ಸಿಕ್ಸ್​​ ಪ್ಯಾಕ್​​ನಲ್ಲಿ ಮಿಂಚಿದ ರಾಹುಲ್​ ಗಾಂಧಿ; ಫಿಟ್​ನೆಸ್​ ಟಿಪ್ಸ್​ ಕೇಳಿದ ಸೆಲೆಬ್ರಿಟಿಗಳು

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್​ಡೌನ್​ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್​ಗಳು ಬಂದ್​ ಆಗಿದ್ದವು. ಆದರೆ, ಈ ಸಂದರ್ಭದಲ್ಲೂ ರಾಹುಲ್​ ಗಾಂಧಿ ಜಿಮ್​ ಬಿಟ್ಟಿಲ್ಲ.

ಸಿಕ್ಸ್​​ ಪ್ಯಾಕ್​​ನಲ್ಲಿ ಮಿಂಚಿದ ರಾಹುಲ್​ ಗಾಂಧಿ; ಫಿಟ್​ನೆಸ್​ ಟಿಪ್ಸ್​ ಕೇಳಿದ ಸೆಲೆಬ್ರಿಟಿಗಳು

Updated on: Feb 27, 2021 | 8:20 PM

ಭಾರತದ ಬಹುತೇಕ ರಾಜಕಾರಣಿಗಳಿಗೆ ಫಿಟ್​ನೆಸ್​ ಕೊರತೆ ಇದೆ ಎಂಬುದು ಜನಸಾಮಾನ್ಯರ ಅಭಿಪ್ರಾಯ. ಇದೇ ಕಾರಣಕ್ಕೆ, ರಾಜಕಾರಣಿಗಳು ಎಂದಾಕ್ಷಣ ಜನರಿಗೆ ನೆನಪಿಗೆ ಬರೋದು ದೊಡ್ಡದಾದ ಹೊಟ್ಟೆ, ದಢೂತಿ ದೇಹ. ಆದರೆ, ದೇಶದ ಕೆಲವೇ ಕೆಲವು ರಾಜಕಾರಣಿಗಳು ಫಿಟ್​ ಆಗಿದ್ದಾರೆ. ನಿತ್ಯ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಈ ಸಾಲಿನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ಇದ್ದಾರೆ. ಅವರ ಸಿಕ್ಸ್​ಪ್ಯಾಕ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್​ಡೌನ್​ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್​ಗಳು ಬಂದ್​ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್​ನೆಸ್​ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್​ ಗಾಂಧಿ ಜಿಮ್​ ಬಿಟ್ಟಿಲ್ಲ. ಮನೆಯಲ್ಲೇ ಅವರು ಜಿಮ್​ ಮಾಡಿದ್ದಾರೆ. ಇತ್ತೀಚೆಗೆ ವೈರಲ್​ ಆದ ಫೋಟೋ ಇದಕ್ಕೆ ಸಾಕ್ಷಿ.

ಇತ್ತೀಚೆಗೆ ರಾಹುಲ್​ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್​ ಫೋಟೋ ವೈರಲ್​ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್​ ಮಾಡಿದ್ದು, ಫಿಟ್​ನೆಸ್​ ಟಿಪ್ಸ್​ ಕೇಳಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿ ಮತ್ತೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಅಲಂಕರಿಸಲಿ: ಠರಾವು ಅಂಗೀಕರಿಸಿದ ದೆಹಲಿ ಕಾಂಗ್ರೆಸ್​ ಘಟಕ

Published On - 8:19 pm, Sat, 27 February 21

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us