ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು

1995ರ ವಕ್ಫ್ ಕಾಯಿದೆಗೆ ತಿದ್ದುಪಡಿ ತರುವ ವಕ್ಫ್ (ತಿದ್ದುಪಡಿ) ಮಸೂದೆ, 2024ರ ಚರ್ಚೆಯ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಹೇಗೆ ಅಪಹಾಸ್ಯ ಮಾಡಿದ್ದಾರೆ ಎಂಬುದನ್ನು ತೋರಿಸುವ ವೀಡಿಯೊಗಳು ವೈರಲ್ ಆಗಿವೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು
ರಾಹುಲ್ ಗಾಂಧಿ ನಿದ್ರೆ
Follow us
ಸುಷ್ಮಾ ಚಕ್ರೆ
|

Updated on: Aug 08, 2024 | 9:27 PM

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿರುವಾಗ ನಿದ್ದೆಗೆ ಜಾರಿದ್ದಾರೆ. ಈ ಕುರಿತಾದ ಫೋಟೋಗಳು, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಚರ್ಚೆಯ ಸಮಯದಲ್ಲಿ ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಲೇವಡಿ ಮಾಡಿದ್ದಾರೆ.

ಬಿಜೆಪಿ ಸಂಸದರು ನಗುತ್ತಾ ವಿಪಕ್ಷದ ಸಂಸದರನ್ನು ಮೂದಲಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ನಿದ್ರಿಸುತ್ತಿರುವುದನ್ನು ಕಾಣಬಹುದು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಮಾತನಾಡುತ್ತಿರುವುದು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರ ಪಕ್ಕದಲ್ಲಿ ಕುಳಿತಿರುವುದನ್ನು ವೀಡಿಯೊ ತೋರಿಸಿದೆ.

ಕಿರಣ್ ರಿಜಿಜು ಮಾತನಾಡುತ್ತಿದ್ದಂತೆ, ಗಿರಿರಾಜ್ ಸಿಂಗ್ ಮತ್ತು ಕಾಂಗ್ರೆಸ್ ಸಂಸದರು ನಿದ್ದೆಗೆ ಜಾರಿದ್ದಾರೆ.

ಇದನ್ನೂ ಓದಿ: Video: ಖುಷಿಯಿಂದ ಡಾನ್ಸ್​​​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಕುಸಿದು ಬಿದ್ದು ಸಾವು; ವಿಡಿಯೋ ಇಲ್ಲಿದೆ ನೋಡಿ

ಇದ್ದಕ್ಕಿದ್ದಂತೆ, ಭೂಪೇಂದ್ರ ಯಾದವ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ಕಿರಣ್ ರಿಜಿಜು ಪಕ್ಕದಲ್ಲಿ ಕುಳಿತಿರುವ ಬಿಜೆಪಿ ಸಂಸದರು ನಿದ್ರಿಸುತ್ತಿರುವವರ ಕಡೆ ಕೈ ತೋರಿಸಿ ನಗುತ್ತಾರೆ. “ಅದಕ್ಕಾಗಿಯೇ ನಾನು ನಿಮಗೆ ನಿದ್ದೆ ಬರುವಂತೆ ಮಾಡುವುದರಿಂದ ಮಧ್ಯೆ ಮಾತನಾಡಬೇಡಿ ಅಥವಾ ಪದೇ ಪದೇ ಅಡ್ಡಿಪಡಿಸಬೇಡಿ ಎಂದು ಹೇಳುತ್ತೇನೆ” ಎಂದು ಕಿರಣ್ ರಿಜಿಜು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್