ಸಂಸತ್​ನಲ್ಲಿ ಮಾತನಾಡೋಕೆ ಬಿಡಲ್ಲ, ಟ್ವಿಟರ್​ನಲ್ಲೂ ಅವಕಾಶ ಇಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ‌ ದಾಳಿ: ರಾಹುಲ್​ ಗಾಂಧಿ

ಟ್ವಿಟರ್ ನಿಷ್ಪಕ್ಷಪಾತ, ವಸ್ತುನಿಷ್ಠ ವೇದಿಕೆಯಾಗಿ ಇಲ್ಲ. ಅದು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ನಮ್ಮ ರಾಜಕೀಯವನ್ನು ನಾವೇ ನಿರ್ಧರಿಸಬೇಕೋ ಬೇರೆಯವರೋ? ಎಂದು ಭಾರತೀಯರಾಗಿ ನಾವು ಪ್ರಶ್ನೆ ಕೇಳಬೇಕು: ರಾಹುಲ್​ ಗಾಂಧಿ

ಸಂಸತ್​ನಲ್ಲಿ ಮಾತನಾಡೋಕೆ ಬಿಡಲ್ಲ, ಟ್ವಿಟರ್​ನಲ್ಲೂ ಅವಕಾಶ ಇಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ‌ ದಾಳಿ: ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
Follow us
TV9 Web
| Updated By: Skanda

Updated on: Aug 13, 2021 | 12:06 PM

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಹಾಗೂ ಕೆಲ ನಾಯಕರ ವೈಯಕ್ತಿಕ ಖಾತೆಯನ್ನು ಟ್ವಿಟರ್​ (Twitter) ತಾತ್ಕಾಲಿಕವಾಗಿ ತಡೆಹಿಡಿದಿರುವುದನ್ನು ಈಗಾಗಲೇ ಕಾಂಗ್ರೆಸ್​ (Congress) ಖಂಡಿಸಿದೆ. ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ನಮ್ಮ ರಾಜಕೀಯ (Politics) ಪ್ರಕ್ರಿಯೆಯಲ್ಲಿ ಟ್ವಿಟರ್‌ನಿಂದ ಹಸ್ತಕ್ಷೇಪ ಆಗುತ್ತಿದೆ. ನನ್ನ‌ ಟ್ವಿಟರ್ ಖಾತೆಯನ್ನು ಬಂದ್ ಮಾಡಲಾಗಿದೆ. ಕಂಪನಿಯಿಂದ ನಮ್ಮ ರಾಜಕೀಯ ನಿರ್ಧರಿಸುವ ಪ್ರಯತ್ನ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಟ್ವಿಟರ್ ವಿರುದ್ಧ ಕೈ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು, ರಾಜಕಾರಣಿಯಾಗಿ ನಾನು ಇದನ್ನು ಇಷ್ಟಪಡುವುದಿಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ‌ ದಾಳಿ ಎಂದು ಹೇಳಿದ್ದಾರೆ. ನಮಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಭರವಸೆ ಬೆಳಕಾಗಿ ಟ್ವಿಟರ್ ಇದೆ ಎಂದು ಭಾವಿಸಿದ್ದೆ. ಆದರೆ ಟ್ವಿಟರ್ ಆ ರೀತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವಿಟರ್ ನಿಷ್ಪಕ್ಷಪಾತ, ವಸ್ತುನಿಷ್ಠ ವೇದಿಕೆಯಾಗಿ ಇಲ್ಲ. ಅದು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿದೆ. ನಮ್ಮ ರಾಜಕೀಯವನ್ನು ನಾವೇ ನಿರ್ಧರಿಸಬೇಕೋ ಬೇರೆಯವರೋ? ಎಂದು ಭಾರತೀಯರಾಗಿ ನಾವು ಪ್ರಶ್ನೆ ಕೇಳಬೇಕು. ಬ್ಯುಸಿನೆಸ್ ನಡೆಸುವ ಕಂಪನಿಯು ನಮ್ಮ ರಾಜಕೀಯವನ್ನು ನಿರ್ಧರಿಸಲು ಯತ್ನಿಸುತ್ತಿರುವುದನ್ನು ಒಪ್ಪಲಾಗದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟ್ವಿಟರ್ ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ‌ಹಸ್ತಕ್ಷೇಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ನಮಗೆ ಪಾರ್ಲಿಮೆಂಟ್​ನಲ್ಲಿ ಮಾತನಾಡಲು ಅವಕಾಶ ಕೊಡದ ಸರ್ಕಾರದ ನಡೆಗೂ ಇದಕ್ಕೂ ವ್ಯತ್ಯಾಸ ಇಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

(Rahul Gandhi slams twitter and Union Government says they are destroying Democracy)

ಇದನ್ನೂ ಓದಿ: ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​ 

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್