ಸಿಇಸಿ ಜ್ಞಾನೇಶ್ ಕುಮಾರ್ ರಕ್ಷಣೆಗೆ ನಿಂತವರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ದೆಹಲಿ ಜೈಲಾಗಿ ಬದಲಾಗಿದೆ ಎಂದ ಕಾಂಗ್ರೆಸ್ ನಾಯಕ

ಮತಗಳ್ಳತನ ಆರೋಪಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿ ಒಕ್ಕೂಟ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸಿದೆ. ದೆಹಲಿಯನ್ನು 'ಜೈಲು' ಮತ್ತು 'ಕೋಟೆ'ಯನ್ನಾಗಿ ಮಾಡಲಾಗಿದೆ ಎಂದು ರಾಹುಲ್ ವಾಗ್ದಾಳಿ ನಡೆಸಿದರು. ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳ ಬಗ್ಗೆ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.

ಸಿಇಸಿ ಜ್ಞಾನೇಶ್ ಕುಮಾರ್ ರಕ್ಷಣೆಗೆ ನಿಂತವರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ದೆಹಲಿ ಜೈಲಾಗಿ ಬದಲಾಗಿದೆ ಎಂದ ಕಾಂಗ್ರೆಸ್ ನಾಯಕ
ರಾಹುಲ್ ಗಾಂಧಿ

Updated on: Oct 12, 2026 | 1:03 PM

ನವದೆಹಲಿ, ಅಕ್ಟೋಬರ್ 12: ಮತಗಳ್ಳತನದ ಆರೋಪ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿ ಒಕ್ಕೂಟದ ನಾಯಕರು ಇಂದು ಸುಪ್ರೀಂ ಕೋರ್ಟ್‌ನತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಮೆರವಣಿಗೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯನ್ನು ಕೋಟೆಯಂತೆ ಮಾಡಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಲು ಬರುವ ಜನರನ್ನು ರೈಲು ಮತ್ತು ಬಸ್‌ಗಳಲ್ಲಿ ತಡೆಯಲಾಗುತ್ತಿದೆ. ರಾಜಧಾನಿಯನ್ನು ಜೈಲಿನಂತೆ ಮಾಡಲಾಗಿದೆ ಎಂದು ಅವರು ಟೀಕಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಗಂಭೀರ ಕಳವಳವಿದೆ ಎಂದು ಹೇಳಿದ ರಾಹುಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ತಾವು ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾಗಿ ತಿಳಿಸಿದರು. ಇಂದು ಇಂಡಿ ಒಕ್ಕೂಟದ ನಾಯಕರು ಸುಪ್ರೀಂ ಕೋರ್ಟ್‌ಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ ಎಂದರು.

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ತಡೆ, ಮತಗಳ್ಳತನದ ಆರೋಪಗಳ ಪರಿಶೀಲನೆ ಮತ್ತು ಜ್ಞಾನೇಶ್ ಕುಮಾರ್ ರಾಜೀನಾಮೆ ವಿರೋಧ ಪಕ್ಷಗಳ ಪ್ರಮುಖ ಬೇಡಿಕೆಗಳಾಗಿವೆ. ಆದರೆ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ವಿರೋಧ ಪಕ್ಷದ ನಾಯಕರ ಭೇಟಿಯ ಮನವಿಯನ್ನು ನಿರಾಕರಿಸಿದ್ದು, ವಿಷಯವನ್ನು ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಮುಂದುವರಿಸುವಂತೆ ಸೂಚಿಸಿದ್ದಾರೆ.

ಪೋಸ್ಟ್​

 

ದೆಹಲಿ ಜೈಲಾಗಿ ಬದಲಾಗಿದೆ

“ಕಳೆದ ಹಲವು ದಿನಗಳಿಂದ ಮತ ಕಳ್ಳತನದ ವಿರುದ್ಧ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಸರ್ಕಾರ ಜನಸಾಮಾನ್ಯರನ್ನು ರೈಲು ಮತ್ತು ಬಸ್ಸುಗಳಲ್ಲಿ ತಡೆದು ದೆಹಲಿ ಪ್ರವೇಶಿಸದಂತೆ ತಡೆಯುತ್ತಿದೆ. ರಾಜಧಾನಿಯನ್ನು ಒಂದು ಅಭೇದ್ಯ ಕೋಟೆ ಹಾಗೂ ಜೈಲಿನಂತೆ ಪರಿವರ್ತಿಸಲಾಗಿದೆ”  ಎಂದರು.

ಜ್ಞಾನೇಶ್ ಕುಮಾರ್ ಅವರ ನಿಯಂತ್ರಕ ಯಾರು?:

“ಬೀದಿಗಳಲ್ಲಿ 20,000 ರಿಂದ 30,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಸರ್ಕಾರ ದೊಡ್ಡ ತಪ್ಪು ಮಾಡುತ್ತಿದೆ. ಮೋದಿ ಸರ್ಕಾರ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಎಷ್ಟು ಪ್ರಯತ್ನಿಸುತ್ತದೆಯೋ, ಅಷ್ಟೇ ವೇಗವಾಗಿ ನಾವು ಆತನ ಹಿಂದಿರುವ ಅಸಲಿ ನಿಯಂತ್ರಕರನ್ನು (Controllers) ತಲುಪಲಿದ್ದೇವೆ. ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಮುಕ್ತ ಸ್ವಾತಂತ್ರ್ಯ ನೀಡಿ, ಯುವ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಮಾಡಲು ಪೊಲೀಸರಿಗೆ ಆದೇಶ ನೀಡಲಾಗುತ್ತಿರುವುದರಿಂದ ಭದ್ರತಾ ಸಿಬ್ಬಂದಿಯೇ ಅಸಮಾಧಾನಗೊಂಡಿದ್ದಾರೆ” ಎಂದು ಆರೋಪಿಸಿದರು.

ಮತ್ತಷ್ಟು ಓದಿ: ಸುಪ್ರೀಂ ಕೋರ್ಟ್‌ಗೆ ನಾಳೆ ವಿಪಕ್ಷಗಳ ಪಾದಯಾತ್ರೆ; ಎಸ್‌ಐಆರ್, ಚುನಾವಣಾ ಆಯುಕ್ತರ ವಿರುದ್ಧ ಸಿಜೆಐ ಮಧ್ಯಸ್ಥಿಕೆಗೆ ಮನವಿ

ಶೇ. 50ರಷ್ಟು ಪೊಲೀಸರು ನಮ್ಮ ಪರವಾಗಿದ್ದಾರೆ

ಪೊಲೀಸ್ ಇಲಾಖೆಯ ಅರ್ಧದಷ್ಟು ಸಿಬ್ಬಂದಿ ನಮ್ಮ ಹೋರಾಟ ನ್ಯಾಯಯುತವಾಗಿದೆ ಎಂದು ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ದೇಶದ ಸಾಮಾನ್ಯ ಜನತೆ, ಪೊಲೀಸರು, ಸಿಆರ್‌ಪಿಎಫ್ ಮತ್ತು ಐಟಿಬಿಪಿ ಯೋಧರು ಒಂದೆಡೆಯಿದ್ದರೆ, ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯೋಗದ ಕೆಲವೇ ವ್ಯಕ್ತಿಗಳು ಮತ ಕಳ್ಳತನ ನಡೆಸಿ ದೇಶವನ್ನು ಹೈಜಾಕ್ ಮಾಡುತ್ತಿದ್ದಾರೆ ಎಂದು ನೇರವಾಗಿ ಹೆಸರಿಸಿದರು.

ಪೋಸ್ಟ್​

ಸುಪ್ರೀಂ ಕೋರ್ಟ್‌ನಲ್ಲಿ ಜಂಟಿ ಅರ್ಜಿ ಸಲ್ಲಿಕೆ

ಭಾರತೀಯ ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಚುನಾವಣಾ ಪಾರದರ್ಶಕತೆಯ ಉಲ್ಲಂಘನೆಯ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ಮುಖ್ಯ ನ್ಯಾಯಮೂರ್ತಿಗಳಿಗೆ (CJI) ಪತ್ರ ಬರೆದಿದ್ದೆವು. ಸಿಜೆಐ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸುವಂತೆ ನಮಗೆ ನಿರ್ದೇಶಿಸಿದ್ದಾರೆ. ಹೀಗಾಗಿ ಇಂದು ‘ಇಂಡಿ’ ಮೈತ್ರಿಕೂಟದ ಎಲ್ಲಾ ನಾಯಕರು ಒಟ್ಟಾಗಿ ಸುಪ್ರೀಂ ಕೋರ್ಟ್‌ಗೆ ತೆರಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಪೋಸ್ಟ್

ಏನಿದು ವಿವಾದ?: ಚುನಾವಣಾ ಆಯೋಗವು ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಮತ್ತು ವಿದ್ಯುನ್ಮಾನ ಅಂಚೆ ಮತಪತ್ರ ವ್ಯವಸ್ಥೆಯಲ್ಲಿ ಮತಗಳ ತಿರುಚುವಿಕೆ ನಡೆದಿದೆ ಎಂದು ವಿರೋಧ ಪಕ್ಷಗಳು ನಿರಂತರವಾಗಿ ಬೀದಿಗಿಳಿದು ಪ್ರತಿಭಟಿಸುತ್ತಿವೆ.

ದೆಹಲಿಯಲ್ಲಿ ನಾಯಕರ ಜಮಾವಣೆ: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಪ್ರಮುಖ ವಿಪಕ್ಷ ನಾಯಕರು ಸುಪ್ರೀಂ ಕೋರ್ಟ್ ಮೆರವಣಿಗೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯಲ್ಲಿ ಒಗ್ಗೂಡಿದ್ದಾರೆ.

ಭದ್ರತಾ ಬಿಗಿಬಂಧ: ಮೆರವಣಿಗೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಹಾಗೂ ಸಂಸತ್ ಭವನದ ಸುತ್ತಮುತ್ತ ಹೆಚ್ಚುವರಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಸೆಕ್ಷನ್ 163ರ ಅಡಿಯಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಯಲ್ಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us