AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್‌ನಲ್ಲಿ ನಡೆದ ಪಾಕಿಸ್ತಾನಿ ದಾಳಿಯಲ್ಲಿ ಅಪ್ಪ-ಅಮ್ಮನನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಂಡ ಸುಮಾರು 2 ಡಜನ್ ಮಕ್ಕಳನ್ನು ದತ್ತು ಪಡೆಯಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಪಾಕಿಸ್ತಾನದ ಶೆಲ್ ದಾಳಿಯಲ್ಲಿ ತಮ್ಮ ಹೆತ್ತವರಿಬ್ಬರನ್ನೂ ಅಥವಾ ಕುಟುಂಬದ ಏಕೈಕ ಜೀವನಾಧಾರವನ್ನು ಕಳೆದುಕೊಂಡ ಪೂಂಚ್‌ನ 22 ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಗಾಂಧಿ ಭರಿಸಲಿದ್ದಾರೆ. ಮಕ್ಕಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅನುವು ಮಾಡಿಕೊಡಲು ಸಹಾಯದ ಮೊದಲ ಕಂತನ್ನು ಬುಧವಾರ ಬಿಡುಗಡೆ ಮಾಡಲಾಗುವುದು.

ಪೂಂಚ್‌ನಲ್ಲಿ ನಡೆದ ಪಾಕಿಸ್ತಾನಿ ದಾಳಿಯಲ್ಲಿ ಅಪ್ಪ-ಅಮ್ಮನನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ
Rahul Gandhi In Poonch
ಸುಷ್ಮಾ ಚಕ್ರೆ
|

Updated on:Jul 29, 2025 | 2:49 PM

Share

ನವದೆಹಲಿ, ಜುಲೈ 29: ಆಪರೇಷನ್ ಸಿಂಧೂರ್ (Operation Sindoor) ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಡೆದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಅವರ ಪ್ರಕಾರ, ಪಾಕಿಸ್ತಾನದ ಶೆಲ್ ದಾಳಿಯಲ್ಲಿ ತಮ್ಮ ಹೆತ್ತವರಿಬ್ಬರನ್ನೂ ಅಥವಾ ಕುಟುಂಬದ ಏಕೈಕ ಜೀವನಾಧಾರವನ್ನು ಕಳೆದುಕೊಂಡ ಪೂಂಚ್‌ನ 22 ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಗಾಂಧಿ ಭರಿಸಲಿದ್ದಾರೆ. ಈ ಮಕ್ಕಳು ಪದವಿ ಪಡೆಯುವವರೆಗೂ ಸಹಾಯ ಮುಂದುವರಿಯಲಿದೆ ಎಂದಿದ್ದಾರೆ.

“ಪಾಕಿಸ್ತಾನಿ ಶೆಲ್ ದಾಳಿಯಲ್ಲಿ (ಮೇ 7 ಮತ್ತು 10ರ ನಡುವೆ) ಪೂಂಚ್ ಮತ್ತು ರಾಜೌರಿಯಲ್ಲಿ ಬಹಳಷ್ಟು ಜನ ಸಾವನ್ನಪ್ಪಿದ್ದಾರೆ, ಸಾಕಷ್ಟು ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿದೆ. ವಿನಾಶಕಾರಿ ಶೆಲ್ ದಾಳಿಯ ನಂತರ ರಾಹುಲ್ ಗಾಂಧಿ ಪೂಂಚ್‌ಗೆ ಭೇಟಿ ನೀಡಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು. ಅವರು ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡ ಶಾಲಾ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಲು ನಮಗೆ ಸೂಚಿಸಿದ್ದರು. ಅದಕ್ಕೆ ಅನುಗುಣವಾಗಿ ನಾವು ಅವರಿಗೆ ಪಟ್ಟಿಯನ್ನು ಸಲ್ಲಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 2008ರ ಮುಂಬೈ ದಾಳಿಯಲ್ಲಿ ಯಾವ ಕ್ರಮ ತೆಗೆದುಕೊಂಡಿರಿ?; ರಾಹುಲ್ ಗಾಂಧಿ ವಿರುದ್ಧ ಸಚಿವ ಜೈಶಂಕರ್ ವಾಗ್ದಾಳಿ

ಮೇ ತಿಂಗಳ ಆರಂಭದಲ್ಲಿ ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಿದ್ದರು. ತಮ್ಮ ಭೇಟಿಯ ಸಮಯದಲ್ಲಿ ರಾಹುಲ್ ಗಾಂಧಿ ಶೆಲ್ ದಾಳಿಯನ್ನು ಒಂದು ದೊಡ್ಡ ದುರಂತ ಎಂದು ಕರೆದಿದ್ದರು. ಇದರಲ್ಲಿ ಅನೇಕ ಜೀವಗಳು ಬಲಿಯಾಗಿವೆ ಮತ್ತು ಗಮನಾರ್ಹ ಹಾನಿ ಸಂಭವಿಸಿದೆ ಎಂದು ಅವರು ಹೇಳಿದ್ದರು. ಉಗ್ರರಿಂದ ಹಾನಿಗೊಳಗಾದ ಸ್ಥಳಗಳ ಜನರ ಕಳವಳಗಳನ್ನು ಅರ್ಥಮಾಡಿಕೊಳ್ಳಲು ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಕೇಳಿಕೊಂಡಿದ್ದಾರೆ ಎಂದು ರಾಹುಲ್ ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಹಲವಾರು ವಲಯಗಳಲ್ಲಿ ಪಾಕಿಸ್ತಾನ ಸೇನೆ ಭಾರೀ ಶೆಲ್ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆಯಿಂದ ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ಸಿಕ್ಕಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ಮತ್ತು ಡ್ರೋನ್ ದಾಳಿಯಲ್ಲಿ 28 ನಾಗರಿಕರು ಸಾವನ್ನಪ್ಪಿದ್ದು, ಅದರಲ್ಲಿ ಪೂಂಚ್ ಜಿಲ್ಲೆಯೊಂದರಲ್ಲೇ 13 ನಾಗರಿಕರು ಸಾವನ್ನಪ್ಪಿದ್ದರು. ಮೇ 7ರಂದು ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಮಿಲಿಟರಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಶೆಲ್ಲಿಂಗ್‌ನ ತೀವ್ರತೆ ಹೆಚ್ಚಾಯಿತು.

ಇದನ್ನೂ ಓದಿ: ‘ಆಧಾರರಹಿತ, ದಾರಿ ತಪ್ಪಿಸುವ ಆರೋಪ’; ರಾಹುಲ್ ಗಾಂಧಿಗೆ ಸಾಕ್ಷಿ ಸಮೇತ ಉತ್ತರ ಕೊಟ್ಟ ಚುನಾವಣಾ ಆಯೋಗ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದವು. ಇದರಲ್ಲಿ ಜೈಶ್-ಎ-ಮೊಹಮ್ಮದ್ ಭದ್ರಕೋಟೆಯಾದ ಬಹಾವಲ್ಪುರ್ ಮತ್ತು ಲಷ್ಕರ್-ಎ-ತೈಬಾದ ಬೇಸ್ ಮುರಿಡ್ಕೆ ಸೇರಿವೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರ ಹತ್ಯಾಕಾಂಡದ ಎರಡು ವಾರಗಳ ನಂತರ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:43 pm, Tue, 29 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ