ತಾವು ಏನು ಧರಿಸಬೇಕೆಂಬುದನ್ನು ಹೆಣ್ಣುಮಕ್ಕಳೇ ನಿರ್ಧರಿಸಬೇಕು, ಬೇರೆ ಯಾರೂ ಅಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿ ಹೆಣ್ಣುಮಕ್ಕಳಿಗೆ ತಾವು ಏನನ್ನು ಧರಿಸಬೇಕೆಂಬುದು ಅವರ ಆಯ್ಕೆಯಾಗಿರಬೇಕೇ ಹೊರತು ಬೇರೆಯವರು ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹೇಳಿದರು.

ತಾವು ಏನು ಧರಿಸಬೇಕೆಂಬುದನ್ನು ಹೆಣ್ಣುಮಕ್ಕಳೇ ನಿರ್ಧರಿಸಬೇಕು, ಬೇರೆ ಯಾರೂ ಅಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿImage Credit source: English Jagran
Follow us
ನಯನಾ ರಾಜೀವ್
|

Updated on:Feb 27, 2024 | 9:22 AM

‘‘ತಾವು ಏನು ಧರಿಸಬೇಕೆಂಬುದನ್ನು ಹೆಣ್ಣುಮಕ್ಕಳೇ ನಿರ್ಧರಿಸಬೇಕೇ ಹೊರತು ಬೇರೆ ಯಾರೂ ಅಲ್ಲ’’ ಎಂದು ಕಾಂಗ್ರೆಸ್​(Congress) ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ನ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ. ಈ ವೇಳೆ ರಾಹುಲ್ ಅಲಿಗಢ ವಿಶ್ವವಿದ್ಯಾಲಯಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು.

ವಿದ್ಯಾರ್ಥಿಗಳೊಂದಿಗೆ ಶಿಕ್ಷಣ, ಹಕ್ಕುಗಳು, ಅಭಿವ್ಯಕ್ತಿಯಂತಹ ವಿಷಯಗಳ ಕುರಿತು ಮಾತಣಾಡಿದರು. ಈ ವೇಳೆ ವಿದ್ಯಾರ್ಥಿನಿಯೊಬ್ಬರು ರಾಹುಲ್ ಗಾಂಧಿಯವರ ಬಳಿ ‘‘ಮುಂದೆ ನೀವು ದೇಶದ ಪ್ರಧಾನಿಯಾದರೆ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಬಗ್ಗೆ ನಿಮ್ಮ ಅಭಿಪ್ರಾಯವೇನು?’’ ಎಂದು ಪ್ರಶ್ನೆ ಕೇಳಿದ್ದಾರೆ.

ಅದಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, ಹೆಣ್ಣುಮಕ್ಕಳು ಏನು ಧರಿಸಬೇಕು ಎಂಬುದನ್ನು ಅವರೇ ನಿರ್ಧರಿಸಬೇಕು ಬೇರೆ ಯಾರೋ ಅಲ್ಲ ಎಂದು ಹೇಳಿದರು.

ರಾಜಕೀಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕುರಿತು ರಾಹುಲ್ ಹೇಳಿದ್ದೇನು? ರಾಜಕೀಯ ಹಾಗೂ ವ್ಯಾಪಾರದಲ್ಲಿ ಮಹಿಳೆಯರಿಗೆ ಪೂರ್ಣ ಪ್ರಮಾಣದ ಪ್ರಾತಿನಿಧ್ಯವಿಲ್ಲ. ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಅಭ್ಯರ್ಥಿಗಳಿಗೆ ಗರಿಷ್ಠ ಅವಕಾಶಗಳನ್ನು ನೀಡಬೇಕು. ಪಕ್ಷಗಳು ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಮತ್ತಷ್ಟು ಓದಿ: ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್‌ ಸಂಘರ್ಷ: ಹಿಜಾಬ್‌ ಧರಿಸಿದ್ರೆ ಕೇಸರಿ ಶಾಲು ಎಚ್ಚರಿಕೆ

ಹಿಜಾಬ್ ವಿವಾದ ಏನು? 2022 ರ ಜನವರಿಯಲ್ಲಿ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕಾಗಿ ಕಾಲೇಜಿನ ಸಮವಸ್ತ್ರ ನೀತಿಯ ಉಲ್ಲಂಘನೆಯನ್ನು ಉಲ್ಲೇಖಿಸಿ ಪ್ರವೇಶವನ್ನು ನಿರಾಕರಿಸಿದಾಗ ಸಮಸ್ಯೆ ಉಲ್ಬಣಗೊಂಡಿತ್ತು. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ಮತ್ತು ಪ್ರತಿಭಟನೆಗೆ ಕಾರಣವಾಯಿತು.

ಬಿಜೆಪಿ ಸರ್ಕಾರವು ಅಂತಹ ನೀತಿಗಳು ಅಸ್ತಿತ್ವದಲ್ಲಿದ್ದ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸುವ ಮೂಲಕ ಪ್ರತಿಕ್ರಿಯಿಸಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಆದೇಶವನ್ನು ತಮ್ಮ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:21 am, Tue, 27 February 24