ಜೂನ್ 13 ರಂದು ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 13 ರಂದು ರಾಹುಲ್ ಗಾಂಧಿ ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.

ಜೂನ್ 13 ರಂದು ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ
ರಾಹಲ್ ಗಾಂಧಿImage Credit source: India Today
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 08, 2022 | 11:01 PM

ನವದೆಹಲಿ: ನ್ಯಾಷನಲ್ ಹೆರಾಲ್ಡ್ (National Herald) ಪತ್ರಿಕೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 13 ರಂದು ರಾಹುಲ್ ಗಾಂಧಿ (Rahul Gandhi) ಇ.ಡಿ (E.D) ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನ್ಯಾಷನಲ್ ಹೆರಾಲ್ಡ್ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿಗೆ ಇ.ಡಿ ಸಮನ್ಸ್ ನೀಡಿತ್ತು. ಇಂದು (ಜೂನ್​8) ರಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ  ಹಾಜರಾಗಿರಲಿಲ್ಲ.

ಇದನ್ನು ಓದಿ: ಟ್ರಾಫಿಕ್ ಪೊಲೀಸ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ ಯುವತಿ; ಪೊಲೀಸ್​​ಗೆ ಜನರಿಂದ ಥಳಿತ

ಇ.ಡಿ ಕಚೇರಿಗೆ ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ಸಂಸದರು, ನಾಯಕರು ತೆರಳಲಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರು ಜೂನ್ 9 ರ ಗುರುವಾರ ಸಂಜೆ 4 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಲು ನಿರ್ಧರಿಸಿದ್ದಾರೆ. ಜೂನ್ 13 ರಂದು ಕಾಂಗ್ರೆಸ್ ಪಕ್ಷದ ಎಲ್ಲ ಸಂಸದರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ.  ಜೂ‌ನ್‌ 13 ರಂದು ರಾಜ್ಯಗಳ ರಾಜಧಾನಿಯಲ್ಲಿ ಪ್ರತಿಭಟನೆಗೆ ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.

ಇದನ್ನು ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್​​​ಗೆ ಜೀವ ಬೆದರಿಕೆ ಪ್ರಕರಣ: ಗ್ಯಾಂಗ್​​ಸ್ಟರ್​​​ ಲಾರೆನ್ಸ್​​​​ ಬಿಷ್ಣೋಯ್​​​ ವಿಚಾರಣೆಗಾಗಿ ದೆಹಲಿಗೆ ಬಂದ ಮುಂಬೈ ಪೊಲೀಸ್

ಜೂನ್ 2 ರಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು ಹೆಚ್ಚಿನ ಸಮಯ ಕೋರಿದ್ದರು. ಕಾಂಗ್ರೆಸ್ ನಾಯಕನಿಗೆ ಹೊಸದಾಗಿ ನೋಟಿಸ್ ಕಳುಹಿಸಲಾಗಿದ್ದು, ಜೂನ್ 13 ರಂದು ಇಡಿ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸಾವಿರಾರು ಕೋಟಿ ರೂಪಾಯಿಗಳ ಭೂಕಬಳಿಕೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದಾಗ ನ್ಯಾಷನಲ್ ಹೆರಾಲ್ಡ್ ವಿಷಯವು ಮುನ್ನೆಲೆಗೆ ಬಂದಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 10:58 pm, Wed, 8 June 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್