Rahul Gandhi: ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಮನವಿ

ಸಂಸದ ರಾಹುಲ್ ಗಾಂಧಿ ಅವರನ್ನು ಸದನದಿಂದ ಅನರ್ಹಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಇಂದು ಲೋಕಸಭೆ ಸ್ಪೀಕರ್‌ಗೆ ದೂರು ಸಲ್ಲಿಸಿದ್ದಾರೆ.

Rahul Gandhi: ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಮನವಿ
ರಾಹುಲ್ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Mar 23, 2023 | 4:39 PM

ದೆಹಲಿ: ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ (Rahul Gandhi) ಅವರನ್ನು ಸದನದಿಂದ ಅನರ್ಹಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಇಂದು ಲೋಕಸಭೆ ಸ್ಪೀಕರ್‌ಗೆ ದೂರು ಸಲ್ಲಿಸಿದ್ದಾರೆ. ಗುಜರಾತ್‌ನ ಸೂರತ್‌ ನ್ಯಾಯಾಲಯವು ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನಂತರ ವಿನೀತ್ ಜಿಂದಾಲ್ ಲೋಕಸಭಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಿದೆ. ನಂತರ ಅವರಿಗೆ 30 ದಿನದ ಜಾಮೀನು ಕೂಡ ನೀಡಿದೆ. ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ವಿರುದ್ಧ 2019ರಲ್ಲಿ ಟೀಕಿಸಿದ್ದಾರೆ ಎಂದು ರಾಹುಲ್ ಗಾಂಧಿ ಅವರನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಮೇಲಿನ ನ್ಯಾಯಾಲಯದಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಅದೇ ನ್ಯಾಯಾಲಯವು 30 ದಿನಗಳವರೆಗೆ ಜಾಮೀನು ನೀಡಿರುವುದರಿಂದ ಅವರು ತಕ್ಷಣಕ್ಕೆ ಜೈಲಿಗೆ ಹೋಗುವುದಿಲ್ಲ.

ದೂರುದಾರ ವಿನೀತ್ ಜಿಂದಾಲ್ ಅವರು ಇಂದು (ಮಾರ್ಚ್ 23) ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸುವಂತೆ ಕೋರಿದರು, ಮಾರ್ಚ್ 23ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಅವರ ಉಪನಾಮದ ಹೇಳಿಕೆಗಾಗಿ ದೋಷಿ ಎಂದು ತೀರ್ಪು ನೀಡಿದ್ದಾರೆ ಕೋರ್ಟ್ ಆದೇಶವನ್ನು ನೀಡಿದೆ, ಆ ಕಾರಣದಿಂದ ಅವರನ್ನು ಸದನದಿಂದ ತಕ್ಷಣವೇ ಅನರ್ಹಗೊಳಿಸಬೇಕು ಎಂದು ಪತ್ರದ ಮೂಲಕ ಲೋಕಸಭಾ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದಾರೆ.

ಗುಜರಾತ್ ವಿಧಾನಸಭೆಯ ಶಾಸಕರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಪೂರ್ಣಗೊಳಿಸಿದ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8 (3) ರ ಪ್ರಕಾರ, ಯಾವುದೇ ಅಪರಾಧಕ್ಕೆ ತಪ್ಪಿತಸ್ಥ ಮತ್ತು ಎರಡು ವರ್ಷಕ್ಕಿಂತ ಕಡಿಮೆಯಿಲ್ಲದ ಜೈಲು ಶಿಕ್ಷೆಗೆ ಗುರಿಯಾದ ಸಂಸದ/ಶಾಸಕರನ್ನು ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹಗೊಳಿಸಲಾಗುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮೋದಿ ಸರ್​ನೇಮ್ ಬಗ್ಗೆ ಹೇಳಿದ್ದು ವ್ಯಂಗ್ಯವಾಗಿತ್ತು: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಹೇಳಿಕೆ

ಕಾಯಿದೆಯ ಸೆಕ್ಷನ್ 8(3)ರ ಯಾವುದೇ ಅಪರಾಧಕ್ಕೆ ಶಿಕ್ಷೆಗೊಳಗಾದ ಯಾವುದೇ ಸದಸ್ಯ (MP/MLA) ಮತ್ತು ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಅಪರಾಧ ನಿರ್ಣಯದ ದಿನಾಂಕದಿಂದ, ಕಾಯಿದೆಯ ಮೇಲಿನ ವಿಭಾಗದ ವ್ಯಾಖ್ಯಾನದಿಂದ ಅನರ್ಹಗೊಳಿಸಲಾಗುತ್ತದೆ ಎಂದು ವ್ಯಾಖ್ಯಾನಿಸುತ್ತದೆ. ಇಂದಿನಿಂದಲೇ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗುವುದು ಎಂದು ದೂರಿನ ಪ್ರತಿಯನ್ನು ಹೇಳಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಆದೇಶ ಹೊರಡಿಸುವಂತೆ ದೂರುದಾರರು ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ