ಪ್ರಜಾಪ್ರಭುತ್ವವನ್ನು ಅವಮಾನಿಸಿದ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಸಂಸತ್ನಲ್ಲಿ ಬಿಜೆಪಿ ಸಂಸದರ ಒತ್ತಾಯ
ಪ್ರಮುಖ ವಿರೋಧ ಪಕ್ಷದ ನಾಯಕ ವಿದೇಶಕ್ಕೆ ಹೋಗಿ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಾರೆ. ಅವರು ಭಾರತದ ಜನರನ್ನು ಮತ್ತು ಸಂಸತ್ತನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಸಂಸದರು ಸಂಸತ್ತಿನಲ್ಲಿ ಮಾತನಾಡಬಹುದು. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು' ಎಂದು ಗೋಯಲ್ ಹೇಳಿದ್ದಾರೆ.
ಸಂಸತ್ನ ಬಜೆಟ್ ಅಧಿವೇಶನದ (Budget session) ಎರಡನೇ ಭಾಗ ಸೋಮವಾರ ಗದ್ದಲದಿಂದ ಪ್ರಾರಂಭವಾಯಿತು, ಬಿಜೆಪಿ (BJP) ಲಂಡನ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣವನ್ನು ಟೀಕಿಸಿದ್ದು, ವಿದೇಶಿ ನೆಲದಲ್ಲಿ ಭಾರತೀಯ ಸಂಸತ್ ಮತ್ತು ಪ್ರಜಾಪ್ರಭುತ್ವವನ್ನು ಅವಮಾನಿಸಿದ ಆರೋಪಕ್ಕಾಗಿ ಕಾಂಗ್ರೆಸ್ ನಾಯಕ ಕ್ಷಮೆಯಾಚಿಸಬೇಕು ಎಂದು ಪಟ್ಟುಹಿಡಿದಿದೆ. ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಗಳನ್ನು ಈ ಸದನದ ಎಲ್ಲಾ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಭಾಷಣವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. ಇದಾದ ಸ್ವಲ್ಪ ಸಮಯದ ನಂತರ, ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಪಿಯೂಷ್ ಗೋಯಲ್ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದರಿಂದ ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಪ್ರಮುಖ ವಿರೋಧ ಪಕ್ಷದ ನಾಯಕ ವಿದೇಶಕ್ಕೆ ಹೋಗಿ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಾರೆ. ಅವರು ಭಾರತದ ಜನರನ್ನು ಮತ್ತು ಸಂಸತ್ತನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಸಂಸದರು ಸಂಸತ್ತಿನಲ್ಲಿ ಮಾತನಾಡಬಹುದು. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು’ ಎಂದು ಗೋಯಲ್ ಹೇಳಿದ್ದಾರೆ.
ಇತ್ತೀಚೆಗೆ ಲಂಡನ್‌ನಲ್ಲಿ ಬ್ರಿಟಿಷ್ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳು ಆಗಾಗ್ಗೆ ಆಫ್ ಮಾಡಲಾಗುತ್ತದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು . ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಹಲವು ಆರೋಪಗಳನ್ನು ಮಾಡಿದ್ದರು. ಕೇಂಬ್ರಿಡ್ಜ್‌ನಲ್ಲಿಯೂ ರಾಹುಲ್, ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದ್ದರು.
We demand that Rahul Gandhi comes to the Parliament and offers an apology to the people of the nation and the House: Union minister & BJP leader Piyush Goyal https://t.co/Z9P2i8He95 pic.twitter.com/ykpn2eoJZJ
— ANI (@ANI) March 13, 2023
ಇದಕ್ಕೂ ಮುನ್ನ ಸೋಮವಾರ ಬೆಳಗ್ಗೆ, 16 ವಿರೋಧ ಪಕ್ಷಗಳ ನಾಯಕರು ಸಂಸತ್ ಭವನದಲ್ಲಿ ಸಭೆ ಸೇರಿ ಬಜೆಟ್ ಅಧಿವೇಶನದ ಎರಡನೇ ಭಾಗದ ಆರಂಭಕ್ಕೂ ಮುನ್ನ ಹಲವು ವಿಷಯಗಳಲ್ಲಿ ಸರ್ಕಾರವನ್ನು ಮೂಲೆಗುಂಪು ಮಾಡಲು ಜಂಟಿ ಕಾರ್ಯತಂತ್ರವನ್ನು ರೂಪಿಸಿದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ವಿಪಕ್ಷ ನಾಯಕರು ಸಭೆ ನಡೆಸಿ, ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಅದಾನಿ ವಿಷಯವನ್ನು ಪ್ರಸ್ತಾಪಿಸಲು ನಿರ್ಧರಿಸಿದರು.
ಕಾಂಗ್ರೆಸ್, ಡಿಎಂಕೆ, ಜೆಡಿಯು, ಎಎಪಿ, ಸಿಪಿಐ (ಎಂ), ಸಿಪಿಐ, ಕೇರಳ ಕಾಂಗ್ರೆಸ್, ಆರ್‌ಎಲ್‌ಡಿ, ಎನ್‌ಸಿಪಿ, ನ್ಯಾಷನಲ್ ಕಾನ್ಫರೆನ್ಸ್, ಐಯುಎಂಎಲ್, ಎಸ್‌ಎಸ್ (ಉದ್ಧವ್), ಎಂಡಿಎಂಕೆ, ಆರ್‌ಎಸ್‌ಪಿ, ಆರ್‌ಜೆಡಿ ಮತ್ತು ಜೆಎಂಎಂ ಈ ಸಭೆಯಲ್ಲಿ ಭಾಗವಹಿಸಿತ್ತು ಎಎಪಿ ಮತ್ತು ಬಿಆರ್‌ಎಸ್ ಸೇರಿದಂತೆ ಹಲವು ನಾಯಕರು ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಚರ್ಚಿಸಲು ಉಭಯ ಸದನಗಳಲ್ಲಿ ಮುಂದೂಡಿಕೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:Mumbai: ಸಿಗ್ನಲ್ ಜಂಪ್ ಮಾಡಿದ್ರು ಎಂದು ತಡೆದಿದ್ದಕ್ಕೆ, ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಯುವಕರು
ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಅನುದಾನದ ಬೇಡಿಕೆ ಮತ್ತು ಕೇಂದ್ರ ಬಜೆಟ್ ಅಂಗೀಕಾರದ ಪ್ರಧಾನ ವಿಷಯಗಳಾಗಿವೆ. ದಾಖಲೆಗಳ ಪ್ರಕಾರ, ಪ್ರಸ್ತುತ ರಾಜ್ಯಸಭೆಯಲ್ಲಿ ಸುಮಾರು 26 ಮಸೂದೆಗಳು ಬಾಕಿ ಉಳಿದಿವೆ ಮತ್ತು ಲೋಕಸಭೆಯಲ್ಲಿ ಅಂಗೀಕಾರಕ್ಕಾಗಿ ಸುಮಾರು 9 ಮಸೂದೆಗಳು ಬಾಕಿ ಉಳಿದಿವೆ.ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022 ಮತ್ತು ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ, 2022 ಅನ್ನು ಕಳೆದ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು ಜಂಟಿ ಸಮಿತಿಯ ಸುಪರ್ದಿಗೆ ನೀಡಿದ್ದು ಅವುಗಳನ್ನು ಸಮಿತಿ ಪರಿಶೀಲಿಸುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ