ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಭೀಕರ ಘಟನೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಆಕೆಯ ವಿರುದ್ಧದ ಕ್ರೂರ ಮತ್ತು ಅಮಾನವೀಯ ಕೃತ್ಯದ ಪದರಗಳು ಬಹಿರಂಗವಾಗುತ್ತಿರುವ ರೀತಿಯಲ್ಲಿ, ವೈದ್ಯರ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್  ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 14, 2024 | 5:41 PM

ದೆಹಲಿ ಆಗಸ್ಟ್ 14: ಕೋಲ್ಕತ್ತಾದಲ್ಲಿ (Kolkata) ಕಿರಿಯ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದು, ದೇಶಾದ್ಯಂತ ವೈದ್ಯಕೀಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಘಟನೆಯ ನಂತರದ ಇದೇ ಮೊದಲ ಬಾರಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿಯವರು ಪ್ರಕರಣದ ನಿರ್ವಹಣೆಯನ್ನು ಟೀಕಿಸಿದ್ದು, ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿನ ಸುರಕ್ಷತಾ ಕ್ರಮಗಳನ್ನು ಪ್ರಶ್ನಿಸಿದರು.

ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಭೀಕರ ಘಟನೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಆಕೆಯ ವಿರುದ್ಧದ ಕ್ರೂರ ಮತ್ತು ಅಮಾನವೀಯ ಕೃತ್ಯದ ಪದರಗಳು ಬಹಿರಂಗವಾಗುತ್ತಿರುವ ರೀತಿಯಲ್ಲಿ, ವೈದ್ಯರ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಭೀಕರ ಘಟನೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಆಕೆಯ ವಿರುದ್ಧದ ಕ್ರೂರ ಮತ್ತು ಅಮಾನವೀಯ ಕೃತ್ಯದ ಪದರಗಳು ಬಹಿರಂಗವಾಗುತ್ತಿರುವ ರೀತಿ, ವೈದ್ಯರ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಭೀಕರ ಘಟನೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಆಕೆಯ ವಿರುದ್ಧದ ಕ್ರೂರ ಮತ್ತು ಅಮಾನವೀಯ ಕೃತ್ಯ ಬಹಿರಂಗವಾಗುತ್ತಿರುವ ರೀತಿಯಲ್ಲಿ, ವೈದ್ಯರ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಆರೋಪಿಗಳನ್ನು ರಕ್ಷಿಸುವ ಆಪಾದಿತ ಪ್ರಯತ್ನಗಳ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು “ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ”

“ವೈದ್ಯಕೀಯ ಕಾಲೇಜಿನಂತಹ ಸ್ಥಳದಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ, ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಅಧ್ಯಯನಕ್ಕಾಗಿ ಹೊರಗೆ ಕಳುಹಿಸುವುದು ಹೇಗೆ ಎಂದು ಯೋಚಿಸಲು ಈ ಘಟನೆಯು ನಮ್ಮನ್ನು ಒತ್ತಾಯಿಸಿದೆ. ನಿರ್ಭಯಾ ಪ್ರಕರಣದ ನಂತರ ಮಾಡಿದ ಕಟ್ಟುನಿಟ್ಟಿನ ಕಾನೂನುಗಳು ಇಂತಹ ಅಪರಾಧಗಳನ್ನು ತಡೆಗಟ್ಟುವಲ್ಲಿ ಏಕೆ ವಿಫಲವಾಗಿವೆ? ಎಂದು ರಾಹುಲ್ ಕೇಳಿದ್ದಾರೆ.

ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಘಟನೆಗಳನ್ನು ಪರಿಹರಿಸಲು ರಾಷ್ಟ್ರೀಯ ಸಂವಾದ ಮತ್ತು ಕಟ್ಟು ನಿಟ್ಟಿನ ಕ್ರಮಗಳನ್ನು ಗಾಂಧಿ ಒತ್ತಾಯಿಸಿದರು.

“ಹಾಥರಸ್​​ನಿಂದ ಉನ್ನಾವ್‌ವರೆಗೆ ಮತ್ತು ಕಥುವಾದಿಂದ ಕೋಲ್ಕತ್ತಾದವರೆಗೆ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ವಿರುದ್ಧದ ಘಟನೆಗಳ ಬಗ್ಗೆ ಪ್ರತಿ ಪಕ್ಷ, ಸಮಾಜದ ಪ್ರತಿಯೊಂದು ವರ್ಗವು ಗಂಭೀರ ಚರ್ಚೆಗಳನ್ನು ನಡೆಸಬೇಕು ಮತ್ತು ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕು.”

ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಎದೆಯ ವಿಭಾಗದ ಸೆಮಿನಾರ್ ಹಾಲ್‌ನಲ್ಲಿ ತೀವ್ರ ಗಾಯದ ಗುರುತುಗಳೊಂದಿಗೆ ಸ್ನಾತಕೋತ್ತರ ತರಬೇತಿ ವೈದ್ಯರ ಶವ ಶುಕ್ರವಾರ ಪತ್ತೆಯಾಗಿದೆ. ಪ್ರಾಥಮಿಕ ಶವಪರೀಕ್ಷೆ ವರದಿಯು ಆಕೆಯನ್ನು ಹಿಂಸಾತ್ಮಕ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ ಎಂದು ಸೂಚಿಸಿದೆ.

ಇದನ್ನೂ ಓದಿ: Doda Encounter: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ವೇಳೆ ಸೇನಾ ಕ್ಯಾಪ್ಟನ್ ಹುತಾತ್ಮ

ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಈ ಪ್ರಕರಣವನ್ನು ಈಗ ಕಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ. ಮಂಗಳವಾರ, ಪಶ್ಚಿಮ ಬಂಗಾಳ ವೈದ್ಯರ ವೇದಿಕೆಯು ಸಿಬಿಐಗೆ ಪತ್ರ ಬರೆದಿದ್ದು, ಅಪರಾಧ ನಡೆದ ಸ್ಥಳದ ಬಳಿ ನವೀಕರಣ ಕಾರ್ಯವನ್ನು ನಡೆಸುವ ಮೂಲಕ ಸಾಕ್ಷ್ಯವನ್ನು ತಿರುಚಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Wed, 14 August 24

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM