ಇಂಡಿ ಮೈತ್ರಿಕೂಟವು ಮೋದಿಯವರ ಆತ್ಮವಿಶ್ವಾಸವನ್ನು ಬುಡಮೇಲು ಮಾಡಿದೆ: ರಾಹುಲ್ ಗಾಂಧಿ

ಚುನಾವಣೆಯ ಸಂದರ್ಭದ ಇಂಡಿ ಮೈತ್ರಿಯು ಪ್ರಧಾನಿ ನರೇಂದ್ರ ಮೋದಿಯವರ ಆತ್ಮವಿಶ್ವಾಸವನ್ನು ಬುಡಮೇಲು ಮಾಡಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯಾ ನಂತರ ಹಲವು ಬಾರಿ ಕೇಂದ್ರಾಡಳಿತ ಪ್ರದೇಶವನ್ನು ರಾಜ್ಯವನ್ನಾಗಿ ಪರಿವರ್ತಿಸಲಾಗಿದೆ ಆದರೆ ರಾಜ್ಯದ ಸ್ಥಾನಮಾನವನ್ನು ಕಸಿದುಕೊಂಡು ಕೇಂದ್ರಾಡಳಿತ ಪ್ರದೇಶ ಮಾಡಿದ ಉದಾಹರಣೆ ಒಂದೇ ಇದೆ.

ಇಂಡಿ ಮೈತ್ರಿಕೂಟವು ಮೋದಿಯವರ ಆತ್ಮವಿಶ್ವಾಸವನ್ನು ಬುಡಮೇಲು ಮಾಡಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Aug 22, 2024 | 2:11 PM

ಇಂಡಿ ಮೈತ್ರಿ ಕೂಟವು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಆತ್ಮ ವಿಶ್ವಾಸವನ್ನು ಬುಡಮೇಲು ಮಾಡಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿ ಸಿದ್ಧಾಂತ, ಪ್ರೀತಿ ಮತ್ತು ಏಕತೆ ನರೇಂದ್ರ ಮೋದಿಯವರ ಆತ್ಮಸ್ಥೈರ್ಯವನ್ನು ಮುರಿದಿದೆ ಎಂದರು.

ಕಾಶ್ಮೀರದಲ್ಲಿ ಜನರನ್ನುದ್ದೇಶಿ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯಾ ನಂತರ ಹಲವು ಬಾರಿ ಕೇಂದ್ರಾಡಳಿತ ಪ್ರದೇಶವನ್ನು ರಾಜ್ಯವನ್ನಾಗಿ ಪರಿವರ್ತಿಸಲಾಗಿದೆ ಆದರೆ ರಾಜ್ಯದ ಸ್ಥಾನಮಾನವನ್ನು ಕಸಿದುಕೊಂಡು ಕೇಂದ್ರಾಡಳಿತ ಪ್ರದೇಶ ಮಾಡಿದ ಉದಾಹರಣೆ ಒಂದೇ ಇದೆ ಎಂದರು. ಜಮ್ಮು ಮತ್ತು ಕಾಶ್ಮೀರದ ಜನರ ಪ್ರಾತಿನಿಧ್ಯ ನಮಗೆ ಮತ್ತು ದೇಶದ ಜನರಿಗೆ ಮುಖ್ಯ, ಅದಕ್ಕಾಗಿಯೇ ನಾವು ಇಲ್ಲಿಗೆ ಮೊದಲು ಬಂದಿದ್ದೇವೆ ಎಂದರು.

ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಇಂಡಿ ಮೈತ್ರಿಯು ನರೇಂದ್ರ ಮೋದಿಯವರ ಆತ್ಮವಿಶ್ವಾಸವನ್ನು ನಾಶಪಡಿಸಿದೆ ಎಂದು ಹೇಳಿದರು. ನಾನು ಇಡೀ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸುತ್ತೇನೆ ಆದರೆ ಜಮ್ಮು ಮತ್ತು ಕಾಶ್ಮೀರದ ಜನರ ಹೃದಯ ನೋವನ್ನು ಅಳಿಸುವುದು ನನ್ನ ಗುರಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರ ಮತ್ತು ಹರ್ಯಾಣ ಚುನಾವಣೆ ವೇಳಾಪಟ್ಟಿ ಪ್ರಕಟ; ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಿಮ್ಮ ಭಯ, ನೀವು ಅನುಭವಿಸುವ ದುಃಖ, ನಾನು, ಮಲ್ಲಿಕಾರ್ಜುನ ಖರ್ಗೆ, ಇಡೀ ಕಾಂಗ್ರೆಸ್ ಪಕ್ಷವು ಶಾಶ್ವತವಾಗಿ ಅಳಿಸಲು ಬಯಸುತ್ತದೆ. ದ್ವೇಷವನ್ನು ಪ್ರೀತಿಯಿಂದ ಸೋಲಿಸುತ್ತೇವೆ.

ಚುನಾವಣೆ ನಡೆಯಲಿದೆ ಎಂದು ತಿಳಿದ ಕೂಡಲೇ ಮಲ್ಲಿಕಾರ್ಜುನ ಖರ್ಗೆ ಮತ್ತು ನಾವು ಭೇಟಿಯಾಗಿ ಮೊದಲು ಜಮ್ಮುವಿಗೆ ಬರಬೇಕು ಎಂದು ನಿರ್ಧರಿಸಿದ್ದೆವು.

ನಾವು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮತ್ತು ಭಾರತದ ಪ್ರತಿ ರಾಜ್ಯದ ಜನರಿಗೆ ಈ ಸಂದೇಶವನ್ನು ನೀಡಲು ಬಯಸುತ್ತೇವೆ, ನಮಗೆ ಜಮ್ಮು ಮತ್ತು ಕಾಶ್ಮೀರದ ಜನರ ಪ್ರಾತಿನಿಧ್ಯ ಮತ್ತು ರಾಜ್ಯತ್ವವು ಅತ್ಯಂತ ಮುಖ್ಯವಾದ ವಿಷಯವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ