಾರ ಸಮಿತಿಗೆ ಸೇರಿಸಿದೆ. ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇದ್ದಾರೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಸಮಿತಿಗೆ ಸರ್ಕಾರ ಶನಿವಾರ ಸೂಚನೆ ನೀಡಿದೆ.

ಮತ್ತಷ್ಟು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದರೆ ಏನು?; ಇದರ ಸಾಧಕ-ಬಾಧಕಗಳೇನು?

ಸಮಿತಿಯು ಸಂವಿಧಾನಕ್ಕೆ ನಿರ್ದಿಷ್ಟ ತಿದ್ದುಪಡಿಗಳನ್ನು, ಪ್ರಜಾಪ್ರತಿನಿಧಿ ಕಾಯಿದೆ ಮತ್ತು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಉದ್ದೇಶಕ್ಕಾಗಿ ತಿದ್ದುಪಡಿಗಳ ಅಗತ್ಯವಿರುವ ಯಾವುದೇ ಇತರ ಕಾನೂನುಗಳು ಮತ್ತು ನಿಯಮಗಳನ್ನು ಪರಿಶೀಲಿಸುತ್ತದೆ ಮತ್ತು ಶಿಫಾರಸು ಮಾಡುತ್ತದೆ.

ಸಂವಿಧಾನದ ತಿದ್ದುಪಡಿಗಳಿಗೆ ರಾಜ್ಯಗಳ ಅನುಮೋದನೆಯ ಅಗತ್ಯವಿದ್ದಲ್ಲಿ ಅದು ಶಿಫಾರಸು ಮಾಡುತ್ತದೆ. ಈ ಸಮಿತಿಯು ಸಾಂವಿಧಾನಿಕವಾಗಿ ಸರಿಯಾಗಿಲ್ಲ. ಇದಲ್ಲದೆ, ಪ್ರಾಯೋಗಿಕ ಮತ್ತು ತಾರ್ಕಿಕ ದೃಷ್ಟಿಕೋನದಿಂದ ಇದು ಸೂಕ್ತವಲ್ಲ. ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ಸಮಿತಿಯನ್ನೂ ರಚಿಸಲಾಗಿದೆ.

ರಾಹುಲ್ ಗಾಂಧಿ ಟ್ವೀಟ್

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನು ಈ ಸಮಿತಿಯಲ್ಲಿ ಇರಿಸದೇ ಇರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಎಂದರು. ಈ ಪರಿಸ್ಥಿತಿಯಲ್ಲಿ ಸಮಿತಿಯ ಸದಸ್ಯನಾಗುವ ಆಹ್ವಾನವನ್ನು ತಿರಸ್ಕರಿಸದೆ ನನಗೆ ಬೇರೆ ದಾರಿಯಿಲ್ಲ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಭಾರತದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ ಮಾಡುವ ವ್ಯವಸ್ಥಿತ ಪ್ರಯತ್ನವಲ್ಲದೆ ಬೇರೇನೂ ಅಲ್ಲ ಎಂದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:31 pm, Sun, 3 September 23