ಪ್ರಧಾನಿ ನರೇಂದ್ರ ಮೋದಿ(Narendra Modi) ಯವರಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಿಜೋರಾಂನ ಐಜೋಲ್ನಲ್ಲಿ ಮಾತನಾಡಿದ ಅವರು, ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದ ಬಗೆಗಿನ ಆಸಕ್ತಿಯೇ ಹೆಚ್ಚಿದ್ದಂತಿದೆ ಎಂದಿದ್ದಾರೆ. ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದೆ, ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯಕರವಾಗಿದೆ ಎಂದಿದ್ದಾರೆ.
ಸಣ್ಣ ಹಾಗೂ ಮಧ್ಯಮ ವರ್ಗದ ಕುಟುಂಬಗಳನ್ನು ಹಾಳು ಮಾಡಲು ಜಿಎಸ್ಟಿ ರಚಿಸಲಾಗಿದೆ. ಇದು ಭಾರತದ ರೈತರನ್ನು ದುರ್ಬಲಗೊಳಿಸಲು ವಿನ್ಯಾಸಗೊಳಿಸಲಾಗಿದೆ. ನೋಟು ಅಮಾನ್ಯೀಕರಣದಿಂದ ಏನಾಯಿತು ಎಂಬುದು ನಿಮಗೆ ತಿಳಿದಿದೆ ಎಂದು ಹೇಳಿದರು. ಆರ್ಥಿಕತೆ ಇನ್ನೂ ಚೇತರಿಸಿಕೊಂಡಿಲ್ಲ, ಭಾರತದ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಧಾನಿಯವರ ಕಾರ್ಯತಂತ್ರವನ್ನು ನೀವು ಅರ್ಥಮಾಡಿಕೊಳ್ಳಲು ಬಯಸಿದರೆ ಅದನ್ನು ಅದಾನಿ ಎಂದು ಒಂದೇ ಪದದಲ್ಲಿ ಸಂಕ್ಷಿಪ್ತಗೊಳಿಸಬಹುದು, ಎಲ್ಲವನ್ನೂ ಉದ್ಯಮಿಗಳಿಗೆ ಸಹಾಯ ಮಾಡುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.
ನಾನು 1986ರಲ್ಲಿ ನನ್ನ ತಂದೆಯೊಂದಿಗೆ ಇಲ್ಲಿಗೆ ಬಂದಾಗ ನನಗೆ 16 ವರ್ಷ, ಮಿಜೋರಾಂನ ಜನರು ಸೌಮ್ಯ, ದಯೆ ಕರುಣೆಯಿಂದ ತುಂಬಿದ್ದಾರೆ.
ಜನರನ್ನು ಹತ್ಯೆ ಮಾಡಲಾಗಿದೆ, ಮಹಿಳೆಯರಿಗೆ ಕಿರುಕುಳ ನೀಡಲಾಗಿದೆ ಮತ್ತು ಶಿಶುಗಳನ್ನು ಕೊಲ್ಲಲಾಗಿದೆ, ಆದರೆ ಪ್ರಧಾನಿಗೆ ಅಲ್ಲಿ ಪ್ರಯಾಣಿಸುವುದು ಮುಖ್ಯವಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಮೇ ತಿಂಗಳಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇನ್ನೂ ಮಣಿಪುರಕ್ಕೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ, ಮಣಿಪುರದಲ್ಲಿ ನಡೆದಿರುವುದು ಭಾರತದ ಕಲ್ಪನೆಯ ಮೇಲಿನ ದಾಳಿಯಾಗಿದೆ ಎಂದು ಗಾಂಧಿ ಹೇಳಿದರು. ಇದಕ್ಕೆ ವ್ಯತಿರಿಕ್ತವಾಗಿ, ಅವರು ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಈ ದೇಶದ ಪ್ರತಿಯೊಂದು ಧರ್ಮ, ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯವನ್ನು ರಕ್ಷಿಸಲಿದೆ ಎಂದರು.
ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು
40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ. ರಾಹುಲ್ ಗಾಂಧಿ ಅವರು ಸೋಮವಾರ ಐಜ್ವಾಲ್‌ನಲ್ಲಿ ಚನ್ಮರಿ ಜಂಕ್ಷನ್‌ನಿಂದ ರಾಜಭವನದವರೆಗೆ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಪಾದಯಾತ್ರೆ ನಡೆಸಿದರು. ಎರಡು ದಿನ ರಾಹುಲ್ ಮಿಜೋರಾಂನಲ್ಲಿರಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ