ಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚನೆ

ರಾಹುಲ್ ಗಾಂಧಿ ಆರೋಪವನ್ನು ವೀರ್ ಸಾವರ್ಕರ್ ಮೊಮ್ಮಗ ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ನಿರಾಕರಿಸಿದ ಸತ್ಯಕಿ ಸಾವರ್ಕರ್ ತಮ್ಮ ಆರೋಪಗಳನ್ನು "ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ" ಎಂದು ಹೇಳಿದ್ದಾರೆ. ಆರೋಪದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದರೆ, ರಾಹುಲ್ ಗಾಂಧಿ ಅವರ ಹೇಳಿಕೆಯಲ್ಲಿ ಅಂತಹ ಯಾವುದೇ ಸತ್ಯವಿಲ್ಲ ಎಂದು ಆರಂಭಿಕ ತನಿಖೆಯಲ್ಲಿ ಕಂಡುಬಂದಿದೆ.

ಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚನೆ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Oct 05, 2024 | 1:47 PM

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್ (Vinayak Damodar Savarkar) ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸಮನ್ಸ್ ನೀಡಿದೆ. ಅಕ್ಟೋಬರ್ 23 ರಂದು ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಹಿಂದೆ ಹಿಂದುತ್ವದ ಐಕಾನ್ ವೀರ್ ಸಾವರ್ಕರ್ ವಿರುದ್ಧ ಕಾಂಗ್ರೆಸ್ ನಾಯಕ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ವೀರ್ ಸಾವರ್ಕರ್ ಅವರು ತಮ್ಮ ಸ್ನೇಹಿತರೊಂದಿಗೆ ಮುಸ್ಲಿಂ ವ್ಯಕ್ತಿಯನ್ನು ಥಳಿಸಿರುವ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಸಾವರ್ಕರ್ ಅವರು “ಹಿಂಸಾಚಾರವನ್ನು ನಡೆಸಲು ಸಂತೋಷವಾಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ರಾಹುಲ್ ಗಾಂಧಿ ಆರೋಪವನ್ನು ವೀರ್ ಸಾವರ್ಕರ್ ಮೊಮ್ಮಗ ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ನಿರಾಕರಿಸಿದ ಸತ್ಯಕಿ ಸಾವರ್ಕರ್ ತಮ್ಮ ಆರೋಪಗಳನ್ನು “ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ” ಎಂದು ಹೇಳಿದ್ದಾರೆ. ಆರೋಪದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದರೆ, ರಾಹುಲ್ ಗಾಂಧಿ ಅವರ ಹೇಳಿಕೆಯಲ್ಲಿ ಅಂತಹ ಯಾವುದೇ ಸತ್ಯವಿಲ್ಲ ಎಂದು ಆರಂಭಿಕ ತನಿಖೆಯಲ್ಲಿ ಕಂಡುಬಂದಿದೆ.

ಸಾವರ್ಕರ್ ಅವರನ್ನು ಹಲವಾರು ವರ್ಷಗಳಿಂದ ರಾಹುಲ್ ಗಾಂಧಿ ಪದೇ ಪದೇ ಮಾನಹಾನಿ ಮತ್ತು ನಿಂದನೆ ಮಾಡುತ್ತಿದ್ದಾರೆ ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. “ಅಂತಹ ಒಂದು ಸಂದರ್ಭದಲ್ಲಿ, ಮಾರ್ಚ್ 5, 2023 ರಂದು, ರಾಹುಲ್ ಗಾಂಧಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಾಗರೋತ್ತರ ಕಾಂಗ್ರೆಸ್‌ನ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಅವರು ಉದ್ದೇಶಪೂರ್ವಕವಾಗಿ ಸಾವರ್ಕರ್ ವಿರುದ್ಧ ಆರೋಪಗಳನ್ನು ಮಾಡಿದರು. ಅದು ಸುಳ್ಳು ಎಂದು ತಿಳಿದಿದ್ದರು ಸಾವರ್ಕರ್ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಅವರು ಹೀಗೆ ಮಾಡಿದ್ದಾರೆ ಎಂದು” ದೂರಿನಲ್ಲಿ ಸತ್ಯಕಿ ಸಾವರ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ನಿಧಿ ವಿರುದ್ಧ ಮಹತ್ವದ ಕಾರ್ಯಾಚರಣೆ: 5 ರಾಜ್ಯಗಳಲ್ಲಿ ಎನ್‌ಐಎ ದಾಳಿ

‘ರಾಹುಲ್ ಗಾಂಧಿ ಉಪಸ್ಥಿತಿ ಅಗತ್ಯ’

ಕಳೆದ ತಿಂಗಳು ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಲಾಗಿತ್ತು. ಜಂಟಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಅಮೋಲ್ ಶಿಂಧೆ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸತ್ಯಕಿ ಸಾವರ್ಕರ್ ಪರವಾಗಿ ವಾದ ಮಂಡಿಸುತ್ತಿರುವ ವಕೀಲ ಸಂಗ್ರಾಮ್ ಕೊಲ್ಹಟ್ಕರ್, ಕಾಂಗ್ರೆಸ್ ನಾಯಕನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದ್ದು, ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಅವರ ಉಪಸ್ಥಿತಿ ಅಗತ್ಯವಾಗಿದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ